ಆಹಾರ ಸುರಕ್ಷತೆ: ಪರಿಶೀಲಿಸಿ ನೋಟಿಸ್ ಜಾರಿ

ಆಹಾರ ಸುರಕ್ಷತೆ image

ಬಾಗಲಕೋಟೆ: ಆಹಾರ ಸುರಕ್ಷತೆ ಆಂದೋಲನ ಹಿನ್ನಲೆಯಲ್ಲಿ ಬಾಗಲಕೋಟೆ ನಗರಸಭೆ ವ್ಯಾಪ್ತಿಯಲ್ಲಿ ಬರುವ ಹೋಟೆಲ್, ರೆಸ್ಟೋರೆಂಟ್, ಖಾನಾವಳಿ ಹಾಗೂ ಬೀದಿಬದಿ ಎಗ್‍ರೈಸ್ ಅಂಗಡಿಗಳಿಗೆ ಜಿಲ್ಲಾ ಆಹಾರ ಸುರಕ್ಷತಾ ಪರಿಶೀಲನಾ ತಂಡ ದಾಳಿ ನಡೆಸಿ ಆಹಾರ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿತು. ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ ಸಾಳಗುಂದ, ಬಸವರಾಜ ಮೊಳೆಗಾಂವಿ, ಇಮಾಮ ಹಸನ್ ಡೋನೂರ, ಶರಣು ರೇವಡಿ ಒಳಗೊಂಡ ತಂಡ ದಾಳಿ ನಡೆಸಿ ರೈಸ್ ಅಂಗಡಿಗಳಲ್ಲಿ ಟೆಸ್ಟಿಂಗ್ ಪೌಡರ, ಆಹಾರದಲ್ಲಿ ಬೆರೆಸುತ್ತಿರುವ ಕಲರ್ಗಗಳ ಬಗ್ಗೆ ಪರಿಶೀಲನೆ ನಡೆಸಿದರು. ಕೆಲವೊಂದು […]

ಪಂಚಾಯತಿ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರು: ಜಿ.ಪಂ ಸಿಇಓ ರಿಷಿ ಆನಂದ ಸೂಚನೆ

ಪಂಚಾಯತಿ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರು image

ವಿಜಯಪುರ: ಪಂಚಾಯತಿ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ಎಲ್ಲ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾ.ಪಂ ಅಧ್ಯಕ್ಷರು, ಸರ್ವಸದಸ್ಯರು ಶ್ರಮ ವಹಿಸಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚಿಸಿದ್ದಾರೆ. ಕೊಲ್ಹಾರ ತಾಲ್ಲೂಕಿನ ಕೂಡಗಿ, ಗ್ರಾಮ ಪಂಚಾಯಿತಿಗೆ ಆ.28ರಂದು ಭೇಟಿ ನೀಡಿ ಎನ್‍ಟಿಪಿಸಿ ಯೋಜನೆಯಡಿಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೂಡಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎನ್‍ಟಿಪಿಸಿ ಯೋಜನೆಗಳ ಸಮರ್ಪಕ ಅನುಷ್ಟಾನಗೊಳಿಸಬೇಕು. […]

ಗ್ರಾಮ ಆರೋಗ್ಯ: 2 ದಿನದ ತರಬೇತಿ ಕಾರ್ಯಾಗಾರ

ಗ್ರಾಮ ಆರೋಗ್ಯ

ಬಾಗಲಕೋಟೆ: ಗ್ರಾಮೀಣ ಭಾಗದ ಜನರ ದೃಷ್ಠಿಯಿಂದ ಇಟ್ಟುಕೊಂಡು ರೂಪಿಸಲಾದ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕೆಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ತಿಳಿಸಿದರು. ಕಾರ್ಯಕ್ರಮ ಅನುಷ್ಠಾನ ಹಿನ್ನಲೆಯಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಎರಡು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ವಿವಿಧ ಇಲಾಖೆಗಳ ಜೊತೆಗೂಡಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಕಾರ್ಯಕ್ರಮದ ಉಸ್ತುವಾರಿ ಗ್ರಾ.ಪಂ ಗ್ರಾ.ಪಂ ಟಾಸ್ಕಪೋರ್ಸ ಸದಸ್ಯರ ಹಾಗೂ ಪಂಚಾಯತ ಅಭಿವೃದ್ದಿ ಅಧಿಕಾರಿಗಳ ಪಾತ್ರ ಮುಖ್ಯವಾಗಿದೆ ಎಂದರು. ಇದನ್ನೂ ಓದಿ: ಅಲ್-ಅಮೀನ ಆಸ್ಪತ್ರೆಯಲ್ಲಿ […]

