Vijayapur News | ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಕೊಡುಗೆ ಅಪಾರ – T. Bhubalan

ಗಾಂಧಿಭವನವು ಮಹಾತ್ಮ ಗಾಂಧೀಜಿಯವರ ಜೀವನ ಚರಿತ್ರೆ, ಸ್ವಾತಂತ್ರ್ಯ ಚಳುವಳಿಯ ಕುರಿತಾಗಿ ಸಮಗ್ರ ನೋಟ ಇಲ್ಲಿ  ಕಾಣಬಹುದಾಗಿದೆ.

0
22
155th gandhi jayanti image

ವಿಜಯಪುರ: 155th gandhi jayanti ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಸಂದೇಶದ ಮೂಲಕ ನೀಡಿದ ಕೊಡುಗೆ ಅಮೂಲ್ಯವಾದದ್ದು, ಈ ಮಹಾನ್ ವ್ಯಕ್ತಿಗಳ ತ್ಯಾಗ, ನಿಷ್ಠೆ, ಪ್ರಾಮಾಣಿಕತೆ, ಸತ್ಯ, ಅಹಿಂಸಾ, ಸರಳತೆಯ ತತ್ವಾದರ್ಶಗಳನ್ನು ಹಾಗೂ ಅವರ ಜೀವನದ ಸಂದೇಶ ಮೌಲ್ಯಗಳನ್ನು ಯುವ ಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಮಹನೀಯರ ಕುರಿತು ಇಂದಿನ ಜನರು ಅಧ್ಯಯನ ಮಾಡುವ ಮೂಲಕ ಅವರ ಚಿಂತನೆಗಳನ್ನು ಹಾಗೂ ಆದರ್ಶ ವಿಚಾರಗಳನ್ನು ಅರಿತುಕೊಳ್ಳಬೇಕು.

ಇದನ್ನೂ ಓದಿ: Bagalkote News | ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ: ಪ್ರಶಸ್ತಿ ಮತ್ತು ನಗದು ಬಹುಮಾನ

ದೇಶಕ್ಕೆ ಸ್ವಾತಂತ್ರ್ಯ ದೊರಕಿಸುವಲ್ಲಿ ಮಹತ್ವರ ಪಾತ್ರ ವಹಿಸಿ ಸತ್ಯ, ಅಹಿಂಸೆಯ ಹೋರಾಟದ ಹಾದಿ ಅನುಸರಿಸಿ ವಿಶ್ವಕ್ಕೆ ದೊಡ್ಡ ಸಂದೇಶ ಸಾರಿದವರು ಮಹಾತ್ಮ ಗಾಂಧೀಜಿಯವರು. ವಿಶ್ವಸಂಸ್ಥೆಯು ಮಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆಯನ್ನು ಅಹಿಂಸಾ ದಿನಾಚರಣೆಯನ್ನಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಆಚರಿಸುತ್ತಿರುವುದು ವಿಶ್ವ ಅವರನ್ನು ಗೌರವಿಸುವ ಪರಿಯಾಗಿದೆ ಎಂದು ಹೇಳಿದರು.

