Vijayapura News | ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ₹52 ಕೋಟಿ ವೆಚ್ಚದಲ್ಲಿ 10 ಕಿ.ಮೀ ಕೊಳವೆ ಮಾರ್ಗ ನಿರ್ಮಾಣಕ್ಕೆ ಒಪ್ಪಿಗೆ

ಬಬಲೇಶ್ವರ, ತಿಕೋಟಾ ಪಟ್ಟಣಗಳಿಗೆ 135 ಎಲ್‍ಪಿಸಿಡಿ ನೀರು: ಮುದ್ದೇಬಿಹಾಳ, ಸಿಂದಗಿ, ಬಸವನಬಾಗೇವಾಡಿ ಪಟ್ಟಣಗಳಿಗೆ ನೀರು ಯೋಜನೆ ಚಡಚಣ, ಆಲಮೇಲ, ಮುದ್ದೇಬಿಹಾಳ, ನಾಲತವಾಡ, ಸಿಂದಗಿ, ತಾಳಿಕೋಟೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸೂಚನೆ ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ₹52 ಕೋಟಿ ವೆಚ್ಚದಲ್ಲಿ 10 ಕಿ.ಮೀ ಕೊಳವೆ ಮಾರ್ಗ ನಿರ್ಮಾಣ ಕ್ಕೆ ಒಪ್ಪಿಗೆ ಬೆಂಗಳೂರು: ವಿಜಯಪುರ ನಗರಕ್ಕೆ ಅಲಮಟ್ಟಿ ಹಿನ್ನೀರಿನಿಂದ ಕುಡಿಯುವ ನೀರು ಪೂರೈಸುವ ಸುಮಾರು 10.8 ಕಿ.ಮೀ ಉದ್ದದ ಕೊಳವೆ ಮಾರ್ಗ ಶಿಥಿಲವಾಗಿದ್ದು, ಅದನ್ನು ₹52 ಕೋಟಿ […]

Bengaluru | ಜಮ್ಮು-ಕಾಶ್ಮೀರ ಚುನಾವಣಾ ಫಲಿತಾಂಶ: ಬಿಜೆಪಿ ಗೆಲುವಿಗೆ ಕಪಾಳ ಮೋಕ್ಷ, ಸಚಿವ ಪ್ರಿಯಾಂಕ್ ಖರ್ಗೆ ಉಲ್ಲೇಖ

Jammu and Kashmir Election Result image

ಬೆಂಗಳೂರು: Jammu and Kashmir Election Result ಜಮ್ಮು-ಕಾಶ್ಮೀರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟಗೊಂಡಿವೆ. ಹರಿಯಾಣದಲ್ಲಿ ಚುನಾವಣೋತ್ತರ ಸಮೀಕ್ಷೆ ನಿರೀಕ್ಷೆಗೂ ಮುನ್ನ ಬದಲಾಗಿದ್ದು, ಬಿಜೆಪಿ ಅನಿರೀಕ್ಷಿತ ಗೆಲುವು ಸಾಧಿಸಿದೆ. ಜಮ್ಮು-ಕಾಶ್ಮೀರದಲ್ಲಿ ಎನ್.ಸಿ. ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಫಲಿತಾಂಶಗಳ ಕುರಿತಂತೆ ಸಚಿವ ಪ್ರಿಯಾಂಕ ಖರ್ಗೆ, “ಬಿಜೆಪಿಗೆ ಇದೊಂದು ಕಪಾಳ ಮೋಕ್ಷ,” ಎಂದು ಹೇಳಿದ್ದಾರೆ. Jammu and Kashmir Election Result ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಜಮ್ಮು-ಕಾಶ್ಮೀರದ […]

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಈಗಲೇ ಸೇರ್ಪಡೆ ಮಾಡಿಕೊಳ್ಳಿ.

ಮತದಾರರ image

ಬೆಂಗಳೂರು: ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ 18 ವರ್ಷ ತುಂಬುವ […]

7ನೇ ವೇತನ ಆಯೋಗ ಶೀಘ್ರ ಜಾರಿ: ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಬಜೆಟ್ ನಲ್ಲಿಯೇ 6 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹೆಚ್ಚುವರಿ ಹಣ ಅವಶ್ಯವಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಒದಗಿಸಲಾಗುವುದು ಎಂದು ವರದಿ ಶೀಘ್ರ ಬರಲಿದ್ದು, ಅದರನುಸಾರ ಕ್ರಮವಹಿಸಲಾಗುವುದು ಎಂದ ಮುಖ್ಯಮಂತ್ರಿಗಳು, 2023-24ನೇ ಸಾಲಿನಲ್ಲಿಯೇ […]

