ಕಾಣಿಕೆ ಹುಂಡಿಗಳಲ್ಲಿ ಕಾಂಡೋಮ್ ಹಾಕುತ್ತಿದ್ದ ವ್ಯಕ್ತಿಯ ಬಂಧನ

ಮಂಗಳೂರು: ದೇವಸ್ಥಾನ, ದೈವಸ್ಥಾನ, ಮಸೀದಿ ಸೇರಿದಂತೆ ಸುಮಾರು 18 ಕಡೆಗಳಲ್ಲಿ ಕಾಣಿಕೆ ಡಬ್ಬಗಳಲ್ಲಿ ಕಾಂಡೋಮ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ 62 ವರ್ಷದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯು ಮಂಗಳೂರು ಹೊರವಲಯದ ಕೋಟೆಕಾರು ಕೊಂಡಾಣದಲ್ಲಿ ವಾಸಿಸುತ್ತಿದ್ದು, ಹುಬ್ಬಳ್ಳಿ ಮೂಲದ ಪ್ರಸ್ತುತ ಮಂಗಳೂರಿನಲ್ಲಿ ವಾಸವಿರುವ ದೇವದಾಸ್ ದೇಸಾಯಿ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಜನರು ತಪ್ಪಾಗಿ ಆರಾಧನೆ ಮಾಡುತ್ತಾ ದೇವರ ಅವಕೃಪೆಗೆ ಪಾತ್ರರಾಗುತ್ತಿದ್ದಾರೆ. ನೀವು ಆರಾಧಿಸುವ ದೇವರಿಗೆ ಕಾಣಿಕೆ ಡಬ್ಬಿಯನ್ನೇ […]
13 ವರ್ಷದ ಮಗುವಿನ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ

ಕಲಬುರ್ಗಿ: 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 70 ವರ್ಷದ ವ್ಯಕ್ತಿಯನ್ನು ಗುರುವಾರ ಕಲಬುರಗಿ ಜಿಲ್ಲೆಯ ರೇವೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಆರೋಪಿ ಬಾಲಕಿಗೆ ತಿನ್ನಲು ಕೊಡುವದಾಗಿ ಆಸೆ ತೋರಿಸಿ ತನ್ನ ಹೊಲದಲ್ಲಿ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಸಂಜೆ ತಂದೆ-ತಾಯಿ ಕೆಲಸ ಮುಗಿಸಿ ಹಿಂತಿರುಗಿದಾಗ ತಮ್ಮ ಮಗಳು ಅಳುತ್ತಿರುವುದು ಕಂಡು ಬಂತು. ಬಲವಂತದ ನಂತರ, ಮಗು ಭಯಾನಕ ಘಟನೆಯನ್ನು ವಿವರಿಸಿತು ಎಂದು ಹೆತ್ತವರು ತಿಳಿಸಿದ್ದಾರೆ. ಮರುದಿನ ಪೋಷಕರು ದೂರು […]
ಕೇಂದ್ರ ಸರಕಾರದ 3 ಕೃಷಿ ತಿದ್ದುಪಡಿ ಕಾಯ್ದೆ ವಾಸ್

