SC/ST 72 ಪ್ರಕರಣಗಳ ಪೈಕಿ 56 ಪ್ರಕರಣಗಳಲ್ಲಿ ದೌರ್ಜನ್ಯಕೊಳಗಾದ ಸಂತ್ರಸ್ತರಿಗೆ 132.31 ಲಕ್ಷ ಪರಿಹಾರ; ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್

ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಂತ್ರಸ್ತರಿಗೆ ಜಿಲ್ಲಾಡಳಿತದ ವತಿಯಿಂದ ಒಟ್ಟು 56 ಪ್ರಕರಣಗಳಲ್ಲಿ 132.31 ಲಕ್ಷ ರೂ.ಗಳ ಪರಿಹಾರಧನವನ್ನು ವಿತರಿಸಲಾಗಿದೆ.

0
161

ವಿಜಯಪುರ: ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಂತ್ರಸ್ತರಿಗೆ ಜಿಲ್ಲಾಡಳಿತದ ವತಿಯಿಂದ ಒಟ್ಟು 56 ಪ್ರಕರಣಗಳಲ್ಲಿ 132.31 ಲಕ್ಷ ರೂ.ಗಳ ಪರಿಹಾರಧನವನ್ನು ವಿತರಿಸಲಾಗಿದೆ.

ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಈ ವಿಷಯ ತಿಳಿಸಲಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗಗಳ ಮೇಲಿನ 72 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 56 ಪ್ರಕರಣಗಳಲ್ಲಿ ದೌರ್ಜನ್ಯದಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನೊಂದ ಸಂತ್ರಸ್ತರಿಗೆ 132.31 ಲಕ್ಷ ರೂ.ಗಳ ಪರಿಹಾರಧನ ವಿತರಿಸಲಾಗಿದ್ದು, ವಿವಿಧ ನ್ಯಾಯಾಲಯ ಹಂತದಲ್ಲಿರುವ ಬಾಕಿಯಿರುವ 6 ಪ್ರಕರಣಗಳಲ್ಲಿ ಪರಿಹಾರಧನ ಇನ್ನೂ ವಿತರಣೆ ಮಾಡಬೇಕಾಗಿದ್ದು, ಅನುದಾನದ ಕೊರತೆ ಇಲ್ಲ ಎಂದು ಸಭೆಯಲ್ಲಿ ತಿಳಿಸಿದ್ದಾರೆ.

ಜಿ,ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರು ಅಸ್ಪøಶ್ಯತೆ ನಿವಾರಣೆಗೆ ಅರಿವು ಮೂಡಿಸಲು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಆನಂದ ಕುಮಾರ್ ಅವರು ದಲಿತ ಸಭೆಗಳನ್ನು ಪೊಲೀಸ್ ಇಲಾಖೆ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ಬಗ್ಗೆ ಮಾಹಿತಿ ನೀಡಿ, ಪ.ಜಾ/ವರ್ಗದ ಅಧಿನಿಯಮ -1989 ರನ್ವಯ 72 ಪ್ರಕರಣಗಳು ದಾಖಲಾಗಿದ್ದು, 50 ಪ್ರಕರಣಗಳು ಆರೋಪ ಪಟ್ಟಿ ಸಿದ್ಧಪಡಿಸಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಪ್ರಕರಣಗಳಾಗಿವೆ. 13 ತನಿಖೆಯಲ್ಲಿರುವ, 05 ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಿದೆ,

ದಾಖಲಾದ ಪ್ರಕರಣಗಳಲ್ಲಿ 02 ಸುಳ್ಳು ವರದಿ ಪ್ರಕರಣಗಳಾಗಿದ್ದು, 02 ಬೇರೆ ಜಿಲ್ಲೆಗೆ ವರ್ಗಾವಣೆಯಾದ ಪ್ರಕರಣಗಳಾಗಿವೆ ಎಂದು ಹೇಳಿದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಶ್ರೀ ಚೋರಗಸ್ತಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ರಾಮನಗೌಡ ಕನ್ನೊಳ್ಳಿ, ಜಿ.ಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಸಮಿತಿಯ ಸದಸ್ಯರಾದ ಮನೋಹರ ಕಾಂಬಳೆ, ಅರವಿಂದ ಸಾಲವಾಡಗಿ, ಮುತ್ತಣ್ಣ ಸಾಸನೂರ, ಬಸವರಾಜ ಪೂಜಾರಿ, ರಾಜಶೇಖರ ಕೂಚಬಾಳ, ವಿನಾಯಕ ಗುಣಸಾಗರ, ಗಣಪತಿ ಬಾಣಿಕೋಲ, ಶಿವಾನಂದ ಪಟ್ಟೆದ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


ambedkar image

LEAVE A REPLY

Please enter your comment!
Please enter your name here