Vijayapura News : ನಗರದ ಆನಂದ ಮಹಲಕ್ಕೆ ಸಚಿವ ಕೃಷ್ಣಭೈರೇಗೌಡ ಭೇಟಿ

ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ ಅವರು ನಗರದ ಆನಂದ ಮಹಲ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

0
35
Krishna Bhairegowda image

ವಿಜಯಪುರ: ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ (Krishna Bhairegowda) ಅವರು ನಗರದ ಆನಂದ ಮಹಲ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶನಿವಾರ ಬೆಳಿಗ್ಗೆ ಐತಿಹಾಸಿಕ ಆನಂದ ಮಹಲ್‍ಗೆ ಭೇಟಿ ನೀಡಿ ಕಟ್ಟಡವನ್ನು ಸಮಗ್ರವಾಗಿ ವೀಕ್ಷಣೆ ಮಾಡಿದ ಅವರು, ಆನಂದ ಮಹಲ್ ಕಂದಾಯ ಇಲಾಖೆಗೆ ಒಳಪಟ್ಟಿರುವುದರಿಂದ ಈ ಐತಿಹಾಸಿಕ ಕಟ್ಟಡವನ್ನು ಸಾರ್ವಜನಿಕ ಉಪಯೋಗಕ್ಕಾಗಿ ಬಳಸಿಕೊಂಡು, (Krishna Bhairegowda) ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಚಟುವಟಿಕೆಗಳು ಸೇರಿದಂತೆ ಕೈಗೊಳ್ಳಬಹುದಾದ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಉಪಯೋಗ ಮಾಡಿಕೊಳ್ಳುವುದರ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಇದನ್ನೂ ಓದಿ: Ambedkar Jayanti : ಡಾ.ಬಿ.ಆರ್. ಅಂಬೇಡ್ಕರವರ 134ನೇ ಜಯಂತಿ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಅಮೀನ ಹುಲ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here