ಪ್ರಧಾನಿಯವರ ಅಧ್ಯಕ್ಷತೆಯಲ್ಲಿ COVID-19 ಪರಿಶೀಲನಾ ಸಭೆ

COVID-19 ನಿಗ್ರಹಕ್ಕೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಪರೀಕ್ಷಾ ಸೌಲಭ್ಯಗಳನ್ನು ಇನ್ನಷ್ಟು ಹೆಚ್ಚಿಸುವುದೂ ಸೇರಿದಂತೆ ಭಾರತದ ಸನ್ನದ್ಧತೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು. COVID-19 ರ ಭೀತಿಯ ವಿರುದ್ಧ ಹೋರಾಡಲು ಆಡಳಿತವು ವ್ಯಕ್ತಿಗಳು, ಸ್ಥಳೀಯ ಸಮುದಾಯಗಳು ಮತ್ತು ಸಂಸ್ಥೆಗಳೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಬಗ್ಗೆ ಪ್ರಧಾನಿಯವರು ಒತ್ತಿ ಹೇಳಿದರು. ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು ಮತ್ತು ತಂತ್ರಜ್ಞರು ಆಲೋಚಿಸಬೇಕು ಅವರು ಆಗ್ರಹಿಸಿದರು. ವಿವಿಧ […]