ವಿಜಯಪುರ | ಪರಿಸರವನ್ನು ಸ್ವಚ್ಛ ಹಸಿರು ಸ್ಥಳವನ್ನಾಗಿ ಮಾಡೋಣ – ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ

ವಿಜಯಪುರ: ಗಾಂಧಿಜೀಯವರ ಮೌಲ್ಯಗಳನ್ನು ಸ್ಮರಿಸುತ್ತಾ ಅವುಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆ ಮಾಡೋಣ ಪ್ರೀತಿ, ದಯೇ, ಸಹಾನುಭೂತಿಯನ್ನು ಹರಡೋಣ ಭಾರತವನ್ನು ಹಾಗೂ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛ ಹಸಿರು ಸ್ಥಳವನ್ನಾಗಿ ಮಾಡೋಣ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ T. Bhubalan ಕರೆ ನೀಡಿದರು. ಇಂದು ನಗರದ ಆನಂದ ಮಹಲ್ ಆವರಣದಲ್ಲಿ ಜಿಲ್ಲಾಡಳಿತ ನೆಹರು ಯುವ ಕೇಂದ್ರ, ವಿಜಯಪುರ ಲಾಡ್ಲೀ ಪೌಂಡೇಶನ್ ನವದೆಹಲಿ, ಜಿಲ್ಲಾ ಎನ್.ಎಸ್.ಎಸ್. ಘಟಕ, ಕ್ಷೇತ್ರ ಸಂವಹನ ಇಲಾಖೆ, ಸ್ಪಂಧನಾ ಸೇವಾ ಸಂಸ್ಥೆ, ಸಮಪ್ರಭ ಸಂಸ್ಥೆಯವರ […]
Vijayapur News | ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಕೊಡುಗೆ ಅಪಾರ – T. Bhubalan

