ವಿಜಯಪುರ | ಗಾಂಧೀಜಿ ತತ್ವ ಸಿದ್ಧಾಂತಗಳಿಗೆ ಬದ್ದರಾಗೋಣ -ಡಾ. ಆನಂದ ಕುಲಕರ್ಣಿ

ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ತತ್ವ ಸಿದ್ಧಾಂತಗಳಿಗೆ ಬದ್ದರಾಗಿ ಬದುಕೋಣ ಅವರ ಸತ್ಯ, ಅಹಿಂಸೆ, ಸಮಾನತೆ, ಸಾಮರಸ್ಯ, ಸ್ವಾವಲಂಬನೆ, ಹಾಗೂ ಗ್ರಾಮ ಸ್ವರಾಜ್ಯದ ಪರಿಕಲ್ಪನೆಗೆ ಮಹತ್ವ ಸಾರಿದ ಗಾಂಧಿಯವರ ಚಿಂತನೆಗಳು ಸರ್ವಕಾಲಿಕ ಎಂದು ವಿಜಯಪುರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಡಾ ಅನಂದ ಕುಲಕರ್ಣಿ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲೂಕ ಹಾಗೂ ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಕುರಿತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಆನಂದ ಕುಲಕರ್ಣಿ […]
ವಿಜಯಪುರ | ಗಾಂಧೀಜಿ, ಶಾಸ್ತ್ರೀಜಿಯವರ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು | BJP ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಭಾರತೀಯ ಜನತಾ ಪಾರ್ಟಿ ವಿಜಯಪುರ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಜನ್ಮ ದಿನಾಚರಣೆಯನ್ನು ನಗರದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಆಚರಿಸಲಾಯಿತು. ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಮಾತನಾಡಿ, ಮಹಾತ್ಮಾ ಗಾಂಧೀಜಿ, ಶಾಸ್ತ್ರೀಜಿಯವರ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು. ಗಾಂಧೀಜಿಯವರು ಅಹಿಂಸಾವಾಧಿಯಾಗಿದ್ದರು. ಗಾಂಧೀಜಿಯವರು ಸ್ವಚ್ಛತೆಗೆ ಬಹಳ ಮಹತ್ವ ನೀಡಿದ್ದಾರೆ. ಶಾಸ್ತ್ರೀಜಿಯವರ ಕೊಡುಗೆ ಅನನ್ಯವಾಗಿದೆ ಎಂದರು. ಇದನ್ನೂ ಓದಿ: ವಿಜಯಪುರ | ಪರಿಸರವನ್ನು ಸ್ವಚ್ಛ ಹಸಿರು […]
ವಿಜಯಪುರ | ಪರಿಸರವನ್ನು ಸ್ವಚ್ಛ ಹಸಿರು ಸ್ಥಳವನ್ನಾಗಿ ಮಾಡೋಣ – ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ

ವಿಜಯಪುರ: ಗಾಂಧಿಜೀಯವರ ಮೌಲ್ಯಗಳನ್ನು ಸ್ಮರಿಸುತ್ತಾ ಅವುಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆ ಮಾಡೋಣ ಪ್ರೀತಿ, ದಯೇ, ಸಹಾನುಭೂತಿಯನ್ನು ಹರಡೋಣ ಭಾರತವನ್ನು ಹಾಗೂ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛ ಹಸಿರು ಸ್ಥಳವನ್ನಾಗಿ ಮಾಡೋಣ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ T. Bhubalan ಕರೆ ನೀಡಿದರು. ಇಂದು ನಗರದ ಆನಂದ ಮಹಲ್ ಆವರಣದಲ್ಲಿ ಜಿಲ್ಲಾಡಳಿತ ನೆಹರು ಯುವ ಕೇಂದ್ರ, ವಿಜಯಪುರ ಲಾಡ್ಲೀ ಪೌಂಡೇಶನ್ ನವದೆಹಲಿ, ಜಿಲ್ಲಾ ಎನ್.ಎಸ್.ಎಸ್. ಘಟಕ, ಕ್ಷೇತ್ರ ಸಂವಹನ ಇಲಾಖೆ, ಸ್ಪಂಧನಾ ಸೇವಾ ಸಂಸ್ಥೆ, ಸಮಪ್ರಭ ಸಂಸ್ಥೆಯವರ […]
Vijayapur News | ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಕೊಡುಗೆ ಅಪಾರ – T. Bhubalan