ಭ್ರಷ್ಟ ಸಚಿವ ಎಂದರೆ ಅಶ್ವಥ್‌ ನಾರಾಯಣ; DK ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ‘ರಾಜ್ಯದ ಅತ್ಯಂತ ಭ್ರಷ್ಟ ಸಚಿವ ಅಶ್ವಥ್ ನಾರಾಯಣ. ಅದರಲ್ಲಿ ಯಾವುದೇ ಸಂಶಯವಿಲ್ಲ. ಅತ್ಯಂತ ನಂಬಿಕಸ್ಥ ರಾಜಕಾರಣಿ ಎಂದು ಬಣ್ಣಿಸಿಕೊಳ್ಳುವುದು ಕೇವಲ ಬ್ರಾಹ್ಮಣ ಎಂದು ಬಣ್ಣಿಸುವುದು ಮುಖ್ಯವೇ? ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ‘ಹಗರಣಗಳನ್ನು ಸರ್ಕಾರದ ಪ್ರಭಾವದಿಂದಷ್ಟೇ ಮುಚ್ಚಿಹಾಕಲು ಸಾಧ್ಯ. ಪಿಎಸ್ಐ ಪರೀಕ್ಷೆಯಲ್ಲಿ ನಮ್ಮ ಜಿಲ್ಲೆಯ ನಾಲ್ಕೈದು ಜನ ಆಯ್ಕೆಯಾಗಿದ್ದಾರೆ. ಇವರು ನಮಗೆ ಬೇಕಾದ ಹುಡುಗರೇ ಆಗಿದ್ದು, ಈ ಹಗರಣದಲ್ಲಿ ಭಾಗಿಯಾಗಿ ಬಂಧನವಾಗಿದ್ದಾರೆ. ಅವರಿಗೆ ಈ ಅಕ್ರಮದಲ್ಲಿ ಮಂತ್ರಿಗಳು ಸಹಾಯ […]

ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ?; HDK ಟ್ವೀಟ್

ಬೆಂಗಳೂರು: ಕಳೆದ 75 ವರ್ಷಗಳಿಂದ ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಳಿ ಹಿಂಡಿ, ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡುತ್ತಿರುವುದು ಆಘಾತಕಾರಿ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. […]

ಮೇ ೧೬ ರಿಂದ ಶೈಕ್ಷಣಿಕ ವರ್ಷಾರಂಭ- ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಮೇ 16ರಿಂದ ಶೈಕ್ಷಣಿಕ ವರ್ಷಾರಂಭ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕೋವಿಡ್ ಕಾರಣದಿಂದಾಗಿ ನಮ್ಮ ಮಕ್ಕಳ ಕಲಿಕಾ ಮಟ್ಟ, ತರಗತಿಯ ಮಟ್ಟಕ್ಕೆ ಇಲ್ಲ ಎನ್ನುವುದು ನಮ್ಮ ಸರ್ವೆಗಳಲ್ಲಿ, ಕೇಂದ್ರ ಸೇರಿದಂತೆ ಎನ್‌ಜಿಓ ನಡೆಸಿದ ಸರ್ವೆಗಳಲ್ಲಿ ಕಂಡು ಬಂದಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸೂಚನೆ ನೀಡಿರುವ ಹಿನ್ನಲೆಯಲ್ಲಿ, ರಾಜ್ಯದ ಎಲ್ಲಾ ಅಧಿಕಾರಿಗಳು ಸಭೆ ನಡೆಸಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, 2022-23ನೇ ಶೈಕ್ಷಣಿಕ ಸಾಲಿನಲ್ಲಿ 1-9 ನೇ ತರಗತಿಯ […]

ಮುಸ್ಲಿಮ್ ವಿದ್ಯಾರ್ಥಿನಿಯರು ಕ್ಯಾಂಪಸ್ ನಲ್ಲಿ ಹಿಜಾಬ್ ಧರಿಸುವುದಕ್ಕೆ ಯಾವುದೇ ನಿರ್ಬಂಧವಿಲ್ಲ; ತರಗತಿ ಸಮಯದಲ್ಲಿ ಹಾಕುವಂತಿಲ್ಲ.

