ಸೌಹಾರ್ದ ಹಿತ ಠೇವಣಿದಾರರ ಹಿತರಕ್ಷಣೆಗೆ ಟಾಸ್ಕ ಪೋರ್ಸ್

ವಿಜಯಪುರ : ಕೇಂದ್ರ ಮಟ್ಟದಲ್ಲಿ ನೂತನವಾಗಿ ಸಹಕಾರ ಸಚಿವಾಲಯದ ಸ್ಥಾಪನೆಯಿಂದಾಗಿ ಸಹಕಾರಿ ಕ್ಷೇತ್ರ ಮತ್ತೆ ಮುನ್ನೆಲೆಗೆ ಬರುತ್ತಿದ್ದು ಕ್ಷೇತ್ರಕ್ಕೆ ಪ್ರಾಧ್ಯಾನ್ನತೆ ಸೃಷ್ಠಿಯಾಗಿದೆ ಎಂದು ಕರ್ನಾಟಕ ರಾಜ್ಯ ಸೌಹರ್ದಾ ಸಂಯುಕ್ತ ಸಹಕಾರಿ ನಿಗಮದ ಅಧ್ಯಕ್ಷ ಬಿ.ಎಚ್.ಕೃಷ್ಣಾ ರಡ್ಡಿ ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನೀಲಕಂಠೇಶ್ವರ ಮಂಗಲ ಭವನ ವಿಜಯಪುರದಲ್ಲಿ ಸಹಕಾರಿಗಳ ಸೌಹಾರ್ದ ಠೇವಣಿದಾರರ ಹಿತ ರಕ್ಷಣೆಗೆ ಟಾಸ್ಕ ಪೋಸ್ ್ ರಚನೆ ಮಾಡಿದ್ದರ ಕುರಿತು ಸಹಕಾರಿಗಳು ಜವಾಬ್ದಾರಿಗಳು ಕಾರ್ಯನಿರ್ವಹಿಸಬೇಕಾಗಿದ್ದು ಸರ್ಕಾರದ ಮತ್ತು ಸಹಕಾರಿಗಳ ಮನಸ್ಸಿನಲ್ಲಿ ಸೌಹಾರ್ದ ಸಹಕಾರಿ […]

ಈರುಳ್ಳಿ ಬೆಳೆಗಾರರಿಗೆ ಪರಿಹಾರ ನೀಡಿ: ಅರವಿಂದ ಕುಲಕರ್ಣಿ

ವಿಜಯಪುರ : ಕೊಳೆ ರೋಗಭಾದೆಗೆ ಹಾಳಾದ ಈರುಳ್ಳಿ ಪರಿಹಾರಕ್ಕೆ ಆಗ್ರಹ ಕೊಳೆ ರೋಗ ಭಾದೆಯಿಂದ ರೈತರು ಬೆಳೆದ ಈರುಳ್ಳಿ ಸಂಪೂರ್ಣ ಹಾಳಾಗಿದ್ದು ಸರ್ಕಾರ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ಒದಗಿಸಬೇಕೆಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಶುಕ್ರವಾರದಂದು ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಒಕ್ಕೂಟ ಹಾಗೂ ಅಖಂಡ ಕರ್ನಾಟಕ ರೈತ ಸಂಘದ ಜಂಟಿಯಾಗಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ […]

ಸ್ವಸ್ಥ ಸಮಾಜಕ್ಕೆ ಪೌರಕಾರ್ಮಿಕರು ಪ್ರಮುಖ ಕಾರಣ

ವಿಜಯಪುರ:ಸೆ.23: ಸ್ವಸ್ಥ ಸಮಾಜಕ್ಕೆ ಪೌರಕಾರ್ಮಿಕರು ಪ್ರಮುಖ ಕಾರಣವಾಗಿದ್ದು, ಸಮಾಜಕ್ಕೆ ಇವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾಧಿಕಾರಿ ಪಿ ಸುನೀಲ್ ಕುಮಾರ್ ಅವರು ಹೇಳಿದರು. ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಎಂದು ನಗರಾಭಿವೃದ್ಧಿ ಇಲಾಖೆ ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆಗಳ ಸಂಯುಕ್ತಾಶ್ರಯದಲ್ಲಿ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ನಡೆದ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅದರಂತೆ ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗಬಹುದಾದ ಮನೆ ಸೇರಿದಂತೆ ಶಿಕ್ಷಣ, ಸಾಲ, ಆರೋಗ್ಯ ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು. ಅದರಲ್ಲೂ ವಿಶೇಷವಾಗಿ […]

