ಬೆಳಗಾವಿ: ಅಪಘಾತದಲ್ಲಿ ಮೃತಪಟ್ಟ ಪಿಎಸ್‍ಐ ಗಣಾಚಾರಿ ಪಾರ್ಥಿವ ಶರೀರಕ್ಕೆ ಸಚಿವ ಜಗದೀಶ್ ಶೆಟ್ಟರ್ ಅವರಿಂದ ಅಂತಿಮ ನಮನ

ಬೆಳಗಾವಿ, ಏ.18 : ಕೊರೋನಾ ಸೊಂಕು ಹಿನ್ನೆಲೆಯಲ್ಲಿ ಲಾಕ್ ಡೌನ್ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದ್ದ ಸಂದರ್ಭದಲ್ಲಿ ಅಪಘಾತದಲ್ಲಿ ಮೃತಪಟ್ಟಿರುವ ಬೆಳಗಾವಿ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್‍ಐ ಮನೋಹರ ಗಣಾಚಾರಿ ಅವರ ಪಾರ್ಥಿವ ಶರೀರದ ದರ್ಶನ ಪಡೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಶ್ರದ್ಧಾಂಜಲಿ ಸಲ್ಲಿಸಿದರು. ಇಲ್ಲಿನ ಪೊಲೀಸ್ ಹುತಾತ್ಮ ಮೈದಾನದಲ್ಲಿ ಇರಿಸಲಾಗಿದ್ದ ಪಾರ್ಥಿವ ದರ್ಶನ ಪಡೆದ ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಕೂಡ ಶ್ರದ್ಧಾಂಜಲಿ […]
ಸಾರ್ವಜನಿಕರಿಗೆ ಆತ್ಮವಿಶ್ವಾಸದ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬೈಕ್ ರ್ಯಾಲಿ ಮೂಲಕ ಜಾಗೃತಿ

ಹಾವೇರಿ: ಎ. 18 : ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಜಾರಿಗೊಂಡಿರುವ ಲಾಕ್‍ಡೌನ್ ಪಾಲನೆ, ಕರೋನಾ ಸೋಂಕು ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಅಗತ್ಯ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಆತ್ಮವಿಶ್ವಾಸ ತುಂಬುವ ಸಂದೇಶವನ್ನು ಸಾರ್ವಜನಿಕರಿಗೆ ಸಾರಲು ಪೊಲೀಸ್ ಇಲಾಖೆ ನಗರದಲ್ಲಿ ಪೊಲೀಸ್ ರೂಟ್ ಮಾರ್ಚ್ ಹಾಗೂ ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು. ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ್ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಹೊಸಮನಿ ಸಿದ್ದಪ್ಪ ವೃತ್ತದಿಂದ […]
ಕೊರೋನಾ ಲಾಕ್ ಡೌನ್ ಬೇಜಾರಾದರೆ ಅಂಗೈಯಲ್ಲಿ ಇ-ಗ್ರಂಥಾಲಯ

