ಬಸವನ ಬಾಗೇವಾಡಿ ಸರಕಾರಿ ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ; ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ

ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳ ವಿಭಾಗದಲ್ಲಿ ತಾಲೂಕಾ ಆಸ್ಪತ್ರೆ ಬಸವನ ಬಾಗೇವಾಡಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹೊರ್ತಿಯು ಸತತ ಎರಡನೇಯ ಸಲ ಜಿಲ್ಲೆಯ ಅತ್ಯತ್ತಮ ಪ್ರಾ.ಆ.ಕೇಂದ್ರ ಕಾಯಕಲ್ಪ ಪ್ರಶಸ್ತಿಯನ್ನು ಪಡೆದಿರುತ್ತದೆ.

0
221

ವಿಜಯಪುರ: ಬರದ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿಯ ಹಿರಿಮೆ ಸಿಕ್ಕಿದೆ. ಹೌದು! 2020-21ನೇ ಸಾಲಿನಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಸ್ವಚ್ಚತೆ, ಶುಚಿತ್ವ ಮತ್ತು ನೈರ್ಮಲ್ಯಕ್ಕಾಗಿ ನೀಡುವ ಕಾಯಕಲ್ಪ ಪ್ರಶಸ್ತಿಯು ವಿಜಯಪುರ ಜಿಲ್ಲೆಯ 20 ಆರೋಗ್ಯ ಸಂಸ್ಥೆಗಳಿಗೆ ಲಭಿಸಿರುತ್ತದೆ. ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡುವ ಆಸ್ಪತ್ರೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಕಾಯಕಲ್ಪ ಪ್ರಶಸ್ತಿಯನ್ನು 2015 ರಿಂದ ನೀಡಲಾಗುತ್ತ್ತಿದೆ. 2019-20ನೇ ಸಾಲಿನಲ್ಲಿ ಜಿಲ್ಲೆಯ 15 ಆರೋಗ್ಯ ಸಂಸ್ಥೆಗಳು ಕಾಯಕಲ್ಪ ಪ್ರಶಸ್ತಿಯನ್ನು ಪಡೆದಿದ್ದರೆ, 2020-21ನೇ ಸಾಲಿನಲ್ಲಿ ಒಟ್ಟು 20 ಆರೋಗ್ಯ ಸಂಸ್ಥೆಗಳು ಕಾಯಕಲ್ಪ ಪ್ರಶಸ್ತಿಯನ್ನು ಪಡೆದಿರುತ್ತವೆ.

ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳ ವಿಭಾಗದಲ್ಲಿ ತಾಲೂಕಾ ಆಸ್ಪತ್ರೆ ಬಸವನ ಬಾಗೇವಾಡಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹೊರ್ತಿಯು ಸತತ ಎರಡನೇಯ ಸಲ ಜಿಲ್ಲೆಯ ಅತ್ಯತ್ತಮ ಪ್ರಾ.ಆ.ಕೇಂದ್ರ ಕಾಯಕಲ್ಪ ಪ್ರಶಸ್ತಿಯನ್ನು ಪಡೆದಿರುತ್ತದೆ.

ಜಿಲ್ಲಾ ಆಸ್ಪತ್ರೆ ವಿಭಾಗದಲ್ಲಿ ಜಿಲ್ಲಾ ಆಸ್ಪತ್ರೆ ವಿಜಯಪುರವು ಸಮಾಧಾನಕರ ಪ್ರಶಸ್ತಿಯನ್ನು ಪಡೆದಿರುತ್ತದೆ. ತಾಲೂಕಾ ಆಸ್ಪತ್ರೆ ಸಮುದಾಯ ಆರೋಗ್ಯ ಕೇಂದ್ರ ವಿಭಾಗದಲ್ಲಿ ತಾಲೂಕು ಆಸ್ಪತ್ರೆ ಬ.ಬಾಗೇವಾಡಿಯು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದರೆ, ಸಮುದಾಯ ಆರೋಗ್ಯ ಕೇಂದ್ರಗಳಾದ ಚಡಚಣ, ಕಾಳಗಿ, ತಡವಲಗಾ, ನಾಲತವಾಡ, ನಿಡಗುಂದಿ ಮತ್ತು ಆಲಮೇಲ್ ಸಮಾಧಾನಕರ ಪ್ರಶಸ್ತಿಯನ್ನು ಪಡೆದಿರುತ್ತವೆ. ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರÀ ಹೊರ್ತಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಶಿವಣಗಿ, ಹೊನವಾಡ, ಮನಗೂಳಿ, ಗೊಳಸಂಗಿ, ಹೂ.ಹಿಪ್ಪರಗಿ, ಇನಚಗಲ್, ಕೂಡಗಿ ಮತ್ತು ರೋಣಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮಾಧಾನಕರ ಕಾಯಕಲ್ಪ ಪ್ರಶಸ್ತಿಯನ್ನು ಪಡೆದಿರುತ್ತವೆ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ದರ್ಗಾ, ಶಾಂತಿನಗರ ಮತ್ತು ತಾಜಬಾವಡಿ ಸಮಾಧಾನಕರ ಪ್ರಶಸ್ತಿಯನ್ನು ಪಡೆದಿರುತ್ತವೆ.

ಪ್ರಶಸ್ತಿ ವಿಜೇತ ಎಲ್ಲ ಆರೋಗ್ಯ ಸಂಸ್ಥೆಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರಾಜಕುಮಾರ ಯರಗಲ್ ಮತ್ತು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರಾಜೇಶ್ವರಿ ಗೋಲಗೇರಿ ಯವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.


LEAVE A REPLY

Please enter your comment!
Please enter your name here