ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಶುಭ ಸುದ್ದಿ: ಶೀಘ್ರದಲ್ಲೇ ಶ್ರೀನಿವಾಸಾಚಾರಿ ವರದಿ ಅನುಷ್ಠಾನ

ರಾಜ್ಯ ಸರ್ಕಾರ ಮಾಜಿ ಐಎಎಸ್ ಅಧಿಕಾರಿ ಶ್ರೀನಿವಾಸಾಚಾರಿ ವರದಿ ಶೀಘ್ರದಲ್ಲೇ ಜಾರಿ.

0
69

ಆರೋಗ್ಯ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಯ ಬೇಡಿಕೆ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ವರದಿ ಮಾಡಲು ರಾಜ್ಯ ಸರ್ಕಾರ ಮಾಜಿ ಐಎಎಸ್ ಅಧಿಕಾರಿ ಶ್ರೀನಿವಾಸಾಚಾರಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ವರದಿಯ ಕೆಲವು ಸಲಹೆಗಳನ್ನು ಶೀಘ್ರದಲ್ಲಿಯೇ ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಿನ್ನೆ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀನಿವಾಸಾಚಾರಿ ವರದಿ ಜಾರಿ ಕುರಿತು ಆರೋಗ್ಯ ಇಲಾಖೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷರಾದ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್ ಹಾಗೂ ಆರೋಗ್ಯ ಸಚಿವರ ನಡುವಿನ ಮಾತುಕತೆ ಫಲಪ್ರದ ಹೌದು.

ಈ ಕುರಿತು ನೌಕರರ ಸಂಘ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಶಾಸಕರು ಮತ್ತು ಸಂಘದ ಗೌರವಾಧ್ಯಕ್ಷ ಆಯನೂರು ಮಂಜುನಾಥ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ನೌಕರರ ಅಗತ್ಯತೆಗಳನ್ನು ಪರಿಹರಿಸುವುದಾಗಿ ತಿಳಿಸಿದರು. ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಹಾಗೂ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಆದೇಶ ಹೊರಡಿಸುವುದಾಗಿ ಅವರು ಹೇಳಿದರು.


LEAVE A REPLY

Please enter your comment!
Please enter your name here