ವಿಜಯಪುರ: 155th gandhi jayanti ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಸಂದೇಶದ ಮೂಲಕ ನೀಡಿದ ಕೊಡುಗೆ ಅಮೂಲ್ಯವಾದದ್ದು, ಈ ಮಹಾನ್ ವ್ಯಕ್ತಿಗಳ ತ್ಯಾಗ, ನಿಷ್ಠೆ, ಪ್ರಾಮಾಣಿಕತೆ, ಸತ್ಯ, ಅಹಿಂಸಾ, ಸರಳತೆಯ ತತ್ವಾದರ್ಶಗಳನ್ನು ಹಾಗೂ ಅವರ ಜೀವನದ ಸಂದೇಶ ಮೌಲ್ಯಗಳನ್ನು ಯುವ ಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ […]
Bagalkote News | ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ: ಪ್ರಶಸ್ತಿ ಮತ್ತು ನಗದು ಬಹುಮಾನ

ಬಾಗಲಕೋಟೆ: Gandhi’s 155th anniversary ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಮಹಾತ್ಮಾಗಾಂಧೀಯವರ 155ನೇ ಜಯಂತಿ ಅಂಗವಾಗಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನವನ್ನು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಬುಧವಾರ ವಿತರಿಸಿದರು. ಜಿಲ್ಲಾಡಳಿತ ಭವನದ ಮುಖ್ಯ ಆವರಣದಲ್ಲಿ ನಡೆದ ಗಾಂಧೀ ಹಾಗೂ ಶಾಸ್ತ್ರೀ ಜಯಂತಿ ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರೌಡಶಾಲಾ ವಿಭಾಗದಲ್ಲಿ ಬೋಡನಾಯಕದಿನ್ನಿ ಸರಕಾರಿ ಪ್ರೌಡಶಾಲೆಯ […]
Bagalkote News | ಜಿಲ್ಲಾಡಳಿತದಿಂದ ಗಾಂಧಿ ಹಾಗೂ ಶಾಸ್ತ್ರೀ ಜಯಂತಿ ಆಚರಣೆ

