ವಿಜಯಪುರ ಪಾಲಿಕೆ ಆಯುಕ್ತರ ಮೇಲೆ ಹಲ್ಲೆ, ಅವಾಚ್ಯ ಶಬ್ದಗಳಿಗೆ ನಿಂದನೆ

ಅಧಿಕಾರಿಗಳ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಎಸಗಿದ್ದು ಖಂಡನೀಯ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ತ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು.

0
113

ವಿಜಯಪುರ: ನಗರದ ಸುಕೂನ ಕಾಲನಿಯ ಒಳಚರಂಡಿ ಕಾಮಗಾರಿ ಪರಿಶೀಲನೆಗೆ ತೆರಳಿದಾಗ ಕೆಲ ದುಷ್ಕರ್ಮಿಗಳು ಕರ್ತವ್ಯ ನಿತರ ಪಾಲಿಕೆಯ ಆಯುಕ್ತರಾದ ಶ್ರೀ ವಿಜಯ ಮೆಕ್ಕಳಕಿ ಅವರ ಮೇಲೆ ಹಲ್ಲೆ ಮಾಡಿ, ಅವಾಚ್ಯ ಪದಗಳಿಂದ ನಿಂದಿಸಿರುತ್ತಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಸಂಘ (ರಿ), ವಿಜಯಪುರ ಹಾಗೂ ವಿವಿಧ ಸಂಘಗಳ ಸಹಯೋಗದಿಂದ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ತೆರಳಿ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಪಿ. ಸುನೀಲ ಕುಮಾರ ಅವರಿಗೆ ಮನವಿ ಸಲ್ಲಿಸಿದರು.

ಅಧಿಕಾರಿಗಳ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಎಸಗಿದ್ದು ಖಂಡನೀಯ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ತ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ವಿಳಂಭವಾದಲ್ಲಿ ಜಿಲ್ಲೆಯ ಎಲ್ಲಾ ಕಛೇರಿಗಳನ್ನು ಬಹಿಷ್ಕರಿಸಿ ಅನಿರ್ಧಿಷ್ಟಾವಧಿಯವರೆಗೆ ಮುಷ್ಕರವನ್ನು ಕೈಗೊಳ್ಳಲಾಗುವುದು. ಈ ರೀತಿಯ ಘಟನೆಗಳು ಮರುಕಳಿಸದಂತೆ ಸರಕಾರಿ ನೌಕರರಿಗೆ ಸೇವಾ ಬದ್ರತೆ, ನೌಕರರಿಗೆ ಈ ರೀತಿ ಅಡ್ಡಿ ಪಡಿಸುವುದು, ಹಲ್ಲೆ ಮಾಡುವುದು, ಅವಾಚ್ಯ ಪದಗಳಿಂದ ನಿಂದಿಸುವುದು ಅಪರಾದ ಮತ್ತು ಖಂಡಿನೀಯ. ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಸುರೇಶ ಶೇಡಶ್ಯಾಳ ಮಾತನಾಡಿದರು.

ಮಾನ್ಯ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಗಳಿ ಹಾಗೂ ಸರಕಾರ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಕೂಡಲೆ ಬಂಧಿಸಿ ಕ್ರಮ ಜರುಗಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.


ambedkar image

LEAVE A REPLY

Please enter your comment!
Please enter your name here