ಕರ್ನಾಟಕದ ಹೆಮ್ಮೆಯ ಚಾಲುಕ್ಯ ದೊರೆಯ ಮೂರ್ತಿಯನ್ನು ವಿಧಾನಸೌಧದ ಆವರಣದಲ್ಲಿಯೇ ಸ್ಥಾಪಿಸಬೇಕು. ಸಿದ್ದರಾಮಯ್ಯ

ಬಾದಾಮಿಯನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಮಹಾರಾಷ್ಟ್ರವೂ ಸೇರಿದಂತೆ ಕರ್ನಾಟಕವನ್ನು ಆಳಿದ ಇಮ್ಮಡಿ ಪುಲಿಕೇಶಿ ತನ್ನ ಚಿಂತನೆ ಮತ್ತು ಧೋರಣೆಗಳಲ್ಲಿ ಜನಪರ, ಜಾತ್ಯತೀತ ಮತ್ತು ಅಭಿವೃದ್ದಿಯ ಹರಿಕಾರನೂ ಆಗಿದ್ದ. ವಿಳಂಬವಾಗಿಯಾದರೂ ಅರ್ಹಗೌರವ ಸಲ್ಲಿಕೆಯಾಗಬೇಕು.

0
157

ಬೆಂಗಳೂರು: ಸರಣಿ ಟ್ವೀಟ್ ಗಳನ್ನು ಮಾಡಿರುವ ಮಾಜಿ ಸಿಎಂನ ಸಿದ್ದರಾಮಯ್ಯ ಇಮ್ಮಡಿ ಪುಲಿಕೇಶಿಯ ಮೂರ್ತಿಯನ್ನು ಸ್ಥಾಪಿಸಬೇಕೆಂಬ ಆಂದೋಲನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಹೆಮ್ಮೆಯ ಚಾಲುಕ್ಯ ದೊರೆಯ ಮೂರ್ತಿಯನ್ನು ವಿಧಾನಸೌಧದ ಆವರಣದಲ್ಲಿಯೇ ಸ್ಥಾಪಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ನಾಡದೊರೆ ಬಗ್ಗೆ ಇನ್ನಷ್ಟು ಅಧ್ಯಯನ ನಡೆಸಲು ಸರ್ಕಾರ ಯೋಜನೆಗಳನ್ನು ರೂಪಿಸಬೇಕು. ಕನ್ನಡದ ಅಸ್ಮಿತೆಯಾಗಿರುವ ಕನ್ನಡಿಗ ದೊರೆಯ ಸಾಧನೆಯನ್ನು ವಿಸ್ತೃತವಾಗಿ ಪಠ್ಯಪುಸ್ತಕಗಳಲ್ಲಿ ಕೂಡಾ ಸೇರಿಸಬೇಕೆಂದು ಅವರು ಸರಣಿ ಟ್ವಿಟ್ ಮಾಡಿದ್ದಾರೆ.


ambedkar image

LEAVE A REPLY

Please enter your comment!
Please enter your name here