ಅಮೃತ ಗ್ರಾಮ ಪಂಚಾಯತಿ ಯೋಜನೆಗೆ 25 ಗ್ರಾಮ ಪಂಚಾಯತಿಗಳು ಆಯ್ಕೆ: ಶಶಿಕಲಾ ಜೊಲ್ಲೆ

ವಿಜಯಪುರ:ಸೆ.23: ಕರ್ನಾಟಕ ಸರ್ಕಾರ ಜಾರಿಗೊಳಿಸುತ್ತಿರುವ ಮಹತ್ವಕಾಂಕ್ಷೆಯ “ಅಮೃತ ಗ್ರಾಮ ಪಂಚಾಯತಿ” ಯೋಜನೆಗೆ ವಿಜಯಪುರ ಜಿಲ್ಲೆಯ 13 ತಾಲೂಕುಗಳಲ್ಲಿ 25ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮುಜರಾಯಿ, ಹಜ್, ವಕ್ಫ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಅಮೃತ ಗ್ರಾಮ ಪಂಚಾಯತಿ ಯೋಜನೆಯನ್ನು ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಗಿರಿರಾಜ್ ಸಿಂಗ್ ರವರು ಮಾನ್ಯ ಮುಖ್ಯಮಂತ್ರಿ […]

ಡಾ. ಬಿ .ಆರ್ ಅಂಬೇಡ್ಕರ್ ಕ್ರೀಡಾಂಗಣದ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಿ

ವಿಜಯಪುರ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕೈಗೊಳ್ಳಬೇಕಾದ ಹೊಸ ಕಾಮಗಾರಿ ಹಾಗೂ ಹಳೆಯ ದುರಸ್ತಿ ಕಾಮಗಾರಿಗಳನ್ನು ಆದ್ಯತೆಯ ಅನುಗುಣವಾಗಿ, ಅನುದಾನ ಲಭ್ಯತೆಯನ್ನು ಪರಿಗಣಿಸಿ ಕೈಗೆತ್ತಿಕೊಳ್ಳಲಾಗುವುದು ಎಂದು ಮಾನ್ಯ ಜಿಲ್ಲಾಧಿಕಾರಿಗಳಾದ ಪಿ. ಸುನಿಲ್ ಕುಮಾರ್ ಅವರು ತಿಳಿಸಿದರು. ನಗರದ ಡಾ. ಬಿ .ಆರ್ ಅಂಬೇಡ್ಕರ್ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು 400 ಮೀಟರ್ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿ ಸಂಪ್ ಟ್ಯಾಂಕ್, ಡ್ರೈನೇಜ್ ಕನೆಕ್ಷನ್, ವಾಲಿಬಾಲ್ ಸಿಂಥೆಟಿಕ್ ಮೈದಾನ , ಒಳಾಂಗಣ ಕ್ರೀಡಾಂಗಣ ಕೃಷ್ಣ ಭಾಗ್ಯ ಜಲ […]

ವಿಮಾನ ನಿಲ್ದಾಣಕ್ಕೆ ವಿಶ್ವಗುರು ಬಸವಣ್ಣನವರ ಹೆಸರು ನಾಮಕರಣ ಮಾಡಲು ಆಗ್ರಹ

ವಿಜಯಪುರ:ಜುಲೈ30: ಬುರಣಾಪುರ ವ್ಯಾಪ್ತಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಕಾರ್ಯ ಪ್ರಾರಂಭವಾಗಿದ್ದು, ವಿಜಯಪುರ ವಿಮಾನ ನಿಲ್ದಾಣಕ್ಕೆ ವಿಶ್ವಗುರು ಬಸವಣ್ಣನವರ ಹೆಸರು ನಾಮಕರಣ ಮಾಡಬೇಕೆಂದು ಬಸವನ ಬಾಗೇವಾಡಿ ವಿರಕ್ತಮಠದ ಸಿದ್ಧಲಿಂಗ ಸ್ವಾಮಿ ಹಾಗೂ ರೈತ ಮುಖಂಡ ಅರವಿಂದ ಕುಲಕರ್ಣಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ವಿಜಯಪುರ ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ನಿರ್ಮಾಣಗೊಳ್ಳುತ್ತಿರುವ ವಿಜಯಪುರ ವಿಮಾನ ನಿಲ್ದಾಣಕ್ಕೆ ವಿಶ್ವಗುರು ಬಸವಣ್ಣನವರ ಹೆಸರಿಡುವುದೇ ಅತ್ಯಂತ ಸೂಕ್ತವಾಗಿದ್ದು, ಬಸವಣ್ಣನವರು ಜಗತ್ತಿಗೆ ಸಮಾನತೆಯ ಸಂದೇಶವನ್ನು ಸಾರಿದವರು. ಮೇಲು ಕೀಳು ಎಂಬ […]