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್‌ ವಿವಾದ ದಿನದಿಂದ ದಿನಕ್ಕೆ ಗೊಂದಲಗಳ ಗೂಡಾಗುತ್ತಿದೆ. ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಿಗೆ ಹೋಗಲು ಭಯವಾಗುತ್ತಿದೆ. ರಾಜ್ಯದಲ್ಲಿ ಬುಗಿಲ್ಲೆದ್ದಿರುವ ವಿವಾದದಕ್ಕೆ ಸರಕಾರ ತನ್ನ ನಿಲುವನ್ನು ವ್ಯಕ್ತಪಡಿಸಿದೆ. ಮುಸ್ಲಿಮ್ ವಿದ್ಯಾರ್ಥಿನಿಯರು ಕ್ಯಾಂಪಸ್ ನಲ್ಲಿ ಹಿಜಾಬ್ ಧರಿಸುವುದಕ್ಕೆ ಯಾವುದೇ ನಿರ್ಬಂಧವಿಲ್ಲ. ಆದರೆ ತರಗತಿಯಲ್ಲಿ ಮತ್ತು ತರಗತಿಯ ಸಮಯದಲ್ಲಿ ಮಾತ್ರ ಹಿಜಾಬ್ ಧರಿಸುವಂತಿಲ್ಲ. ಅವರು ಯಾವುದೇ ಧರ್ಮದವರಾಗಿದ್ದರೂ ಎಲ್ಲರಿಗೂ ಅದು ಅನ್ವಯಿಸುತ್ತದೆ” ಎಂದು ರಾಜ್ಯ ಸರ್ಕಾರದ ನಿಲುವನ್ನು ಕರ್ನಾಟಕ ಹೈಕೋರ್ಟ್ನಲ್ಲಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಬಲವಾಗಿ ಸಮರ್ಥಿಸಿದರು. ಹಿಜಾಬ್ […]

ವೀಕೆಂಡ್ ಕರ್ಪ್ಯೂ: ಮದ್ಯ ಮಾರಾಟವಾಗದಿದ್ದರೆ ದಿನಕ್ಕೆ 75 ಕೋಟಿ ನಷ್ಟ!!!

ಬೆಂಗಳೂರು: ವೀಕೆಂಡ್ ಕರ್ಪ್ಯೂ ವೇಳೆ ಮದ್ಯ ಮಾರಾಟಕ್ಕೆ ಅವಕಾಶ ಕೊಡದಿದ್ದರೆ ದಿನಕ್ಕೆ 75 ಕೋಟಿ ನಷ್ಟವಾಗುತ್ತದೆ. ಹೀಗಾಗಿ, ವೀಕೆಂಡ್ ಕರ್ಪೂ ವೇಳೆಯಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ವೀಕೆಂಡ್‌ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡಬಹುದಾಗಿದ್ದು, ಬೆಳಗಿನ ಅವಧಿಯಲ್ಲಿ ಮದ್ಯ ಮಾರಾಟ ಮಾಡಲು ಅವಕಾಶ ನೀಡಬಹುದು. ಹೀಗಾಗಿ ವೀಕೆಂಡ್‌ನಲ್ಲಿ ಕೆಲ ಸಮಯದವರೆಗೆ ಮದ್ಯ ಮಾರಾಟ ಮಾಡಲು ಅವಕಾಶ ನೀಡಬೇಕು ಎಂದು ಸಚಿವ ಗೋಪಾಲಯ್ಯ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಲಾಕ್ ಡೌನ್ ಇಲ್ಲ; ಆರೋಗ್ಯ ಸಚಿವ ಡಾ ಕೆ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಇನ್ನು ಮುಂದೆ ಇರುವುದಿಲ್ಲ, ಇನ್ನೇನಿದ್ದರೂ ನಿರ್ಬಂಧ, ನಿಯಮಗಳ ಕಟ್ಟುನಿಟ್ಟಿನ ಪಾಲನೆಯಷ್ಟೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ವೀಕೆಂಡ್ ಕರ್ಪ್ಯೂ ಎಂದು ಹೇರಿದ್ದ ರಾಜ್ಯ ಸರ್ಕಾರ, ಮುಂದೆ ಲಾಕ್ ಡೌನ್ ಮಾಡುತ್ತದೆಯೇ ಎಂಬ ಸಂಶಯ, ಭಯ-ಆತಂಕ ರಾಜ್ಯದ ಜನರಲ್ಲಿ ಮನೆ ಮಾಡಿತ್ತು. ಜನರ ಆತಂಕಕ್ಕೆ ಆರೋಗ್ಯ ಸಚಿವರೇ ಇಂದು ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಆರೋಗ್ಯ ಸಚಿವರು ಕೊರೋನಾ ಮೂರನೇ ಅಲೆಯ ಈ ಸಂದರ್ಭದಲ್ಲಿ ಜನರು […]