ನವದೆಹಲಿ: ಮೋದಿ ನೇತೃತ್ವದ ಕೇಂದ್ರ ಸರಕಾರ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದಾರೆ. ಚಳಿಗಾಲದ ಸಂಸತ್ತ ಅಧಿವೇಶನದಲ್ಲಿ ಕಾಯ್ದೆಗಳನ್ನು ಹಿಂಪಡೆಯಲಾಗುವುದು ಎಂದು ತಿಳಿಸಿದ್ದಾರೆ. ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಲಿ, ರೈತರ ಆದಾಯವು ದ್ವಿಗುಣವಾಗೊಳಿಸಲು ಕೃಷಿ ಕಾಯ್ದೆಯನ್ನ ಜಾರಿಗೆ ತಂದೆವು. ರೈತರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಹಿಂಪಡೆಯಲಾಗಿದೆ ಎಂದು ಮೋದಿ ಸ್ಪಷ್ಟಪಡಿಸಿದರು. ದೇಶವನ್ನುದ್ದೇಶಿಸಿ ಮಾತನಾಡಿ ಮೋದಿ ರೈತಪರ ಯೋಜನೆಗಳ ಜೊತೆ ರೈತರಿಗೆ ಸೂಕ್ತ ಬೆಂಬಲ ಬೆಲೆ […]
ಸುಪ್ರೀಂ ಕೋರ್ಟ್ ಗೆ ಸುಳ್ಳು ಹೇಳಿದ ಕೇಂದ್ರ ಸರಕಾರ #ModiGovtLied ಹ್ಯಾಷ್ ಟ್ಯಾಗ್

“ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್‌ಗೆ ಸುಳ್ಳು ಹೇಳಿದೆ” ಎಂದು #ModiGovtLied ಎಂಬ ಹ್ಯಾಷ್ ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ. ದೆಹಲಿ ಮತ್ತು ಉತ್ತರದ ಭಾರತದ ರಾಜ್ಯಗಳಲ್ಲಿ ಗಾಳಿಯ ಗುಣಮಟ್ಟ ಹದಗೆಡಲು ಕೃಷಿ ತ್ಯಾಜ್ಯ ಸುಡುವಿಕೆ ಪ್ರಮುಖ ಕಾರಣವಲ್ಲ ಎಂದಿರುವ ಕೇಂದ್ರ ಸರ್ಕಾರ, ಒಟ್ಟು ವಾಯು ಮಾಲಿನ್ಯದಲ್ಲಿ ಶೇಕಡಾ 10ರಷ್ಟು ಮಾಲಿನ್ಯ ಮಾತ್ರ ಕೃಷಿ ತ್ಯಾಜ್ಯ ಸುಡುವುದರಿಂದ ಆಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದು ಅಪ್ಪಟ ಸುಳ್ಳಿನ ಸಂಗತಿ ಎಂದು ಜನರು ವಾದಿಸಿದ್ದಾರೆ. ವಾಯು ಮಾಲಿನ್ಯಕ್ಕೆ ಸಾರಿಗೆ, ಕೈಗಾರಿಕೆಗಳು, […]
ಯುವಕ-ಯುವತಿಯನ್ನು ಹಿಂಬಾಲಿಸಿ ಅನೈತಿಕ ಪೊಲೀಸ್ ಗಿರಿ; ಆರು ಮಂದಿ ಅಂದರ್

ಮಂಗಳೂರು: ಆರು ಮಂದಿ ಯುವಕರ ಗುಂಪು ಅನೈತಿಕ ಪೊಲೀಸ್ ಗಿರಿ ಘಟನೆ ಮಂಗಳೂರು ನಗರದ ಸುರತ್ಕಲ್ ನಲ್ಲಿಂದು ನಡೆದಿದೆ. ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿ ಮೇಲೆ ಅನೈತಿಕ ಪೊಲೀಸ್ ಗಿರಿಯನ್ನು ಆರು ಮಂದಿ ಗುಂಪು ನಡೆಸಲಾಗಿತ್ತು ಎನ್ನಲಾಗಿದೆ. ಈ ಕುರಿತು ವಿಚಾರಣೆ ನಡೆಸಿದ ಪೊಲೀಸರು ಒಟ್ಟು 6 ಜನ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರನ್ನು ಪ್ರಹ್ಲಾದ್, ಪ್ರಶಾಂತ್, ಗುರು ಪ್ರಸಾದ್, ಪ್ರತೀಶ್, ಭರತ್, ಸುಖೇಶ್ ಎಂದು ಗುರುತಿಸಲಾಗಿದೆ. ಯುವಕ – ಯುವತಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಫಾಲೋ ಮಾಡಿದ […]
ಎರಡನೇ ಡೋಸ್ ಹಾಕಿಸಿಕೊಳ್ಳಲು 12 ವಾರಗಳ ನಂತರ ಲಸಿಕೆ ಕೇಂದ್ರಕ್ಕೆ ಬಗ್ಗೆ : ರಾಜ್ಯ ಸರಕಾರ

