ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಇಂಡಿ ತಾಲೂಕಿನ ಆಳೂರ ಗ್ರಾಮದಲ್ಲಿ 11 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅತ್ಯಾಚಾರಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

0
98

ವಿಜಯಪುರ: ಇಂಡಿ ತಾಲೂಕಿನ ಆಳೂರ ಗ್ರಾಮದಲ್ಲಿ 11 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅತ್ಯಾಚಾರಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ರಾವುತಪ್ಪ ವಿಠೋಬಾ ಕಾಂಬಳೆ (23) ಶಿಕ್ಷೆಗೊಳಗಾದ ಆರೋಪಿ. ಬಾಲಕಿಯ ಪೋಷಕರು ಗ್ರಾಮದ ಜಮೀನಿನಲ್ಲಿ ವಾಸವಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಆರೋಪಿ, ಬಾಲೆಗೆ 100 ರೂ. ಕೊಡುವುದಾಗಿ ಆಮಿಷ ತೋರಿಸಿ, ಪಕ್ಕದ ಜಮೀನಿಗೆ ಕರೆದುಕೊಂಡು ಹೋಗಿ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಸಂತ್ರಸ್ತ ಬಾಲೆ ತಾಯಿ ಇಂಡಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ದೂರಿನನ್ವಯ ತನಿಖೆ ನಡೆಸಿದ ಪೊಲೀಸರು, ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ಕೈಗೆತ್ತಿಕೊಂಡ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶೆ ಸವಿತಾಕುಮಾರಿ ಅವರು, ಬಾಲಕಿಯ ಮೇಲಿನ ಅತ್ಯಾಚಾರ ಸಾಬೀತಾಗಿದೆ ಎಂದು ತೀರ್ಮಾನಿಸಿ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.


LEAVE A REPLY

Please enter your comment!
Please enter your name here