ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ?; HDK ಟ್ವೀಟ್

ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ನಮ್ಮ ಭಾಷೆ ನಮಗೆ ಮುಖ್ಯ.

0
152

ಬೆಂಗಳೂರು: ಕಳೆದ 75 ವರ್ಷಗಳಿಂದ ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಳಿ ಹಿಂಡಿ, ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡುತ್ತಿರುವುದು ಆಘಾತಕಾರಿ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಪ್ರತಿಯೊಂದಕ್ಕೂ ಹಿಂದುತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಸಮಾಜ ಮತ್ತು ಜನರನ್ನು ಒಡೆಯುತ್ತಿರುವ ಬಿಜೆಪಿ, ಈಗ ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ ಎಂದು ಹೇಳಿದ್ದಾರೆ.

ಬ್ರಿಟಿಷರು ಪ್ರತಿ ಸಂಸ್ಥಾನವನ್ನು ಆಕ್ರಮಿಸಿಕೊಳ್ಳುವ ಮುನ್ನ ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು. ಈಗ ಬಿಜೆಪಿ ಅದೇ ನೀತಿ ಮುಂದುವರೆಸಿದ್ದು, ಬ್ರಿಟೀಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸ ಇಲ್ಲ ಎನ್ನುವುದಕ್ಕೆ ಇದೇ ಜೀವಂತ ಸಾಕ್ಷಿ.
ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೆ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ.


ambedkar image

LEAVE A REPLY

Please enter your comment!
Please enter your name here