ವಿಜಯಪುರ: ಮಹಾತ್ಮ ಗಾಂಧೀಜಿ ಜಯಂತಿ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ 3 ವಿದ್ಯಾರ್ಥಿಗಳನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
“ಬಾಪೂಜಿ ಪ್ರಬಂಧ ಸ್ಪರ್ಧೆ”ಯ ಪ್ರೌಢಶಾಲಾ ವಿಭಾಗದಲ್ಲಿ ವಿಜಯಪುರ ಗ್ರಾಮೀಣ ವಲಯದ ಕಣ್ಣಮುಚನಾಳ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರೀತಿ ಮಾ. ಬಿಜ್ಜರಗಿ ಪ್ರಥಮ, ಸಿಂದಗಿ ತಾಲೂಕಿನ ಕೆರೂಟಗಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಾನಿಯಾ.ಅ.ಕೊಂಡಿ ದ್ವೀತಿಯ ಹಾಗೂ ಇಂಡಿ ತಾಲೂಕಿನ ಹಿರೇರೂಗಿ ಬೋಳೆಗಾಂವದ ಎಸ್.ಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಬೋರಮ್ಮ ತಾವರಖೇಡ ತೃತೀಯ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ: ಚಡಚಣ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಭೇಟಿ ಮತ್ತು ವಿವಿಧ ಕಾಮಗಾರಿ ಪರಿಶೀಲನೆ
ಪದವಿಪೂರ್ವ ವಿಭಾಗದಲ್ಲಿ ಕೊಲ್ಹಾರ ತಾಲೂಕಿನ ಕೂಡಗಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರತಿ ಕುಂಬಾರ ಪ್ರಥಮ, ವಿಜಯಪುರ ನಗರದ ಬಿಡಿಇ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಗಿಣಿ ಬಗಲಿ ದ್ವೀತಿಯ ಹಾಗೂ ಮುದ್ದೇಬಿಹಾಳದ ಎಂ.ಜಿ.ವ್ಹಿ.ಸಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಭಾಗ್ಯಶ್ರೀ ಮಡಿವಾಳರ ತೃತೀಯ ಸ್ಥಾನ ಪಡೆದಿದ್ದಾರೆ.
ಪದವಿ/ಸ್ನಾತಕೋತ್ತರ ಪದವಿ ವಿಭಾಗದಲ್ಲಿ ವಿಜಯಪುರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಸೀಮಾ ಚಪ್ಪರಬಂದ ಪ್ರಥಮ, ಇಂಡಿ ಜಿ.ಆರ್.ಜಿ ಕಲಾ ಮತ್ತು ವೈ.ಎ.ಪಿ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸುಚಿತ್ರಾ ಎಸ್.ಬಿರಾದಾರ ದ್ವೀತಿಯ ಸ್ಥಾನ ಹಾಗೂ ವಿಜಯಪುರದ ಎಸ್.ಬಿ. ಆಟ್ರ್ಸ ಮತ್ತು ಕೆಸಿಪಿ ಸೈನ್ಸ್ ಕಾಲೇಜಿನ ವಿದ್ಯಾರ್ಥಿನಿ ದೀಪಾ ಚೋರಮುಲೆ ತೃತೀಯ ಸ್ಥಾನ ಪಡೆದಿದ್ದಾರೆ.
ಮಹಾತ್ಮ ಗಾಂಧೀಜಿ ಜಯಂತಿ ಅಕ್ಟೋಬರ್ 2 ರಂದು ವಿಜಯಪುರ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ನಡೆಯಲಿರುವ ಮಹಾತ್ಮಾ ಗಾಂಧೀಜಿ ಜಯಂತಿ ಸಮಾರಂಭದಲ್ಲಿ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗಿರುವ ಪ್ರಬಂಧಗಳನ್ನು ರಾಜ್ಯ ಮಟ್ಟದ ಆಯ್ಕೆ ಸ್ಪರ್ಧೆಗೆ ಕೂಡ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















