ನೂತನ ಕೇಂದ್ರ ಕಾರಾಗೃಹಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ

ಡಿಸಿ ಟಿ.ಭೂಬಾಲನ್

ವಿಜಯಪುರ ಡಿ.02: ವಿಜಯಪುರದ ಅರಕೇರಿ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ ನೂತನ ಕೇಂದ್ರ ಕಾರಾಗೃಹದ ಕಾಮಗಾರಿ ಸ್ಥಳಕ್ಕೆ ಭೇಟಿ ಶುಕ್ರವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೂತನ ಕೇಂದ್ರ ಕಾರಾಗೃಹಕ್ಕೆ ಭೂತನಾಳ ಕೆರೆಯಿಂದ ನೀರಿನ ಸೌಲಭ್ಯವನ್ನು ಒದಗಿಸುವ 650.00 ಲಕ್ಷಗಳ ಅಂದಾಜು ವೆಚ್ಚದ ಪ್ರಸ್ತಾವನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು, ನೂತನ ಕೇಂದ್ರ ಕಾರಾಗೃಹದ ಕಾಮಗಾರಿಗಳ ಎಲ್ಲ ವಿಭಾಗಗಳ ವೀಕ್ಷಣೆ ನಡೆಸಿ, ಕಾರಾಗೃಹದ ಹೊರವೃತ್ತದ ಸುತ್ತುವರಿಗೆ ತೆರಳಿ ಭದ್ರತಾ ಗೋಡೆಯನ್ನು ವೀಕ್ಷಿಸಿದರು. ಈ […]

ಪೌರಕಾರ್ಮಿಕರಿಗೆ ಗೌರವ ನೀಡುವುದು ಪ್ರತಿ ನಾಗರಿಕನ ಕರ್ತವ್ಯ:ವಿಜಯಕುಮಾರ ಆಜೂರ

ಕರಿಜನ ನ್ಯೂಜ

ವಿಜಯಪುರ ಡಿ.02: ಗ್ರಾಮ ನಗರ ಸ್ವಚ್ಛತೆಯನ್ನು ಹೆಚ್ಚಿಸುವಲ್ಲಿ ಪೌರಕಾರ್ಮಿಕರ ಪಾತ್ರ ಅನನ್ಯವಾಗಿದ್ದು, ಸಮಾಜದಲ್ಲಿ ಪೌರ ಕಾರ್ಮಿಕರಿಗೆ ಗೌರವ ನೀಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ನಗರಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿಜಯಪುರ ವತಿಯಿಂದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ಪೌರಕಾರ್ಮಿಕರಿಗೆ ಇ.ಎಸ್.ಐ, ಪಿಎಫ್ ವಿಮೆ, ಸ್ವಚ್ಛತೆ ಮತ್ತು ಆರೋಗ್ಯ ಕುರಿತು ಅರಿವು ಮೂಡಿಸುವ ಒಂದು ದಿನದ ಕಾರ್ಯಗಾರಕ್ಕೆ […]

ಸಾಂಸ್ಕೃತಿಕ ನೆಲಗಟ್ಟಿನ ಬೆಸುಗೆ ಬೆಸೆಯುವ ಅತ್ಯಮೂಲ್ಯವಾದ ಕಲೆಗಳನ್ನು ಪ್ರೋತ್ಸಾಹಿಸಬೇಕು:ಸಿ.ಬಿ.ನಾಟೀಕಾರ

ವಿಜಯಪುರ ನ.28: ನಮ್ಮ ದೇಶವು ಭವ್ಯ ಪರಂಪರೆ ಇತಿಹಾಸ ಹೊಂದಿದ ದೇಶವಾಗಿದೆ. ಜಗತ್ಪ್ರಸಿದ್ಧಿಯಾದ ನಮ್ಮ ಸಂಸ್ಕೃತಿ, ಕಲೆ, ಸಾಹಿತ್ಯ, ಜಾನಪದ ಕಲೆಗಳನ್ನು ಪ್ರೋತ್ಸಾಹಿಸಬೇಕು ಎಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ ಸಿ.ಬಿ ನಾಟೀಕಾರ ಹೇಳಿದರು. ಇಂದು ನಗರದ ಬಾಲಕೀಯರ ಸರ್ಕಾರಿ ಪದವ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತ ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಸಂಭ್ರಮ-50 ಅಂಗವಾಗಿ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮವನ್ನು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಜನಪದರು ತಮ್ಮ […]

ಅನಧಿಕೃತವಾಗಿ ಮಕ್ಕಳನ್ನು ದತ್ತು ಪಡೆದುಕೊಳ್ಳುವುದು ಕಾನೂನು ಬಾಹಿರ:ಶಂಕರ ಮಾರಿಹಾಳ

ವಿಜಯಪುರ ನ.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಭವನ, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ದತ್ತು ಮಾಸಾಚರಣೆ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಂಡಿತ ಜವಾಹರಲಾಲ ನೆಹರು ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ […]

