ರಿಷಿ ಆನಂದ: ಜಿಲ್ಲಾ ಪಂಚಾಯತ್ ಆವರಣದಲ್ಲಿ ಸ್ವಾತಂತ್ರ‍್ಯ ದಿನಾಚರಣೆ

ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ, ಪ್ರಾಣತೆತ್ತ, ಬಲಿದಾನವಾದ ಎಲ್ಲ ವೀರರನ್ನು ನೆನೆದು, ಅವರಿಗೆ ನಮನ ಸಲ್ಲಿಸಬೇಕಿದೆ. ಪ್ರತಿ ವರ್ಷ ಆಗಸ್ಟ್ 15 ರಂದು ದೇಶಭಕ್ತಿಯ ಉತ್ಸಾಹ, ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸ್ವಾತಂತ್ರ್ಯ ಹೋರಾಟಕ್ಕಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸಲಾಗುತ್ತದೆ ಎಂದು ಹೇಳಿದರು

0
139
ರಿಷಿ ಆನಂದ image

ವಿಜಯಪುರ: ಸ್ವಾತಂತ್ರ‍್ಯೋತ್ಸವದ ದಿನಾಚರಣೆ ಅಂಗವಾಗಿ ಗುರುವಾರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಇತಿಹಾಸದಲ್ಲಿ ಆಗಷ್ಟ್ 15ರ ಇಂದಿನ ದಿನ ಮಹತ್ವದ್ದಾಗಿದೆ. ನಮ್ಮ ದೇಶಕ್ಕೆ ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತಂತ್ರ‍್ಯ ಸಿಕ್ಕಿದ ದಿನ ಮತ್ತು ಅಂದಿನ ಸ್ವಾತಂತ್ರ‍್ಯ ಹೋರಾಟದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ನಮ್ಮ ಭಾರತದ ಸಂವಿಧಾನದ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್, ಸುಭಾಷ್ ಚಂದ್ರ ಬೋಸ್, ಲಾಲ್ ಬಹದ್ದೂರ್ ಶಾಸ್ತ್ರಿ, ಭಗತ್ ಸಿಂಗ್ ಸೇರಿದಂತೆ ವಿವಿಧ ಮಹನೀಯರ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ಲಭಿಸಿದ್ದು, ಭಾರತೀಯರಾದ ನಾವು ಹೆಮ್ಮೆಯಿಂದ ನೆನೆಯಬೇಕಿದೆ ಎಂದು ಅವರು ಹೇಳಿದರು.

ರಿಷಿ ಆನಂದ image

ಇದನ್ನೂ ಓದಿ: ವಿಜಯಪುರ: ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಕೊಡುಗೆ ಅನನ್ಯ MB Patil

ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ, ಪ್ರಾಣತೆತ್ತ, ಬಲಿದಾನವಾದ ಎಲ್ಲ ವೀರರನ್ನು ನೆನೆದು, ಅವರಿಗೆ ನಮನ ಸಲ್ಲಿಸಬೇಕಿದೆ. ಪ್ರತಿ ವರ್ಷ ಆಗಸ್ಟ್ 15 ರಂದು ದೇಶಭಕ್ತಿಯ ಉತ್ಸಾಹ, ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸ್ವಾತಂತ್ರ್ಯ ಹೋರಾಟಕ್ಕಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಹೇಳಿದರು.

ವಿಶ್ವದಲ್ಲಿ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ ದೇಶ ನಮ್ಮ ಭಾರತ. ನಮ್ಮ ದೇಶದ ಮುಖ್ಯ ಉದ್ದೇಶ ಜನಕಲ್ಯಾಣ. ಆದ್ದರಿಂದ ಒಂದು ಜವಾಬ್ದಾರಿಯುತ ನಾಗರಿಕರಾಗಿ ಮತ್ತು ಅಧಿಕಾರಿಗಳಾಗಿ ನಾವು ಜನಕಲ್ಯಾಣಕ್ಕಾಗಿ ಕೆಲಸ ಮಾಡಬೇಕು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಸೇವೆ ಸಲ್ಲಿಸಬೇಕು.

ಇದನ್ನೂ ಓದಿ: ಪವನ ವಿದ್ಯುತ್ ಘಟಕ ಸ್ಥಾಪನೆಗೆ ಅಸ್ತು.

ಪ್ರತಿ ಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಜವಾಬ್ದಾರಿ ನಮ್ಮ ಇಲಾಖೆಯದ್ದು. ಶಿಕ್ಷಣ, ಆರೋಗ್ಯ, ಬೀದಿ ದೀಪ, ಚರಂಡಿ, ಕುಡಿಯುವ ನೀರು, ಅಂಗನವಾಡಿ ವ್ಯವಸ್ಥೆ ಈ ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ಒದಗಿಸಲು ಶ್ರಮಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಉಪಕಾರ್ಯದರ್ಶಿಗಳಾದ ವಿಜಯಕುಮಾರ ಆಜೂರ, ಯೋಜನಾ ನಿರ್ದೇಶಕರಾದ ಸಿ. ಬಿ. ದೇವರಮನಿ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಸಹಾಯಕ ಕಾರ್ಯದರ್ಶಿಗಳಾದ ಅನುಸೂಯ ಚಲವಾದಿ, ಜಿಲ್ಲಾ ಪಂಚಾಯಿತಿಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here