ಬೆಂಗಳೂರು ಮೇ 15: ಮೊದಲ ಡೋಸ್ ಲಸಿಕೆ ಪಡೆದವರು 12 ವಾರಗಳವರೆಗೆ ಲಸಿಕೆ ಕೇಂದ್ರಕ್ಕೆ ಬಾರದಂತೆ ರಾಜ್ಯ ಸರ್ಕಾರ ಹೇಳಿದೆ, ತಜ್ಞರು ನೀಡಿರುವ ಸಲಹೆಯನ್ನು ಉಲ್ಲೇಖಿಸಿರುವ ರಾಜ್ಯ ಸರ್ಕಾರದ ಲಸಿಕಾ ಅಭಿಯಾನದ ನಿರ್ದೇಶಕರು, “ಬದಲಾದ ನಿಯಮಗಳ ಪ್ರಕಾರ ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆದವರಿಗೆ 12-16 ವಾರಗಳ ಅಂತರದಲ್ಲಿ ಎರಡನೇ ಡೋಸ್ ನೀಡಬಹುದಾಗಿದೆ ಎಂದು ರೋಗನಿರೋಧಕ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್ ಟಿಎಜಿಐ) ಲಸಿಕೆ ಸಂಬಂಧ ರಾಷ್ಟ್ರೀಯ ತಜ್ಞರ ಗುಂಪು (ಎನ್ಇಜಿವಿಎಸಿ) ತಿಳಿಸಿದೆ. 6-8 ವಾರಗಳಲ್ಲಿ […]
ಕೊವೀಡ್ ಲಸಿಕೆ ತಯಾರಿಕಾ ಸೂತ್ರ ಇತರ ಕಂಪನಿಗಳ ಜೊತೆ ಹಂಚಿಕೊಳ್ಳಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲಹೆ

ನವದೆಹಲಿ ಮೇ 11: ಕೋವಿಡ್ ಲಸಿಕೆ ಉತ್ಪಾದನೆ ಹೆಚ್ಚಿಸಲು ದೇಶದ ಇತರ ಕಂಪನಿಗಳೊಂದಿಗೆ ತಯಾರಿಕಾ ಲಸಿಕೆ ಸೂತ್ರವನ್ನು ಕೇಂದ್ರ ಸರ್ಕಾರ ಹಂಚಿಕೊಳ್ಳಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲಹೆ ನೀಡಿದ್ದಾರೆ. ದೇಶದಲ್ಲಿ ಲಸಿಕೆ ಕೊರತೆ ಇದ್ದು, ಕೆಲವು ತಿಂಗಳುಗಳಲ್ಲಿ ಎಲ್ಲರಿಗೂ ಲಸಿಕೆ ನೀಡುವ ರಾಷ್ಟ್ರೀಯ ನೀತಿಯನ್ನು ಅಭಿವೃದ್ಧಿಪಡಿಸಲು ಸಮರೋಪಾದಿಯಲ್ಲಿ ಲಸಿಕೆಯ ಉತ್ಪಾದನೆ ಹೆಚ್ಚಿಸುವ ತುರ್ತು ಅವಶ್ಯಕತೆಯಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ದೇಶದ ಎಲ್ಲಾ ಲಸಿಕೆ ಉತ್ಪಾದನಾ ಘಟಕಗಳು ಕೋವಿಡ್ ಲಸಿಕೆ ಉತ್ಪಾದಿಸಲು ಪ್ರಾರಂಭಿಸುವಂತೆ ಕೇಂದ್ರ ಸರ್ಕಾರ […]
ಸುವರ್ಣ ಸೌಧವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿ: ಸರ್ಕಾರಕ್ಕೆ ಶಾಸಕಿ ಅಂಜಲಿ ನಿಂಬಾಳಕರ್ ಪತ್ರ

