ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವಿವಿಧ ಕಾರಣಗಳಿಂದ ಖಾಲಿ ಇರುವ ವಾರ್ಡ ನಂ.29ರ ಸ್ಥಾನಕ್ಕೆ ಉಪ ಚುನಾವಣೆಗೆ By-election ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.
By-election ನಾಮಪತ್ರ ಸಲ್ಲಿಸಲು ನವೆಂಬರ್ 11, 2024 ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನಾ ಕಾರ್ಯ ನವೆಂಬರ್ 12,2024 ರಂದು ನಡೆಯಲಿದೆ. ನವೆಂಬರ್ 14,2024ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅವಶ್ಯವಿದ್ದಲ್ಲಿ ನವೆಂಬರ್ 23, 2024 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ನವೆಂಬರ್ 26,2024 ರಂದು ಚುನಾವಣೆ ಕಾರ್ಯ ಮುಕ್ತಾಯಗೊಳ್ಳುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Vijayapura News | ಕಲ್ಲಿನ ಕಣಿಯಿಂದಾಗಿ ಕೋಲಾರ ಬ್ರೀಡ್ಜ್ ಅಪಾಯದಲ್ಲಿ | ಕೂಡಲೇ ಬಂದ್ ಮಾಡಲು ಆಗ್ರಹ