ದೇಶದಲ್ಲಿ ಲಾಕ್ ಡೌನ್ ಪರಿಸ್ಥಿತಿ ಕಾರಣ ಸಾರ್ವಜನಿಕ ಗ್ರಂಥಾಲಯಗಳಿಲ್ಲದೆ ಬೇಜಾರಾಗಿರುವ ಓದುಗರಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಇ-ಗ್ರಂಥಾಲಯ ವೆಬ್‍ಸೈಟ್ ಪರಿಚಯಿಸಿದೆ. ಲಾಕ್ ಡೌನ್‍ನಿಂದ ಹೋಂ ಕ್ವಾರಂಟೈನ್, ಐಸೋಲೆಷನ್‍ನಲ್ಲಿರುವ ಮತ್ತು ಮನೆಯಲ್ಲಿ ಶ್ರೀಸಾಮಾನ್ಯ ಓದುಗರಿಗೆ ಅನುಕೂಲವಾಗಲು ಹಾಗೂ ಓದುವ ಹವ್ಯಾಸ ಬೆಳೆಸಿಕೊಳ್ಳುವವರಿಗಾಗಿ ಆಂಗೈಯಲ್ಲೆ ಇ-ಗ್ರಂಥಾಲಯ ಎನ್ನುವ ವೆಬ್‍ಸೈಟ್ ಆ್ಯಪ್ ತಂತ್ರಾಂಶ ಅಭಿವೃದ್ಧಿ ಪಡಿಸಿದೆ. ಇ-ಪುಸ್ತಕ ಓದಲು ಸಾರ್ವಜನಿಕರು ಟ್ಯಾಬ್, ಕಂಪ್ಯೂಟರ್, ಲ್ಯಾಪ್‍ಟಾಪ್ ನಲ್ಲಿ www.Karnatakadigitalpubliclibrary.org ಗೆ ಭೇಟಿ ನೀಡಬಹುದು ಅಥವಾ ಮೊಬೈಲ್‍ನಲ್ಲಿ ಗೂಗಲ್ ಪ್ಲೇ ಸ್ಟೋರ್ ಹೋಗಿ ಇ-ಸಾರ್ವಜನಿಕ […]
ಬೆಳಗಾವಿ- ಕೇಂದ್ರದ ಅನುದಾನದ ಬಗ್ಗೆ ತುಟಿ ಬಿಚ್ಚದ ತ್ರಿಮೂರ್ತಿ ಸಂಸದರು !

ಬೆಳಗಾವಿ ಜಿಲ್ಲೆಯಲ್ಲಿ ಮೂವರು ಸಂಸದರು ಇದ್ದಾರೆ. ಅದರಲ್ಲಿ ಒಬ್ಬರು ಕೇಂದ್ರದ ರಾಜ್ಯ ಮಂತ್ರಿ ಕೂಡಾ ಇದ್ದಾರೆ, ಅವರು ಇದೂವರೆಗೂ ಕೊರೋಣಾ ವಿರೂದ್ದ ಹೊರಾಡಲು ಕೇಂದ್ರದಿಂದ ಬಂದ ಅನುದಾನ ಎಷ್ಟು ಎಂಬುದರ ಬಗ್ಗೆ ತುಟಿ ಬಿಚ್ಚದೇ ಕೇವಲ ಬಿಟ್ಟಿ ಪ್ರಚಾರ ಪ್ರೀಯರಾಗಿದ್ದಾರೆ. ಸಂಸದರಲ್ಲಿ ಒಬ್ಬರು ರೈಲು ಮಂತ್ರಿ ಹಾಗೂ ಬೆಳಗಾವಿ ಸಂಸದರಾದ ಸುರೇಶ ಅಂಗಡಿ, ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಮತ್ತು ಜಿಲ್ಲೆಯ ರಾಜ್ಯ ಸಭಾ ಸದಸ್ಯ ಡಾ ಪ್ರಭಾಕರ ಕೋರೆ ಈ ರೀತಿ ಮೂರು ಜನ ಸಂಸದರಿದ್ದು […]
ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 3 ಸೋಂಕಿತರು ಪತ್ತೆ : 17 ಕ್ಕೇರಿದ ಸಂಖ್ಯೆ

ಬೆಳಗಾವಿ ಎ.13 : ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಇಂದು ಮಧ್ಯಾಹ್ನದ ವರೆಗೆ ಮತ್ತೆ ಮೂವರಲ್ಲಿ ಸೋಂಕು ಇರುವುದು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 17ಕ್ಕೆ ಏರಿದೆ. ಹೊಸದಾಗಿ ಪತ್ತೆಯಾಗಿರುವ ಮೂವರೂ ಕೂಡ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದವರಾಗಿದ್ದು, ಅವರಲ್ಲಿ ಓರ್ವ 14 ವರ್ಷದ ಬಾಲಕ, ಇನ್ನೋರ್ವ 20 ವರ್ಷದ ಯುವಕ ಮತ್ತು ಮತ್ತೊಬ್ಬ 45 ವರ್ಷದ ವ್ಯಕ್ತಿಯಾಗಿದ್ದಾನೆ. ಅವರೆಲ್ಲ ಈಗಾಗಲೇ ಅಲ್ಲಿ ಪತ್ತೆಯಾಗಿರುವ ಏಳು […]
ಅನಾವಶ್ಯಕವಾಗಿ ಓಡಾಡುವ ವಾಹನ ಸವಾರರೆ ಎಚ್ಚರ !

