ಹಿಂದೂಪರ ಸಂಘಟನೆಗಳಿಂದ ಮುಸ್ಲಿಂ ವರ್ತಕರ ಅಂಗಡಿಗಳು ಧ್ವಂಸ, ಹಣ್ಣುಗಳು ಚೆಲ್ಲಾಪಿಲ್ಲಿ: ಪೊಲೀಸರಿಂದ ಕೇಸು ದಾಖಲು

ಧಾರವಾಡ: ಮುಸ್ಲಿಂ ಸಮುದಾಯದವರ ಅಂಗಡಿಗೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಂದು ಕಲ್ಲಂಗಡಿ ಹಣ್ಣುಗಳನ್ನೆಲ್ಲಾ ಧ್ವಂಸ ಮಾಡಿ ಚೆಲ್ಲಿದ್ದರಿಂದ ಧಾರವಾಡದ ನುಗ್ಗೆಕೇರಿಯ ಹನುಮಾನ್ ದೇವಸ್ಥಾನದ ಬಳಿ ನಿನ್ನೆ ಸಾಯಂಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಈ ಸುದ್ದಿ, ಫೋಟೋ-ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ-ವಿಡಿಯೋಗಳು ಸಾಕಷ್ಟು ಹರಿದಾಡುತ್ತಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಎತ್ತಿನ ಗಾಡಿಗಳಿಂದ ಹಣ್ಣು-ತರಕಾರಿಗಳನ್ನು ಎಳೆದಾಡಿ ತೆಗೆದು ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿಸಾಕಲಾಗಿದೆ. ಸಾಕಷ್ಟು ಹಣ್ಣು-ತರಕಾರಿಗಳು ಹಾನಿಯಾಗಿವೆ. ಎರಡೂ ಸಮುದಾಯಗಳ ನಡುವೆ ಸಾಕಷ್ಟು ವಾಗ್ವಾದಗಳು ನಡೆದು ಕೊನೆಗೆ ಪೊಲೀಸರು ಬಂದು ಪರಿಸ್ಥಿತಿ […]
ಮಾಜಿ ಸಚಿವ ವಿನಯ ಕುಲಕರ್ಣಿ ಸಿಬಿಐ ವಶಕ್ಕೆ

ಧಾರವಾಡ ನ.05: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಅವರ ಸಹೋದರ ವಿಜಯ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. 2016ರಲ್ಲಿ ಯೋಗೀಶ್ ಗೌಡ ಅವರನ್ನು ಧಾರವಾಡ ನಗರದ ಸಪ್ತಾಪೂರ ಜಿಮ್ ಗೆ ಬಂದಿದ್ದ ದುಷ್ಕರ್ಮಿಗಳು ಯೋಗೇಶ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಯೋಗೀಶ್ ಗೌಡರನ್ನು ಕೊಲೆ ಮಾಡಲು ವಿನಯ ಕುಲಕರ್ಣಿ ಸಂಚು ರೂಪಿಸಿದ್ದಾರೆ ಎನ್ನುವ […]
ವಿಜಯಪುರ: ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದ ಧಾಬಾ, ಹೊಟೇಲ್ ಗಳ ಮೇಲೆ ದಾಳಿ; 51 ಜನ ಬಂಧನ

ವಿಜಯಪುರ (ಸಪ್ಟಂಬರ) 07: ಅಕ್ರಮವಾಗಿ ಸರಾಯಿ ಮಾರಾಟ ಮಾಡುತ್ತಿದ್ದ ದಾಬಾ, ಹೋಟೆಲ್ ಗಳ ಮೇಲೆ ದಾಳಿ ಮಾಡಿರುವ ಪೊಲೀಸರು ಒಟ್ಟು 138 ಸ್ಥಳಗಳಲ್ಲಿ ಅಕ್ರಮ ಸರಾಯಿ ದಂಧೆಯನ್ನು ಪತ್ತೆ ಹಚ್ಚಿದ್ದಾರೆ. ಮಾರಾಟ ಮಾಡುತ್ತಿರುವವರ ವಿರುದ್ದ ದಾಳಿ ಮಾಡಿ ಕಾನೂನು ಕ್ರಮ ಜರುಗಿಸಿದ್ದು, ಈ ಪೈಕಿ ವಿಜಯಪುರ ಜಿಲ್ಲೆಯಲ್ಲಿ 38 ದಾಬಾ, 05 ಹೋಟೆಲ್ ಹಾಗೂ 06 ಗ್ರಾಮಗಳಲ್ಲಿ ಹೀಗೆ ಒಟ್ಟು 49 ಪ್ರಕರಣಗಳನ್ನು ಅಬಕಾರಿ ಕಾಯ್ದೆಯಡಿಯಲ್ಲಿ ದಾಖಲಿಸಿಕೊಂಡು, 51 ಜನ ಆರೋಪಿತರನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 128.74 […]
ವಿಜಯಪುರ: ಮುಂದುವರಿದ ಕೊರೋನಾ ಅಟ್ಟಹಾಸ; ಇಂದು ಐವರಲ್ಲಿ ಪಾಸಿಟಿವ್