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮತ್ತು ಯೋಗಕ್ಷೇಮದ ಮೇಲೆ ಮೊಬೈಲ್ ಸಾಧನಗಳ ಪ್ರಭಾವ

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ image

ಸ್ಮಾರ್ಟ್‌ಫೋನ್‌ಗಳು ಮತ್ತು ಟ್ಯಾಬ್ಲೆಟ್‌ಗಳಂತಹ ಮೊಬೈಲ್ ಸಾಧನಗಳು ವಿದ್ಯಾರ್ಥಿಗಳು ಮಾಹಿತಿಯನ್ನು ಪ್ರವೇಶಿಸುವ, ಸಂವಹನ ಮಾಡುವ ಮತ್ತು ಕಲಿಯುವ ವಿಧಾನವನ್ನು ಕ್ರಾಂತಿಗೊಳಿಸಿವೆ. ಬೆರಳಿನ ಟ್ಯಾಪ್ ಮೂಲಕ, ವಿದ್ಯಾರ್ಥಿಗಳು ಶೈಕ್ಷಣಿಕ ಸಂಪನ್ಮೂಲಗಳನ್ನು ಅನ್ವೇಷಿಸಬಹುದು, ಗೆಳೆಯರೊಂದಿಗೆ ಸಹಕರಿಸಬಹುದು ಮತ್ತು ಅವರ ಸುತ್ತಲಿನ ಪ್ರಪಂಚದೊಂದಿಗೆ ಸಂಪರ್ಕದಲ್ಲಿರಬಹುದು. ಆದಾಗ್ಯೂ, ಈ ಅನುಕೂಲವು ಅದರ ಸವಾಲುಗಳ ಗುಂಪಿನೊಂದಿಗೆ ಬರುತ್ತದೆ, ಅವರ ಶೈಕ್ಷಣಿಕ ಮತ್ತು ವೈಯಕ್ತಿಕ ಜೀವನದ ವಿವಿಧ ಅಂಶಗಳ ಮೇಲೆ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮೇಲೆ ಪ್ರಭಾವ ಬೀರುತ್ತದೆ. ವಿದ್ಯಾರ್ಥಿಗಳ ಮೇಲೆ ಮೊಬೈಲ್ ಸಾಧನಗಳ ಧನಾತ್ಮಕ ಪರಿಣಾಮ […]

ಬರ ಪರಿಹಾರ ನೀಡುವಂತೆ ರೈತ ಸಂಘದಿಂದ ಒತ್ತಾಯ

ಸಿದ್ದರಾಮಯ್ಯನವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳಿಂದ ಮನವಿ ಸಲ್ಲಿಸಿ ಆಗ್ರಹಿಸಲಾಯಿತು,

ವಿಜಯಪುರ ನ.20: ವಿಜಯಪುರ ನಗರದಲ್ಲಿ ಡಿ.ಸಿ.ಸಿ ಬ್ಯಾಂಕನ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿದ್ದರು. ಇದೆ ವೇಳೆ ರೈತ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯವರಿಗೆ ಕಳೆದ 5 ತಿಂಗಳಿನಿಂದ ಮಳೆ ಬಾರದೇ ನಾಡಿನ ಎಲ್ಲಾ ರೈತರು ತುಂಬಾ ಕಷ್ಟದಲ್ಲಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ಅನೇಕ ರೀತಿಯ ಸಮಿಕ್ಷೇಗಳನ್ನು ಮಾಡಿಸಲಾಗಿದೆ. ಆದರೆ ಇನ್ನೂವರೆಗೂ ಬರಗಾಲಕ್ಕೆ ಸಂಭಂದಿಸಿದಂತೆ ಯಾವುದೇ ಪರಿಹಾರ ಬಂದಿಲ್ಲ. ಕೂಡಲೇ ಪರಿಹಾರ ನೀಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ […]

ಪ್ರಭಾರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಲೋಕಾಯುಕ್ತ ಪೊಲೀಸರ ಬಲೆಗೆ: 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಇಂಜಿನಿಯರ್

ಲಂಚ image

ವಿಜಯಪುರ ನ.18: ಗುತ್ತಿಗೆದಾರನ ಬಿಲ್ ಪಾವತಿಗೆ 5 ಲಕ್ಷ ರೂ. ಲಂಚದ ಬೇಡಿಕೆ ಇಟ್ಟ ಕೃಷ್ಣಾ ಮೇಲ್ದಂಡೆ ಯೋಜನೆ ಪುರ್ನವಸತಿ ಮತ್ತು ಪುನರ್ ನಿರ್ಮಾಣ ಇಲಾಖೆ ಪ್ರಭಾರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆಲಮಟ್ಟಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವಪ್ಪ ಎಸ್.ಮಂಜಿನಾಳ ಗುತ್ತಿಗೆದಾರನೊಬ್ಬನ 5.38 ಕೋಟಿ ರೂ. ಮೊತ್ತದ ಬಿಲ್ಲಿನಲ್ಲಿ ಕೊನೆಯ ಕಂತು 32 ಲಕ್ಷ ಬಿಲ್ ಪಾಸ್ ಮಾಡಲು ತನ್ನ ಕಾರಿನ ಚಾಲಕ ಬಸನಗೌಡ ಗೌಡರ ಅವರೊಂದಿಗೆ ದಿನಾಂಕ […]

