ಮಗುವಿನ ಔಷಧಿಗೆ 6 ಕೋಟಿ ತೆರಿಗೆ ಮನ್ನಾ ಮಾಡಿದ ಪ್ರಧಾನಿ ಮೋದಿ

ಮುಂಬೈ ಫೆ 11: 5 ತಿಂಗಳ ಮಗು ಟೀರಾ ಕಾಮತ್ ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದು, ಆಕೆಯ ಜೀವ ಉಳಿಸಲು ಅಮೇರಿಕಾದಿಂದ ಔಷಧ ತರಿಸಬೇಕಿದ್ದು, ಈ ಔಷಧದ ಮೇಲಿನ ಆಮದು ತೆರಿಗೆಯನ್ನು ಕಡಿತಗೊಳಿಸಲು ಪ್ರಧಾನಿ ಮೋದಿ ಸಮ್ಮತಿ ಸೂಚಿಸಿದ್ದಾರೆ. ಟೀರಾ ಕಾಮತ್ ಗೆ 16 ಕೋಟಿ ರೂ ಮೌಲ್ಯದ ಔಷಧವನ್ನು ಅಮೆರಿಕಾದಿಂದ ಆಮದು ಮಾಡಿಕೊಳ್ಳಬೇಕಿದ್ದು, ಇದರ ಮೇಲಿನ 6 ಕೋಟಿ ರೂಗಳ ಜಿಎಸ್ ಟಿ ಮೊತ್ತವನ್ನು ಪ್ರಧಾನಿ ಮೋದಿ ಮನ್ನಾ ಮಾಡಿದ್ದಾರೆ. ಈಗಾಗಲೇ ಟೀರಾ ಚಿಕಿತ್ಸೆಗಾಗಿ ಪೋಷಕರು […]
ಅಪ್ಪಳಿಸಿದ ‘ನಿವಾರ್’ ಚಂಡಮಾರುತ

ಚೆನ್ನೈ ನ.26: ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ತೀರಕ್ಕೆ ನಿವಾರ್ ಚಂಡಮಾರುತ ಅಪ್ಪಳಿಸಿದೆ. ಗಂಟೆಗೆ 150 ಕಿ.ಮೀ ವೇಗದಲ್ಲಿ ‘ನಿವಾರ್’ ಚಂಡಮಾರುತ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ಪರಿಣಾಮ ತಮಿಳುನಾಡು ಹಾಗೂ ಪುದುಚೇರಿಯ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಬಿರುಗಾಳಿ ಸೃಷ್ಟಿಯಾಗಿದೆ. ನಿವಾರ್ ಚಂಡಮಾರುತವು ತಮಿಳುನಾಡು ಮತ್ತು ಪುದುಚೇರಿ ಕರಾವಳಿಗೆ ರಾತ್ರಿ 11.30 ರಿಂದ 2.30 ರ ನಡುವೆ 120- 130 ಕಿಮೀ ವೇಗದಲ್ಲಿ ಸತತ ಮೂರು ಗಂಟೆಗೂ ಹೆಚ್ಚು ಕಾಲ ಅಪ್ಪಳಿಸಿದೆ. […]
ಶಿರಾ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಗೆ ಗೆಲುವು

ತುಮಕೂರು ನ.10: ಉಪಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಭಾರಿಸಿದೆ. ತನ್ನದಲ್ಲದ ಕ್ಷೇತ್ರಗಳನ್ನು ಬಿಜೆಪಿ ತನ್ನ ವಶಕ್ಕೆ ಪಡೆದಿದೆ. ಆರ್ ಆರ್ ನಗರದಲ್ಲಿ ಮುನಿರತ್ನ ಹಾಗೂ ಶಿರಾದಲ್ಲಿ ಡಾ.ರಾಜೇಶ ಗೌಡ ಗೆಲುವು ಸಾಧಿಸಿದ್ದಾರೆ. ಮುನಿರತ್ನ ಕ್ಷೇತ್ರದ ಹಾಲಿ ಶಾಸಕರಾಗಿದ್ದು, 3ನೇ ಬಾರಿಗೆ ಗೆಲುವುದು ಸಾಧಿಸಿದ್ದಾರೆ. ಮೊದಲ ಚುನಾವಣೆಯಲ್ಲಿ ಅವರು 17 ಸಾವಿರ, 2ನೇ ಚುನಾವಣೆಯಲ್ಲಿ 26 ಸಾವಿರ ಹಾಗೂ 3ನೇ ಚುನಾವಣೆಯಲ್ಲಿ 57 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ. ಶಿರಾ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಗೆಲುವು […]
ಲಾಕ್ ಡೌನ್ ಅವಧಿಯಲ್ಲಿ ಉದ್ಯೋಗ ಕಳೆದುಕೊಂಡವರಿಗೆ ಸರಕಾರ ನೀಡಲಿದೆ 3 ತಿಂಗಳ ವೇತನ; ಅರ್ಜಿ ಸಲ್ಲಿಸುವ ಮಾಹಿತಿ ನೋಡಿ