ವಿಜಯಪುರ ಎ.07: ಲಾಕ್‍ಡೌನ್ ಪರಿಣಾಮಕಾರಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ, ಕೋರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಅನಾವಶ್ಯಕವಾಗಿ ಓಡಾಡುವ ದ್ವಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶ ನೀಡಿದ್ದಾರೆ. ಈ ಆದೇಶವನ್ನು ಉಲ್ಲಂಘಿಸುವವರ ವಾಹನವನ್ನು ವಶಪಡಿಸಿಕೊಂಡು (ಸೀಜ್) ತಡೆಹಿಡಿಯುವ ಅಧಿಕಾರವನ್ನು ಲಾಕ್‍ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಆಯಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರುಗಳಿಗೆ ಅಧಿಕಾರಿವನ್ನು ಪ್ರತ್ಯಾಯೋಜಿಸಿ ಆದೇಶಿಸಲಾಗಿದ್ದು, ಈ […]
ಎಪ್ರೀಲ್ 9ರಂದು ಮುಸ್ಲಿಂ ಪ್ರಾರ್ಥನಾ ಸ್ಥಳಗಳಿಗೆ ನಿರ್ಬಂಧ

ವಿಜಯಪುರ ಎ.06: ಸರ್ಕಾರದ ನಿರ್ದೇಶನದನ್ವಯ ಕೋವಿಡ್-19 ಮುನ್ನೆಚ್ಚರಿಕೆಯಾಗಿ ಇದೇ ಎಪ್ರೀಲ್ 9ರಂದು ಮುಸ್ಲಿಂರಿಗೆ ಅತ್ಯಂತ ಮಹತ್ವದ ದಿನವಾಗಿರುವ ಶಬ್-ಎ-ಬರಾತ್‍ದಂದು ಯಾರೂ ಒಟ್ಟುಗೂಡಿ ಧಾರ್ಮಿಕ ಪ್ರಾರ್ಥನೆ ಅಂಗವಾಗಿ ಮಸೀದಿ, ಮುಸ್ಲಿಂ ಖಬ್ರಸ್ಥಾನ ಹಾಗೂ ದರ್ಗಾಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಆಕ್ವಾಫ್ (AUQAF) ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಇಸ್ಲಾಹುದ್ದೀನ್ ಗದ್ಯಾಳ ಅವರು ಆದೇಶ ಹೊರಡಿಸಿದ್ದಾರೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ. ಕೋವಿಡ್-19 ಅಪಾಯದ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಮುಸ್ಲಿಂ ಖಬ್ರಸ್ಥಾನಗಳಲ್ಲಿ ಮತ್ತು ಖಬ್ರಸ್ಥಾನದ […]
ಸರ್ಕಾರದ ಶಿಷ್ಠಾಚಾರ ಅನುಸರಿಸಿ: ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಸೂಚನೆ

ಧಾರವಾಡ ಮಾ.19: ಕೊರೊನಾ ವೈರಸ್ ಕೋವಿಡ್-19 ಸೋಂಕು ತಡೆಯಲು ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯರ ಸಹಕಾರವು ಅಗತ್ಯವಾಗಿದೆ. ಕೊರೊನಾ ವೈರಸ್ ಸೋಂಕು ಲಕ್ಷಣಗಳಿರುವವರು ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಬಂದರೆ ಕೂಡಲೇ ಆ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಮಾಹಿತಿ ನೀಡಬೇಕು. ಎಲ್ಲ ಖಾಸಗಿ ಆಸ್ಪತ್ರೆಗಳು ಸರ್ಕಾರ ಸೂಚಿಸಿರುವ ಶಿಷ್ಠಾಚಾರ ಪಾಲಿಸಬೇಕು. ಕೊರೊನಾ ಶಂಕಿತ ವ್ಯಕ್ತಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು. […]