ವಿಜಯಪುರ: 155th gandhi jayanti ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಸಂದೇಶದ ಮೂಲಕ ನೀಡಿದ ಕೊಡುಗೆ ಅಮೂಲ್ಯವಾದದ್ದು, ಈ ಮಹಾನ್ ವ್ಯಕ್ತಿಗಳ ತ್ಯಾಗ, ನಿಷ್ಠೆ, ಪ್ರಾಮಾಣಿಕತೆ, ಸತ್ಯ, ಅಹಿಂಸಾ, ಸರಳತೆಯ ತತ್ವಾದರ್ಶಗಳನ್ನು ಹಾಗೂ ಅವರ ಜೀವನದ ಸಂದೇಶ ಮೌಲ್ಯಗಳನ್ನು ಯುವ ಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ […]
Vijayapur News | HAL ನಲ್ಲಿ ಉದ್ಯೋಗಾವಕಾಶ | ITI ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ವಿಜಯಪುರ: ಬೆಂಗಳೂರಿನ ತಾಂತ್ರಿಕ ತರಬೇತಿ ಸಂಸ್ಥೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನಲ್ಲಿ Job Opportunity in HAL ಅಪ್ರೆಂಟಿಶಿಪ್ ತರಬೇತಿಗಾಗಿ ಐಟಿಐ ವ್ಯಾಸಂಗ ಮಾಡಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Job Opportunity in HAL ಐಟಿಐ ಫಿಟ್ಟರ್, ಟರ್ನರ್, ಮಷಿನಿಸ್ಟ್, ಶೀಟ್ ಮೆಟಲ್ ವರ್ಕರ್, ಫೌಂಡ್ರಿಮ್ಯಾನ್, ಕೋಪಾ, ಕಾರ್ಪೆಂಟರ್, ಇಲೆಕ್ಟ್ರಿಷಿಯನ್, ಟೂಲ್ & ಡೈ ಮೇಕರ್, ಅಡ್ವಾನ್ಸ್ಡ್ ಸಿಎನ್‍ಸಿ ಮಷಿನಿಂಗ್ ಹಾಗೂ ವೆಲ್ಡರ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : 30-10-2024 […]
ವಿಜಯಪುರ News | ಗಾಂಧಿ ಜಯಂತಿ | ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ವಿಜಯಪುರ: ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಜಯಂತಿ Gandhi Jayanti ಆಚರಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿತ ದಿನವೆಂದು ಸರ್ಕಾರ ಘೋಷಿಸಿದೆ. ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ವಿಜಯಪುರ ಮಹಾನಗರಪಾಲಿಕೆಯ ಪರಿಸರ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಟಕಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಜಯಪುರ | ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ | ಸ್ವಚ್ಚತೆಗೆ ಮಹತ್ವ ನೀಡಿ- ಜಿಲ್ಲಾಧಿಕಾರಿ […]
Vijayapur News | ಅತಿಕ್ರಮಣ ಕಟ್ಟಡಗಳ ತೆರವು | ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ: ವಿಜಯಪುರ ನಗರದ ವಾರ್ಡ ನಂ.27, 28 ಹಾಗೂ 31ರ ವ್ಯಾಪ್ತಿಯಲ್ಲಿ ಬರುವ ನವಭಾಗ ರಸ್ತೆ, ಒಳಚರಂಡಿ ಮೇಲೆ ಅತಿಕ್ರಮಣ Encroachment building ಮಾಡಿಕೊಂಡು ನಿರ್ಮಿಸಿಕೊಂಡ ಕಟ್ಟಡಗಳನ್ನು ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು. ಸೆ.30ರಂದು ತೆರವು ಕಾರ್ಯಾಚರಣೆ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ, ತೆರವು ಕಾರ್ಯಾಚರಣೆಯನ್ನು ಪರಿಶೀಲಿಸಿದ ಅವರು, ಮುಂಬರುವ ದಿನಗಳಲ್ಲಿ ನಗರದ ವಿವಿಧೆಡೆ ಒತ್ತುವರಿಯಾಗಿರುವ ಸಾರ್ವಜನಿಕ ರಸ್ತೆಗಳನ್ನು ಗುರುತಿಸಿಕೊಂಡು ತೆರವುಗೊಳಿಸಲು ಕ್ರಮ ವಹಿಸಬೇಕು. […]
ವಿಜಯಪುರ | ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ | ಸ್ವಚ್ಚತೆಗೆ ಮಹತ್ವ ನೀಡಿ- ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ: Mahatma Gandhi Jayanti ಎಲ್ಲರೂ ದೈನಂದಿನ ಜೀವನದಲ್ಲಿ ಸ್ವಚ್ಛತೆಗೆ ಮಹತ್ವ ನೀಡಬೇಕು. ಸ್ವಚ್ಛತೆಯನ್ನು ರೂಢಿಸಿಕೊಂಡು, ಪರಿಸರ ನೈರ್ಮಲ್ಯದೊಂದಿಗೆ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ Lal Bahadur Shastri ಅವರ ಜಯಂತಿಯ ಮುನ್ನಾದಿನ ಜಿಲ್ಲಾಡಳಿತದಿಂದ ಹಮ್ಮಿಕೊಂಡ ಸ್ವಚ್ಚತಾ ಜಾಗೃತಿ ಅಭಿಯಾನ ಹಾಗೂ ಸೈಕಲ್ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಇದನ್ನೂ ಓದಿ: ಐಪಿಎಸ್ ಅಧಿಕಾರಿ ಚಂದ್ರಶೇಖರ ಅವಹೇಳನಕಾರಿ ಪದ ಬಳಕೆ ಖಂಡಿಸಿ ಅವರನ್ನು ಅಮಾನತುಗೊಳಿಸಲು ಆಗ್ರಹ […]
ಐಪಿಎಸ್ ಅಧಿಕಾರಿ ಚಂದ್ರಶೇಖರ ಅವಹೇಳನಕಾರಿ ಪದ ಬಳಕೆ ಖಂಡಿಸಿ ಅವರನ್ನು ಅಮಾನತುಗೊಳಿಸಲು ಆಗ್ರಹ

ವಿಜಯಪುರ: ಜಿಲ್ಲಾ ಜಾತ್ಯಾತೀತ ಜನತಾದಳ ವಿಜಯಪುರ ವತಿಯಿಂದ ಕೇಂದ್ರ ಸರಕಾರದ ಬೃಹತ್ ಕೈಗಾರಿಕಾ ಮತ್ತು ಉಕ್ಕು ಕಬ್ಬಿಣ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಐಪಿಎಸ್ ಅಧಿಕಾರಿ ಚಂದ್ರಶೇಖರ IPS officer Chandrasekhara ಅವರು ಅವಹೇಳನಕಾರಿ ಪದ ಬಳಕೆ ಖಂಡಿಸಿ ಅವರನ್ನು ಅಮಾನತುಗೊಳಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಜಾತ್ಯಾತೀತ ಜನತಾದಳ ಜಿಲ್ಲಾಧ್ಯಕ್ಷರಾದ ಬಸನಗೌಡ ಎಸ್. ಮಾಡಗಿ ಮಾತನಾಡಿ ಕೇಂದ್ರ ಸರಕಾರದ ಬೃಹತ್ ಕೈಗಾರಿಕಾ ಮತ್ತು ಉಕ್ಕು ಕಬ್ಬಿಣ ಸಚಿವರಾದ ಎಚ್.ಡಿ. ಕುಮಾರಸ್ವಾಮಿ […]
ರಂಗನಾಥ ಬತ್ತಾಸಿ ದಂಪತಿಗಳಿಂದ ಕರ್ನಾಟಕ ವೈಭವ ನೃತ್ಯ ರೂಪಕ ಪ್ರದರ್ಶನ

ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ Karnataka Border Area Development Authority, ಕನ್ನಡ ಮತ್ತು ಸಂಸ್ಕøತಿ ಇಲಾಖೆ Department of Kannada and Culture, ಜಿಲ್ಲಾಡಳಿತ ವಿಜಯಪುರ ಜಿಲ್ಲೆ ಹಾಗೂ ಶ್ರೀ ಗುಡ್ಡಾಪುರ ದಾನಮ್ಮದೇವಿ ದೇವಸ್ಥಾ ಟ್ರಸ್ಟ್ ಹಾಗೂ ಕರ್ನಾಟಕ / ಮಹಾರಾಷ್ಟ್ರ ರಾಜ್ಯದ ಎಲ್ಲಾ ಕನ್ನಡ ಪರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಹಮ್ಮಿಕೊಂಡ ಕರ್ನಾಟಕ ಸಂಭ್ರಮ -50 ಸಾಂಸ್ಕøತಿ ಕಾರ್ಯಕ್ರಮದಲ್ಲಿ ವಿಜಯಪುರದ ನವರಸ ನೃತ್ಯ ಕಲಾ ಸಂಸ್ಥೆಯ ಅಂತರಾಷ್ಟ್ರೀಯ […]
ಜಯಕರ್ನಾಟಕ ಸಂಘಟನೆ: ಅಕ್ರಮ ಗೃಹ ಬಳಕೆ ಸಿಲೆಂಡರ್ ಸರಬರಾಜು ದಂಧೆಗೆ ಕಡಿವಾಣ ಹಾಕಲು ಆಗ್ರಹ

ವಿಜಯಪುರ: ಅವ್ಯಾಹಿತವಾಗಿ ನಡೆಯುತ್ತಿರುವ ಗೃಹ ಬಳಕೆ ಅಡುವೆ ಸಿಲೆಂಡರ್‍ಗಳನ್ನು ಅಕ್ರಮವಾಗಿ ಆಟೋಗಳಿಗೆ ಸರಬರಾಜು ಮಾಡುತ್ತಿರುವ ದಂಧೆಯು ವಿಜಯಪುರದಲ್ಲಿ ತಲೆ ಎತ್ತಿದ್ದು, ಈ ಅಕ್ರಮ ಅನೀಲ ಸರಬರಾಜು ದಂಧೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಜಯಕರ್ನಾಟಕ ಸಂಘಟನೆ, ವಿಜಯಪುರ ಜಿಲ್ಲಾ ಘಟಕ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: Vijayapur News | ಕರ್ನಾಟಕ ಸಂಭ್ರಮ-50 ಆಚರಣೆ | ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಜಿಲ್ಲಾಧ್ಯಕ್ಷರಾದ ಸಂಗಮೇಶ ಸಿದ್ದನಗೌಡ ದಾಶ್ಯಾಳ ರವರು ಮಾತನಾಡಿ, ವಿಜಯಪುರ ನಗರದಲ್ಲಿ ಬಹಳ […]
Vijayapur News | ಕರ್ನಾಟಕ ಸಂಭ್ರಮ-50 ಆಚರಣೆ | ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ

ವಿಜಯಪುರ: Karnataka Celebration-50th Celebration ರಾಜ್ಯದ 742 ಗ್ರಾಮಗಳಲ್ಲಿ ವಾಸಿಸುವ ಕನ್ನಡಿಗರ ಸಮಸ್ಯೆ ನಮ್ಮ ಸಮಸ್ಯೆ, ಗಡಿನಾಡ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಿ, ಕನ್ನಡಿಗರು ವಾಸಿಸುವ ಗ್ರಾಮಗಳಲ್ಲಿ ಅಗತ್ಯವಿರುವ ರಸ್ತೆ, ನೀರು, ಬಸ್ ಸೌಕರ್ಯ, ಶಿಕ್ಷಣ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಖಾತೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಅವರು ಭರವಸೆ ನೀಡಿದರು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, […]