ಮಹಾ ಪರಿನಿರ್ವಾಣ ದಿನಾಚರಣೆ; ಶ್ರೀದೇವಿ ಉತ್ಲಾಸರ ಗೌರವ ನಮನ

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನಾಚರಣೆ

0
82

ವಿಜಯಪುರ: ಹೊನ್ನುಟಗಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು. ಗ್ರಾಮದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ ಅವರ ವೃತ್ತಕ್ಕೆ ಪುಷ್ಪಾಂಜಲಿ ಸಲ್ಲಿಸಲಾಯಿತು.

ಶ್ರೀದೇವಿ ಉತ್ಲಾಸರ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ ಅವರ ಆದರ್ಶಗಳು ಪ್ರತಿಯೊಬ್ಬರಿಗೂ ಮಾರ್ಗದರ್ಶಿ, ಸಮಾನತೆಯಿಂದ ಕೂಡಿದ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿ, ಶ್ರೇಷ್ಠವಾದ ಸಂವಿಧಾನವನ್ನು ರಚಿಸಿ ಹಕ್ಕು, ಕರ್ತವ್ಯಗಳನ್ನು ನೀಡಿದ ಶ್ರೇಯಸ್ಸು ಡಾ.ಅಂಬೇಡ್ಕರ ಅವರಿಗೆ ಸಲ್ಲಬೇಕು, ಅವರ ವಿಚಾರಗಳನ್ನು ನಾವು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮಹಾದೇವಿ ಸಂಕದ, ಭೀಮು ಸಂಕದ, ಸದಾಶಿವ ಬಿಸನಾಳ, ಅಶೋಕ ಭಜಂತ್ರಿ, ವಿಜಯಕುಮಾರ ಬಿಸನಾಳ, ಮುದಕಪ್ಪ ಕುರ್ಪಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here