ಮಹಿಳೆ ಕಾನೂನು ಅರಿವು: ನಾಯಕತ್ವ ಗುಣ – ನಾಗಲಕ್ಷ್ಮೀ

ಮಹಿಳೆ ಕಾನೂನು ಅರಿವು image

ಬಾಗಲಕೋಟೆ: ಒಂದು ಮನೆ ಸುಸಜ್ಜಿತವಾಗಿ ಸಾಗಬೇಕಾದರೆ ಆ ಮನೆಯ ಮೇಲೆ ಹೆಣ್ಣಿನ ಜವಾಬ್ದಾರಿ ಇದ್ದು, ಕುಟುಂಬ ನಿರ್ವಹಣೆಯಲ್ಲಿ ಹೆಣ್ಣು ನಾಯಕತ್ವ ಗುಣ ಹೊಂದಿರುತ್ತಾಳೆ. ಮಹಿಳೆ ಕಾನೂನು ಅರಿವು ಇಂದಿನ ಮಹಿಳೆಗೆ ತುಂಬಾ ಅಗತ್ಯ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಹೇಳಿದರು. ಇದನ್ನೂ ಓದಿ:ಎಫ್‌ಎಕ್ಯೂ ಗುಣಮಟ್ಟ: ಹೆಸರುಕಾಳು 8682 ರೂ.,ಸೂರ್ಯಕಾಂತಿ 7280 ರೂ. ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ […]

ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪನೆ: ಡಿಸಿ ಕರೆ, ಪಿಓಪಿ ಮಾರಾಟ ನಿಷೇಧ

ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪನೆ

ಬಾಗಲಕೋಟೆ: ಉಚ್ಚ ನ್ಯಾಯಾಲಯದ ಆದೇಶದನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವದನ್ನು ನಿಷೇಧಿಸಲಾಗಿದ್ದು, ಇಂತಹ ವಿಗ್ರಹಗಳನ್ನು ಮಾರಾಟ ಮತ್ತು ತಯಾರಿಸುವವರ ವಿರುದ್ದ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ತಿಳಿಸಿದ್ದಾರೆ. ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪನೆ ಕರೆ ನೀಡಿದರು. ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಸಾರ್ವಜನಿಕರು ಪ್ಲಾಸ್ಟರ ಆಫ್ ಪ್ಯಾರಿಸ್ (ಪಿಓಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ […]

ಮಹಿಳಾ ಆಯೋಗದ ಅಧ್ಯಕ್ಷೆ ಮಹಾದೇವಿ ಕಟ್ಟಿಮನಿ ಕುಟುಂಬಕ್ಕೆ ಸಾಂತ್ವನ

ಮಹಿಳಾ ಆಯೋಗದ image

ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಮಂಟೂರ ಗ್ರಾಮದಲ್ಲಿ ಇತ್ತೀಚಿಗೆ ವರದಕ್ಷಿಣೆ ಕಿರುಕುಳದಿಂದ ಹತ್ಯೆಗೆ ಒಳಗಾಗಿರುವ ಮೃತ ಮಹಾದೇವಿ ಕಟ್ಟಿಮನಿ ಅವರ ಮನೆಗೆ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ನವರ ಅಸಲಿ ಮುಖ ಬಹಿರಂಗವಾಗಿದೆ. ಮುಧೋಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹತ್ಯೆಗೆ ಒಳಗಾದ ಮಹಿಳೆಯ ಮನೆಗೆ ಬೇಟಿ ನೀಡಿ ಸಾಂತ್ವನ ಹೇಳಿ, ಪ್ರಕರಣದ ಬಗ್ಗೆ ಪೋಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದು ತಪ್ಪಿತಸ್ಥರ ಮೇಲೆ ಕಾನೂನು […]

ಡಿ.ದೇವರಾಜ ಅರಸು: 109ನೇ ಜಯಂತಿ ಆಚರಣೆ  

ಡಿ.ದೇವಾರಾಜ ಅರಸು image

ಬಾಗಲಕೋಟೆ: ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ದುರ್ಬಲ ವರ್ಗದ ಜನರ ಏಳಿಗೆಗೆ ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ನವನಗರದ ಕಲಾಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾನ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಹಿಂದುಳಿದವರ ಸರ್ವತೋಮುಖ ಅಭಿವೃದ್ದಿಗಾಗಿ ಹತ್ತು ಹಲವು ಕಾರ್ಯಕ್ರಮವನ್ನು ಹಮ್ಮಿಕೊಂಡು ದುರ್ಬಲ ವರ್ಗದ ಜನರ […]