ಬಾಗಲಕೋಟೆ: Bagalkote News ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀಯವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಎಚ್.ವಾಯ್.ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ, ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ ಸೇರಿದಂತೆ ಇತರರು […]
Vijayapur News | HAL ನಲ್ಲಿ ಉದ್ಯೋಗಾವಕಾಶ | ITI ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ವಿಜಯಪುರ: ಬೆಂಗಳೂರಿನ ತಾಂತ್ರಿಕ ತರಬೇತಿ ಸಂಸ್ಥೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನಲ್ಲಿ Job Opportunity in HAL ಅಪ್ರೆಂಟಿಶಿಪ್ ತರಬೇತಿಗಾಗಿ ಐಟಿಐ ವ್ಯಾಸಂಗ ಮಾಡಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Job Opportunity in HAL ಐಟಿಐ ಫಿಟ್ಟರ್, ಟರ್ನರ್, ಮಷಿನಿಸ್ಟ್, ಶೀಟ್ ಮೆಟಲ್ ವರ್ಕರ್, ಫೌಂಡ್ರಿಮ್ಯಾನ್, ಕೋಪಾ, ಕಾರ್ಪೆಂಟರ್, ಇಲೆಕ್ಟ್ರಿಷಿಯನ್, ಟೂಲ್ & ಡೈ ಮೇಕರ್, ಅಡ್ವಾನ್ಸ್ಡ್ ಸಿಎನ್‍ಸಿ ಮಷಿನಿಂಗ್ ಹಾಗೂ ವೆಲ್ಡರ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : 30-10-2024 […]
ವಿಜಯಪುರ News | ಗಾಂಧಿ ಜಯಂತಿ | ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ವಿಜಯಪುರ: ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಜಯಂತಿ Gandhi Jayanti ಆಚರಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿತ ದಿನವೆಂದು ಸರ್ಕಾರ ಘೋಷಿಸಿದೆ. ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ವಿಜಯಪುರ ಮಹಾನಗರಪಾಲಿಕೆಯ ಪರಿಸರ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಟಕಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಜಯಪುರ | ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ | ಸ್ವಚ್ಚತೆಗೆ ಮಹತ್ವ ನೀಡಿ- ಜಿಲ್ಲಾಧಿಕಾರಿ […]
Vijayapur News | ಅತಿಕ್ರಮಣ ಕಟ್ಟಡಗಳ ತೆರವು | ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ: ವಿಜಯಪುರ ನಗರದ ವಾರ್ಡ ನಂ.27, 28 ಹಾಗೂ 31ರ ವ್ಯಾಪ್ತಿಯಲ್ಲಿ ಬರುವ ನವಭಾಗ ರಸ್ತೆ, ಒಳಚರಂಡಿ ಮೇಲೆ ಅತಿಕ್ರಮಣ Encroachment building ಮಾಡಿಕೊಂಡು ನಿರ್ಮಿಸಿಕೊಂಡ ಕಟ್ಟಡಗಳನ್ನು ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು. ಸೆ.30ರಂದು ತೆರವು ಕಾರ್ಯಾಚರಣೆ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ, ತೆರವು ಕಾರ್ಯಾಚರಣೆಯನ್ನು ಪರಿಶೀಲಿಸಿದ ಅವರು, ಮುಂಬರುವ ದಿನಗಳಲ್ಲಿ ನಗರದ ವಿವಿಧೆಡೆ ಒತ್ತುವರಿಯಾಗಿರುವ ಸಾರ್ವಜನಿಕ ರಸ್ತೆಗಳನ್ನು ಗುರುತಿಸಿಕೊಂಡು ತೆರವುಗೊಳಿಸಲು ಕ್ರಮ ವಹಿಸಬೇಕು. […]
ಐಪಿಎಸ್ ಅಧಿಕಾರಿ ಚಂದ್ರಶೇಖರ ಅವಹೇಳನಕಾರಿ ಪದ ಬಳಕೆ ಖಂಡಿಸಿ ಅವರನ್ನು ಅಮಾನತುಗೊಳಿಸಲು ಆಗ್ರಹ

ವಿಜಯಪುರ: ಜಿಲ್ಲಾ ಜಾತ್ಯಾತೀತ ಜನತಾದಳ ವಿಜಯಪುರ ವತಿಯಿಂದ ಕೇಂದ್ರ ಸರಕಾರದ ಬೃಹತ್ ಕೈಗಾರಿಕಾ ಮತ್ತು ಉಕ್ಕು ಕಬ್ಬಿಣ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಐಪಿಎಸ್ ಅಧಿಕಾರಿ ಚಂದ್ರಶೇಖರ IPS officer Chandrasekhara ಅವರು ಅವಹೇಳನಕಾರಿ ಪದ ಬಳಕೆ ಖಂಡಿಸಿ ಅವರನ್ನು ಅಮಾನತುಗೊಳಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಜಾತ್ಯಾತೀತ ಜನತಾದಳ ಜಿಲ್ಲಾಧ್ಯಕ್ಷರಾದ ಬಸನಗೌಡ ಎಸ್. ಮಾಡಗಿ ಮಾತನಾಡಿ ಕೇಂದ್ರ ಸರಕಾರದ ಬೃಹತ್ ಕೈಗಾರಿಕಾ ಮತ್ತು ಉಕ್ಕು ಕಬ್ಬಿಣ ಸಚಿವರಾದ ಎಚ್.ಡಿ. ಕುಮಾರಸ್ವಾಮಿ […]