155th gandhi jayanti ತ್ಯಾಗ, ಸತ್ಯ, ಅಹಿಂಸೆಯಂತಹ ಇವರ ವಿಚಾರಗಳು ಇಂದಿಗೂ ಎಂದೆಂದಿಗೂ ಪ್ರಸ್ತುತವಾಗಿದೆ ಎಂದು ಹೇಳಿದರು. ಸತ್ಯ ಶಾಂತಿ, ತ್ಯಾಗಮೂರ್ತಿಯಾದ ಇವರ ಜೀವನಾರ್ದಶ ಅರಿಯಬೇಕು. ಲಾಲ್ ಬಹದೂರ್ ಶಾಸ್ತ್ರೀ ಅವರು ನೀಡಿದ ಜೈ ಜೈವಾನ್ ಜೈ ಕಿಸಾನ್ ಘೋಷವಾಕ್ಯ ರೈತ ಹಾಗೂ ಸೈನಿಕರ ಬಗೆಗಿನ ಅಪಾರ ಕಾಳಜಿಗೆ ಧ್ಯೋತಕವಾಗಿದ ಎಂದು ಹೇಳಿದರು. ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜೀವನಾದರ್ಶಗಳು ನಮ್ಮೆಲ್ಲರ ಬದುಕಿಗೆ ಸ್ಪೂರ್ತಿದಾಯಕವಾಗಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಗಾಂಧಿಭವನವು ಮಹಾತ್ಮ ಗಾಂಧೀಜಿಯವರ ಜೀವನ ಚರಿತ್ರೆ, ಸ್ವಾತಂತ್ರ್ಯ ಚಳುವಳಿಯ ಕುರಿತಾಗಿ ಸಮಗ್ರ ನೋಟ ಇಲ್ಲಿ  ಕಾಣಬಹುದಾಗಿದೆ. ಗಾಂಧಿ ಭವನವು ಮಾಹಿತಿ ಆಗರವೇ ಆಗಿದೆ. ಸಾರ್ವಜನಿಕರು, ವಿದ್ಯಾಥಿಗಳು ಗಾಂಧಿ ಭವನವನ್ನು ವೀಕ್ಷಿಸಿ ಗಾಂಧೀಜಿವರ ಕುರಿತಾಗಿ ಹೆಚ್ಚು ಮಾಹಿತಿ ತಿಳಿದುಕೊಳ್ಳಬಹುದಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Bagalkote News | ಜಿಲ್ಲಾಡಳಿತದಿಂದ ಗಾಂಧಿ ಹಾಗೂ ಶಾಸ್ತ್ರೀ ಜಯಂತಿ ಆಚರಣೆ

ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಮಹನೀಯರ ಜೀವನದ ತತ್ವಗಳನ್ನು ಸ್ಮರಿಸಲು ಹಾಗೂ ಅವರಿಗೆ ಗೌರವ ಅರ್ಪಿಸಲು ಜಯಂತಿ ಆಚರಣೆ ಮಾಡುತ್ತೇವೆ. ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲಿದ್ದ ಮಹಾತ್ಮ ಗಾಂಧಿ ಅವರು ಸಾಮಾಜಿಕ, ರಾಜಕೀಯ ಬದಲಾವಣೆಗೆ ದೇಶಾದ್ಯಂತ ಸಂಚರಿಸಿ ಜನರ ಸಮಸ್ಯೆ ಅರಿತು ಅವಿರತವಾಗಿ ಶ್ರಮಿಸಿದರು. ಗ್ರಾಮಗಳ ಅಭಿವೃಧಿ ದೇಶದ ಅಭಿವೃದ್ಧಿ ಎಂಬ ಗ್ರಾಮ ಸ್ವರಾಜ್ಯ ಪರಿಕಲ್ಪನೆ ತಂದರು ಎಂದು ಹೇಳಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕುರಿತಾಗಿ ಶ್ರೀಮತಿ ಮೀನಾಕ್ಷಿ ಪಾಟೀಲ ಅವರು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯ್ಕ, ಮೇಯರ್ ಮಹೇಜಬಿನ್ ಹೊರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಎಡಿಸಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ,

ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡ್ಡೆ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಅಜೂರ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ,

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎನ್.ಎಚ್. ನಾಗೂರ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಯುವ ಜನಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ,

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಪೀಟರ್ ಅಲೆಕ್ಸಾಂಡರ್, ಅಶೋಕ್ ಘೋಣಸಗಿ, ಬಾಬುಗೌಡ ಪಾಟೀಲ, ನಿಲೇಶ್ ಬೇನಾಳ, ಭೀಮರಾಯ ಜಿಗಜಿಣಗಿ, ಗಿರೀಶ್ ಕುಲಕರ್ಣಿ,

ನಿವೃತ್ತ ಶಿಕ್ಷಕರಾದ ಎ.ಎಚ್. ಮಮದಾಪೂರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ, ವಿವಿಧ ಶಾಲಾ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here