ವಿಜಯಪುರ ಮೇ.26: ಮಹಾರಾಷ್ಟ್ರದಿಂದ ಆಗಮಿಸಿದ್ದ 5 ಜನರಲ್ಲಿ ಕೊರೋನಾ ಪಾಸಿಟಿವ್ ದೃಡಪಟ್ಟಿದ್ದು, ಜಿಲ್ಲೆಗೆ ಆಮಿಸಿರುವ 18 ವರ್ಷದ ವಯೋಮಾನದ ರೋಗಿ ಸಂಖ್ಯೆ 2203 (ಯುವಕ), 34 ವಯೋಮಾನದ ರೋಗಿಸಂಖ್ಯೆ 2204 (ಪುರುಷ), 30 ವರ್ಷ ವಯೋಮಾನದ ರೋಗಿ ಸಂಖ್ಯೆ 2205 (ಪುರುಷ), 60 ವರ್ಷ ವಯೋಮಾನದ ರೋಗಿಸಂಖ್ಯೆ 2206 (ವೃದ್ಧ), 17 ವರ್ಷ ವಯೋಮಾನದ ರೋಗಿಸಂಖ್ಯೆ 2207 (ಯುವಕ) ಈ 5 ಪಾಸಿಟಿವ್ ರೋಗಿಗಳ ಪೈಕಿ ನಾಲ್ವರು ಮಹಾರಾಷ್ಟ್ರದ ಮುಂಬೈಯಿಂದ ಆಮಿಸಿದ್ದು, ಓರ್ವ ಮಹಾರಾಷ್ಟ್ರದ ಸೊಲ್ಲಾಪೂರದಿಂದ ಆಗಮಿಸಿದ್ದಾರೆ. […]
ಧಾರವಾಡ: ಜಿಲ್ಲೆಯ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರಿಗೆ ಆಯುಷ್ ಔಷಧಿ ವಿತರಣೆಗೆ ಕ್ರಮ : ಎಸ್‍ಪಿ ವರ್ತಿಕಾ ಕಟಿಯಾರ್

ಧಾರವಾಡ ಏ.28: ಕೋವಿಡ್-19 ಕೊರೊನಾ ವೈರಸ್ ತಡೆಗಟ್ಟಲು ಹಗಲಿರುಳು ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ರೋಗ ನಿರೋಧಕ ಹಾಗೂ ವೈರಾಣು ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಯುಷ್ ಔಷಧಿಗಳನ್ನು ವಿತರಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಹೇಳಿದರು. ಜಿಲ್ಲಾ ಆಯುಷ್ ಇಲಾಖೆ ಹಾಗೂ ಜಿಲ್ಲೆಯ ಆಯುಷ್ ವೈದ್ಯರು ನೀಡಿರುವ ಆಯುರ್ವೇದಿಕ್ ಚವನಪ್ರಾಶ್ ಮತ್ತು ಹೋಮಿಯೋಪತಿಯ ಅರ್ಸಾನಿಕ್ ಆಲ್ಬಂ ಮಾತ್ರೆಗಳನ್ನು ಪೊಲೀಸ್ ಪೇದೆಗಳಿಗೆ […]
ಸರ್ಕಾರದ ಶಿಷ್ಠಾಚಾರ ಅನುಸರಿಸಿ: ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಸೂಚನೆ

ಧಾರವಾಡ ಮಾ.19: ಕೊರೊನಾ ವೈರಸ್ ಕೋವಿಡ್-19 ಸೋಂಕು ತಡೆಯಲು ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯರ ಸಹಕಾರವು ಅಗತ್ಯವಾಗಿದೆ. ಕೊರೊನಾ ವೈರಸ್ ಸೋಂಕು ಲಕ್ಷಣಗಳಿರುವವರು ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಬಂದರೆ ಕೂಡಲೇ ಆ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಮಾಹಿತಿ ನೀಡಬೇಕು. ಎಲ್ಲ ಖಾಸಗಿ ಆಸ್ಪತ್ರೆಗಳು ಸರ್ಕಾರ ಸೂಚಿಸಿರುವ ಶಿಷ್ಠಾಚಾರ ಪಾಲಿಸಬೇಕು. ಕೊರೊನಾ ಶಂಕಿತ ವ್ಯಕ್ತಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು. […]