ಕೋವಿಡ್ -19 ರ ಮುಂಜಾಗೃತಾ ಕ್ರಮಗಳನ್ನು ಪಾಲಿಸಿ; ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ

ಮಹಾನಗರಪಾಲಿಕೆ ಪ್ರದೇಶಗಳಲ್ಲಿ ರೂ.250 ಮತ್ತು ಇನ್ನುಳಿದ ಪ್ರದೇಶಗಳಲ್ಲಿ ರೂ.100 ದಂಡ ವಿಧಿಸಲಾಗುವುದು .

0
239

ವಿಜಯಪುರ: ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕೆಲವು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಸರಕಾರದ ಆದೇಶದ ಮೇರೆಗೆ ರಾಜ್ಯ ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸುಗಳ ಪ್ರಕಾರ ಕೋವಿಡ್ -19 ನಿಯಂತ್ರಣ ಕುರಿತು ಅಗತ್ಯ ಮುಂಜಾಗ್ರತಾ ಕ್ರಮಗಳಾದ ಪೇಸ್ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದನ್ನು ನಿಬರ್ಂಧಿಸಲಾಗಿರುತ್ತದೆ. ಕಾರಣ ಸಾರ್ವಜನಿಕರು, ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಲು ಮತ್ತು ಕೋವಿಡ್-19 ಹರಡುವುದನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ವಿಜಯ ಮಹಾಂತೇಶ ದಾನಮ್ಮನವರ ಅವರು ಮನವಿ ಮಾಡಿದ್ದಾರೆ.

ಮುಖಗವುಸು: ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಮುಖದ ಹೊದಿಕೆಯನ್ನು ಧರಿಸುವುದು ಕಡ್ಡಾಯವಾಗಿದೆ. ಅಗತ್ಯಾನುಸಾರ ಸರಿಯಾಗಿ ಮುಖದ ಹೊದಿಕೆಯನ್ನು ಧರಿಸದಿದ್ದಲ್ಲಿ ಮಹಾನಗರಪಾಲಿಕೆ ಪ್ರದೇಶಗಳಲ್ಲಿ ರೂ.250 ಮತ್ತು ಇನ್ನುಳಿದ ಪ್ರದೇಶಗಳಲ್ಲಿ ರೂ.100 ವಿಧಿಸಲಾಗುವುದು .

ದೈಹಿಕ ಅಂತರ: ಪ್ರತಿಯೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಟ 2 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು. ಗ್ರಾಹಕರಲ್ಲಿ ದೈಹಿಕ ಅಂತರ ಇರುವುದನ್ನು ಅಂಗಡಿಗಳ ಮಾಲೀಕರು ಖಚಿತಪಡಿಸಿಕೊಳ್ಳತಕ್ಕದ್ದು.

ಉಗಿಯುವುದು ದಂಡನೀಯ: ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದು ದಂಡನೀಯವಾಗಿದೆ. ಈ ಜುಲ್ಮಾನೆಯು ಸ್ಥಳೀಯ ಪ್ರಾಧಿಕಾರಗಳು ಕಾನೂನು, ನಿಯಮ ಮತ್ತು ನಿಬಂಧನೆಗಳಿಗೆ ಅನುಸಾರವಾಗಿ ನಿಗದಿಪಡಿಸಬಹುದಾದಂತೆ ಇರತಕ್ಕದ್ದು. ದಂಡ ವಿಧಿಸಲು ಮಹಾನಗರ ಪಾಲಿಕೆ, ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಪೊಲೀಸ್ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಇವರನ್ನು ಸಕ್ಷಮ ಪ್ರಾಧಿಕಾರಗಳನ್ನಾಗಿ ಅಧೀಕೃತಗೊಳಸಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.


ambedkar image

LEAVE A REPLY

Please enter your comment!
Please enter your name here