ಬಾಗಲಕೋಟೆ ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ

ಬಾಗಲಕೋಟೆ ನ.26: ಜಿಲ್ಲಾಡಳಿತದ ವತಿಯಿಂದ ಭಾರತದ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಮಹಾದೇವ ಮುರಗಿ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಜ್ಞಾವಿಧಿಯಲ್ಲಿ ಭಾರತದ ಜನತೆಯಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವದಕ್ಕಾಗಿ ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ […]

ಮಾಜಿ ಮುಖ್ಯಮಂತ್ರಿ ಜಯಲಲಿತಾರ 900 ರೂ. ಕೋಟಿ ಆಸ್ತಿ ಯಾರ ಪಾಲಿಗೆ!

ಚನ್ನೈ ಮೇ. 28: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾರ 900 ರೂ. ಕೋಟಿ ಮೌಲ್ಯದ ಆಸ್ತಿಗೆ ಅವರ ಬಂಧುಗಳಾದ ಸೋದರ ಸೊಸೆ ಜೆ.ದೀಪಾ ಹಾಗೂ ಸೋದರ ಅಳಿಯ  ಜೆ.ದೀಪಕ್ ‘ಕಾನೂನುಬದ್ಧ ವಾರಸುದಾರರು’ ಎಂದು ಮದ್ರಾಸ್ ಹೈಕೋರ್ಟ್ ಪರಿಗಣಿಸಿದೆ. ಜಯಾಲಲಿತಾರ  ಸಾವಿನ ನಂತರ ಅವರ ಆಸ್ತಿಯನ್ನು ಗೆಳತಿ ಶಶಿಕಲಾ ಅನುಭವಿಸುತ್ತಿದ್ದರು. ಇದನ್ನು ಪ್ರಶ್ನಿಸಿ ಜಯಾರ ಸೋದರ ಅಳಿಯ ಹೈಕೋರ್ಟ್ ಮೇಟ್ಟಿಲೇರಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್ ಕಿರುಬಾಕರನ್ ಹಾಗೂ ನ್ಯಾಯಮೂರ್ತಿ ಅಬ್ದುಲ್ ಖೂದ್ದಸ್ ಅವರ ಪೀಠ […]

ವಿಜಯಪುರ: ಮುಂದುವರಿದ ಕೊರೋನಾ ಅಟ್ಟಹಾಸ; ಇಂದು ಐವರಲ್ಲಿ ಪಾಸಿಟಿವ್

ವಿಜಯಪುರ ಮೇ.26: ಮಹಾರಾಷ್ಟ್ರದಿಂದ ಆಗಮಿಸಿದ್ದ 5 ಜನರಲ್ಲಿ ಕೊರೋನಾ ಪಾಸಿಟಿವ್ ದೃಡಪಟ್ಟಿದ್ದು, ಜಿಲ್ಲೆಗೆ ಆಮಿಸಿರುವ 18 ವರ್ಷದ ವಯೋಮಾನದ ರೋಗಿ ಸಂಖ್ಯೆ 2203 (ಯುವಕ), 34 ವಯೋಮಾನದ ರೋಗಿಸಂಖ್ಯೆ 2204 (ಪುರುಷ), 30 ವರ್ಷ ವಯೋಮಾನದ ರೋಗಿ ಸಂಖ್ಯೆ 2205 (ಪುರುಷ), 60 ವರ್ಷ ವಯೋಮಾನದ ರೋಗಿಸಂಖ್ಯೆ 2206 (ವೃದ್ಧ), 17 ವರ್ಷ ವಯೋಮಾನದ ರೋಗಿಸಂಖ್ಯೆ 2207 (ಯುವಕ) ಈ 5 ಪಾಸಿಟಿವ್ ರೋಗಿಗಳ ಪೈಕಿ ನಾಲ್ವರು ಮಹಾರಾಷ್ಟ್ರದ ಮುಂಬೈಯಿಂದ ಆಮಿಸಿದ್ದು, ಓರ್ವ ಮಹಾರಾಷ್ಟ್ರದ ಸೊಲ್ಲಾಪೂರದಿಂದ ಆಗಮಿಸಿದ್ದಾರೆ. […]