ಸಾವಿನಂಚಿನಲ್ಲಿದ್ದ ಜೀವಕ್ಕೆ ಮರುಜೀವ ನೀಡಿದ ಜೆಎಸ್‍ಎಸ್ ಆಸ್ಪತ್ರೆ

ಜೆಎಸ್‌ಎಸ್ ಆಸ್ಪತ್ರೆ image

ವೈಯಕ್ತಿಕ ಕಾರಣಗಳಿಂದ ವಿಷ ಸೇವನೆ ಮಾಡಿ ಆಸ್ಪತ್ರೆಗೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ದಾಖಲಾಗಿದ್ದ ಕಲ್ಲಪ (ಹೆಸರು ಬದಲಿಸಲಾಗಿದೆ) ಎನ್ನುವ ವ್ಯಕ್ತಿಯು ಅದಗಲೇ ಸಾವಿನ ಅಂಚಿನಲ್ಲಿದ್ದ. ವಿಷ ಸೇವಿಸಿದ್ದನ್ನು ಗಮನಿಸಿ ನಗರದ ವಿವಿಧ ಆಸ್ಪತ್ರೆಗಳಿಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ ಮನೆಯವರಿಗೆ ಇವರ ಬದುಕಿನ ಕುರಿತು ಯಾವುದೇ ಭರವಸೆ ದೊರೆಯಲಿಲ್ಲ. ವಿಷದ ಪರಿಣಾಮ ಮೆದುಳಿನ ಮೇಲೆ ಆಗಿದ್ದರಿಂದ ಈ ವ್ಯಕ್ತಿ ಬದುಕುಳಿಯುವುದು ಬಹುತೇಕ ಅಸಾಧ್ಯ. ಒಂದು ವೇಳೆ ಬದುಕುಳಿದರು ಬಹು ಅಂಗಾಗ ವೈಫಲ್ಯಕ್ಕೆ […]

ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಮಹಿಳೆಯರಿಗೆ ಐತಿಹಾಸಿಕ ದಿನ: ಜನಪರ ಯೋಜನೆಗಳ ಮೂಲಕ ನುಡಿದಂತೆ ನಡೆದಿದ್ದೇವೆ.- ಎಂ.ಬಿ ಪಾಟೀಲ

ವಿಜಯಪುರ, ಆ.30 ಮಹಿಳೆಯರ ಆರ್ಥಿಕ ಸಬಲೀಕರಣದ ನಿಟ್ಟಿನಲ್ಲಿ ಇಂದು ಐತಿಹಾಸಿಕ ದಿನವಾಗಿದೆ. ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಮೂಲಕ ದಿಟ್ಟ ಹೆಜ್ಜೆಯನ್ನಿಟ್ಟು ನುಡಿದಂತೆ ನಡೆಯುತ್ತಿದ್ದೇವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ ಪಾಟೀಲ ಹೇಳಿದರು. ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಮನೆ ಯಜಮಾನಿಗೆ ಮಾಸಿಕ 2,000 ಒದಗಿಸುವ ಗೃಹಲಕ್ಷ್ಮಿ ಯೋಜನೆಗೆ ವಿಜಯಪುರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಲನೆ ನೀಡಿ ಮಾತನಾಡಿದ […]

ಕೋವಿಡ್ -19 ರ ಮುಂಜಾಗೃತಾ ಕ್ರಮಗಳನ್ನು ಪಾಲಿಸಿ; ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ

ವಿಜಯಪುರ: ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕೆಲವು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಸರಕಾರದ ಆದೇಶದ ಮೇರೆಗೆ ರಾಜ್ಯ ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸುಗಳ ಪ್ರಕಾರ ಕೋವಿಡ್ -19 ನಿಯಂತ್ರಣ ಕುರಿತು ಅಗತ್ಯ ಮುಂಜಾಗ್ರತಾ ಕ್ರಮಗಳಾದ ಪೇಸ್ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದನ್ನು ನಿಬರ್ಂಧಿಸಲಾಗಿರುತ್ತದೆ. ಕಾರಣ ಸಾರ್ವಜನಿಕರು, ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಲು ಮತ್ತು ಕೋವಿಡ್-19 ಹರಡುವುದನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ವಿಜಯ ಮಹಾಂತೇಶ […]