ಬೆಳಗಾವಿ ಮೇ 07: ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಬೆಳಗಾವಿಯ ಸುವರ್ಣ ಸೌಧವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಬಳಕೆ ಮಾಡಿಕೊಳ್ಳುವಂತೆ ಕಾಂಗ್ರೆಸ್ ನ ಬೆಳಗಾವಿ ಖಾನಾಪುರ ಕ್ಷೇತ್ರದ ಶಾಸಕಿ ಡಾ ಅಂಜಲಿ ಹೇಮಂತ್ ನಿಂಬಾಳಕರ್ ಸರ್ಕಾರವನ್ನು ಒತ್ತಾಯಿಸಿ ಪತ್ರ ಬರೆದಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ದಿನದ ಸೋಂಕಿತರ ಸಂಖ್ಯೆ ಸಾವಿರ ಸಮೀಪಕಕೆ ಬಂದಿದೆ. ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆಯುಂಟಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕಳೆದ ಎರಡು ವರ್ಷಗಳಿಂದ ಯಾವುದೇ ಅಧಿವೇಶನಗಳನ್ನು ನಡೆಸದೆ ವ್ಯರ್ಥವಾಗಿ ಕೋಟ್ಯಂತರ ರೂಪಾಯಿ […]
ಪಂಚರಾಜ್ಯಗಳಲ್ಲಿ ಬಿಎಸ್ಪಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ

ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿಯವರು ಮುಂಬರುವ ಪಂಚರಾಜ್ಯ ಚುನಾವಣೆಯಲ್ಲಿ ಬಹುಜನ ಸಮಾಜವಾದಿ ಪಕ್ಷ ಯಾರೊಂದಿಗು ಮೈತ್ರಿ ಮಾಡಿಕೊಳ್ಳದೇ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ. ಅಸ್ಸಾಂ ಹೊರತು ಪಡಿಸಿ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಮತ್ತು ಪುದುಚೇರಿಯಲ್ಲಿ ಈ ಚುನಾವಣೆಯಲ್ಲಿ ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಇತರ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಕಹಿ ಅನುಭವಿಸಿದ್ದೇವೆ. ಮುಂದಿನ ವರ್ಷ ನಡೆಯಲಿರುವ ಯುಪಿ ವಿಧಾನಸಭಾ ಚುನಾವಣೆಯಲ್ಲಿಯೂ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂದು ಕಾನ್ಸಿರಾಮ್ ಅವರ 87 ನೇ ಜನ್ಮ ದಿನಾಚರಣೆಯಂದು ಗೌರವ ಸಲ್ಲಿಕೆ […]
ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ವಾರಂಟ್

ಮಂಗಳೂರು ಫೆ.11: ಖ್ಯಾತ ನಟಿ ಪದ್ಮಜಾ ರಾವ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿದೆ. 40 ಲಕ್ಷ ರೂಪಾಯಿ ಚೆಕ್ ಬೌನ್ಸ್ ಆಗಿದ್ದ ಹಿನ್ನೆಲೆಯಲ್ಲಿ ಸಂಸ್ಥೆಯ ಮಾಲೀಕರು ಹಾಗೂ ನಿರ್ದೇಶಕ ವೀರೇಂದ್ರ ಶಟ್ಟೆ ಒಡೆತನದ ವೀರೂ ಟಾಕೀಸ್ ಸಂಸ್ಥೆಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ಜೆ ಎಂ ಎಂ ಸಿ 5ನೇ ನ್ಯಾಯಾಲಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ. ಪದ್ಮಜಾಗೆ ಬಂಧನ […]