ಹೊಸದಿಲ್ಲಿ ಅ.17: ಲಾಕ್ಡೌನ್ ಅವಧಿಯಲ್ಲಿ ಎಷ್ಟೋ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಉದ್ಯೋಗವಿಲ್ಲದೆ ಸಂಸಾರದ ನಿರ್ವಹಣೆ ಎಷ್ಟು ಕಷ್ಟ ಅಂತಾ ಉದ್ಯೋಗ ಕಳೆದುಕೊಂಡವರಿಗೆ ಗೋತು. ಅಂಥವರಿಗೆ ಇಲ್ಲೊಂದು ಶುಭ ಸಮಾಚಾರವವಿದೆ. ಉದ್ಯೋಗ ಕಳೆದುಕೊಂಡವರಿಗೆ ಕೇಂದ್ರ ಸರಕಾರ ಸಹಾಯಹಸ್ತ ನೀಡಲು ಮುಂದಾಗಿದ್ದು, ಅಟಲ್ ಬೀಮಿತಿ ವ್ಯಕ್ತಿ ಕಲ್ಯಾಣ್ ಯೋಜನೆಯನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಬಗ್ಗೆ ಶುಕ್ರವಾರ ಅಧಿಕೃತ ಅಧಿಸೂಚನೆಯನ್ನೂ ಹೊರಡಿಸಿದೆ. ಲಾಕ್ ಡೌನ್ ಅವಧಿಯಲ್ಲಿ ಉದ್ಯೋಗ ಕಳೆದುಕೊಂಡವರಿಗೆ ‘ಅಟಲ್ ಬೀಮಿತಿ ವ್ಯಕ್ತಿ ಕಲ್ಯಾಣ್ ಯೋಜನೆ’ ( ಎಬಿವಿಕೆವೈ) ಯಡಿ […]
ಜಿಲ್ಲಾ ಪಂಚಾಯಿತಿ ವತಿಯಿಂದ ಸ್ವಚ್ಛೋತ್ಸವ-ನಿತ್ಸೋತ್ಸವ ಕಾರ್ಯಕ್ರಮ

ಹಾಸನ ಸೆ. 30:- ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಘನ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಗ್ರಾಮೀಣ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಅಕ್ಟೋಬರ್ 2 ರಿಂದ 31 ರವರೆಗೆ ಸ್ವಚ್ಛೋತ್ಸವ-ನಿತ್ಸೋತ್ಸವ ಮಾಸಾಚರಣೆ ಕಾರ್ಯಕ್ರಮವನ್ನು ಆಯೋಜಿಸಲು ಹಾಸನ ಜಿಲ್ಲಾ ಪಂಚಾಯತ್ ಮುಂದಾಗಿದೆ. ರಾಜ್ಯದ ಪ್ರತಿಯೊಂದು ಗ್ರಾಮವು ಸ್ವಚ್ಛ, ಸುಂದರ ಆರೋಗ್ಯಕರ ಮತ್ತು ತ್ಯಾಜ್ಯ ಮುಕ್ತವಾಗಿಸುವ ಉದ್ದೇಶದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ರಾಜ್ಯಾದ್ಯಂತ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕಗಳನ್ನು […]
ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಹೃದಯಾಘಾತದಿಂದ ನಿಧನ

ನವದೆಹಲಿ ಸ 12: ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಅವರು ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 80 ವರ್ಷದ ಸ್ವಾಮಿ ಅಗ್ನಿವೇಶ್ ಅವರ ಆರೋಗ್ಯ ಸ್ಥಿತಿ ಕಳೆದ ಕೆಲ ದಿನಗಳಿಂದ ಗಂಭೀರವಾಗಿತ್ತು. ಹೀಗಾಗಿ ಕಳೆದ ಮಂಗಳವಾರ ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಗೆ ದಾಖಲಾಗಿದ್ದರು. ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಕರ ದಿನಾಚರಣೆ : ಗಣ್ಯರಿಂದ ಶುಭಾಶಯಗಳು

ಹೊಸದಿಲ್ಲಿ: ದೇಶದ ಮೊದಲ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಶಿಕ್ಷಕರ ದಿನಾಚರಣೆ ಈ ವರ್ಷ ಮಾತ್ರ ಕೊರೊನಾ ಸಂಕಷ್ಟದಿಂದಾಗಿ ಕಳೆಗುಂದಿದೆ. ಮತ್ತು ದೇಶದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಶೋಕಾಚರಣೆ ಆಚರಿಸುವುದರಿಂದ ಈ ಬಾರಿ ಶಿಕ್ಷಕರ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿಲ್ಲ. ಪ್ರಧಾನಿ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಶಿಕ್ಷಕರ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮಾಡಿ, ರಾಷ್ಟ್ರ ನಿರ್ಮಾಣ ಮತ್ತು ವ್ಯಕ್ತಿತ್ವ ರೂಪಿಸುವುದರಲ್ಲಿ ಅವಿರತ ಶ್ರಮ ಪಡುತ್ತಿರುವ […]
ಇಂದ್ರಜಿತ್ ಗೆ ಮುತಾಲಿಕ್ ಪ್ರಶ್ನೆ

ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಟೀಕಿಸಿದ್ದಾರೆ. ಚಿತ್ರರಂಗ, ರಾಜಕಾರಣಿಗಳ ಮಕ್ಕಳ ಡ್ರಗ್ ದಂಧೆ ಬಗ್ಗೆ ಮಾತನಾಡುತ್ತಿರುವ ಇಂದ್ರಜಿತ್, ಅವರ ಅಕ್ಕ ಗೌರಿಲಂಕೇಶ್ ಕೂಡ ಡ್ರಗ್ ಎಡಿಟ್ ಆಗಿದ್ದರು. ಆಗ ಏಕೆ ಈ ಬಗ್ಗೆ ಪ್ರಶ್ನಿಸಲಿಲ್ಲ. ಆಕೆಯನ್ನು ಏಕೆ ಸುಧಾರಿಸುವಲ್ಲಿ ಪ್ರಯತ್ನ ಪಟ್ಟಿಲ್ಲ ಎಂದು ಪ್ರಶ್ನಿಸಿದ್ದಾರೆ. ಒಡಹುಟ್ಟಿದ ಅಕ್ಕಳನ್ನು ಸುಧಾರಿಸದ ಇಂದ್ರಜಿತ್ ಲಂಕೇಶ್ ಇಂದು ಚಿತ್ರರಂಗದ ನಟನಟಿಯರ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದಿದ್ದಾರೆ. ಇಂದ್ರಜಿತ್ ಲಂಕೇಶ್ ಅವರು ಕನ್ನಡ ಚಿತ್ರರಂಗದ […]
ಆನ್ ಲೈನ್ ಕ್ಲಾಸ್ ಹ್ಯಾಕ್ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ ಮಾಡಿದ ದುಷ್ಕರ್ಮಿಗಳು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಆನ್‌ಲೈನ್ ತರಗತಿಗಳನ್ನು ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ಅಶ್ಲೀಲ ವೀಡಿಯೊಗಳನ್ನು ಹಾಗೂ ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ದುಷ್ಕೃತ್ಯವೆಸಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೇರಳ ಪೊಲೀಸರ ವಿಶೇಷ ತಂಡ ತನಿಖೆ ಆರಂಭಿಸಿದ್ದು, ಮೊದಲ ಘಟನೆ ಎಡಪ್ಪಲ್‌ನ ಖಾಸಗಿ ಶಾಲೆಯಿಂದ ವರದಿಯಾಗಿತ್ತು.ಎಡಪ್ಪಲ್‌ನ ಸಿಬಿಎಸ್‌ಇ ಶಾಲೆಯ ಅಧಿಕಾರಿಗಳು 7 ನೇ ತರಗತಿ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ತರಗತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ತಮ್ಮ ನಗ್ನ ವೀಡಿಯೊಗಳನ್ನು ಲೈವ್-ಸ್ಟ್ರೀಮ್ ಮಾಡಿದ್ದಾರೆ ಎಂಬ ದೂರಿನೊಂದಿಗೆ ಮಲಪ್ಪುರಂನ ಚೈಲ್ಡ್ ಲೈನ್ ಅಧಿಕಾರಿಗಳನ್ನು ಸಂಪರ್ಕಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರು […]
ಇಎಂಐ ವಿನಾಯಿತಿ ಮುಂದುವರಿಕೆ ಇಲ್ಲ: ಆರ್ ಬಿ ಐ

ನವದೆಹಲಿ. ಸೆಪ್ಟೆಂಬರ್ 01: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ 6 ತಿಂಗಳ ಕಾಲ ಮುಂದೂಡಲಾಗಿದ್ದ ಸಾಲದ ಮೇಲಿನ ಇಎಂಐ ಪಾವತಿ ಇಂದಿನಿಂದ ಶುರುವಾಗಲಿದೆ ಎಂದು ಆರ್ ಬಿಐ ಸ್ಪಷ್ಟಪಡಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಸಾಲ ಪಾವತಿ ಮುಂದೂಡುವುದು ತಾತ್ಕಾಲಿಕ ಪರಿಹಾರ, ಇದರಿಂದ ಬ್ಯಾಂಕ್ ಗಳಿಗೆ ಭಾರಿ ಸಮಸ್ಯೆಯಾಗಲಿದೆ. ಇದರಿಂದ ಸಾಲ ಮರುಪಾವತಿದಾರರಿಗೂ ಪರಿಹಾರ ಸಿಗುವುದಿಲ್ಲ. ಆದ್ದರಿಂದ ಸೆ.1 ರಿಂದ ಸಾಲ ಮರುಪಾವತಿ ವಿನಾಯಿತಿ ಮುಂದುವರಿಸುವುದಿಲ್ಲ ಎಂದು ಹೇಳಿದ್ದಾರೆ. ಕೊರೋನಾ […]