ಒಂದು ದಿನದ ಉದ್ಯಮಶೀಲತಾ ಶಿಬಿರ

ವಿಜಯಪುರ:ಜು.30: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಯ ವ್ಯಾಪ್ತಿಯಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ಧಾರವಾಡ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ ವಿಜಯಪುರ, ಇವರ ಸಂಯುಕ್ತ ಆಶ್ರಯದಲ್ಲಿ ಇಂಡಿಯಲ್ಲಿ ಉದ್ಯೋಗ ಪ್ರಾರಂಭಿಸಲು ಇಚ್ಚಿಸುವ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಒಂದು ದಿನದ ಉದ್ಯಮಶೀಲತಾ ಶಿಬಿರವನ್ನು ಏರ್ಪಡಿಸಲಾಗಿದೆ. ಜುಲೈ 31 ರಂದು ಬೆಳಿಗ್ಗೆ 9:00 ಗಂಟೆಗೆ ಕೃಷಿ ವಿಜ್ಞಾನ ಕೇಂದ್ರ, ಸ್ಟೇಷನ್ ರೋಡ್, ಇಂಡಿಯಲ್ಲಿ ಈ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ವಿಜಯಪುರ, ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಶಿಬಿರದಲ್ಲಿ,ಉದ್ಯಮ […]

ಉದ್ಯಾನವನ, ವಾಟರ್ ಫ್ರಂಟ್ ಕಾಮಗಾರಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್

ವಿಜಯಪುರ. ಜುಲೈ 29: ಭೂತನಾಳ ಕೆರೆ ವ್ಯಾಪ್ತಿಯ ಉದ್ಯಾನವನ ಹಾಗೂ ವಾಟರ್ ಫ್ರಂಟ್  ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ  ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಗರದ ಭೂತನಾಳ ಕೆರೆ  ಪಕ್ಕದ ಉದ್ಯಾನವನ ಹಾಗೂ ವಾಟರ್ ಫ್ರಂಟ್ ಅಭಿವೃದ್ಧಿ ಕಾಮಗಾರಿಗಳನ್ನು ನಿನ್ನೆ ಪರಿಶೀಲಿಸಿದ ಅವರು ಉದ್ಯಾನವನ ಹಾಗೂ ವಾಟರ್ ಫ್ರಂಟ್ ಈ ಕಾಮಗಾರಿಗಳನ್ನು ಆಧ್ಯತೆ ಮೇಲೆ ಪೂರ್ಣಗೊಳಿಸುವಂತೆ ಪಾಲಿಕೆಯ ಅಭಿಯಂತರರಿಗೆ ಸೂಚಿಸಿದರು. ಪ್ರಸ್ತುತ ಕಾಮಗಾರಿಯು 9 ಕೋಟಿ ರೂ ಅಂದಾಜು ಮೊತ್ತದಲ್ಲಿ ಪಾಥವೇ, ಲ್ಯಾಂಡ್ ಸ್ಟೆಪ್ಪಿಂಗ್, […]

‘ಅಂಬೇಡ್ಕರ್ ಮಾರ್ಗ’ ಕೃತಿ ಆಯ್ಕೆ

ವಿಜಯಪುರ ಜು 19 : ದಿ. ಮಾಪಮ್ಮ ಶಂಭುಲಿಂಗ ಹೊಸಮನಿ ಅವರ ಸ್ಮರಣಾರ್ಥ ನೀಡಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪುಸ್ತಕ ಬಹುಮಾನಕ್ಕೆ ಸೋಮಲಿಂಗ ಗೆಣ್ಣೂರ ಅವರ ʼಅಂಬೇಡ್ಕರ್ ಮಾರ್ಗ’ ಕೃತಿ ಆಯ್ಕೆಯಾಗಿರುತ್ತದೆ. ಕೃತಿಯ ಲೇಖಕರಿಗೆ ಐದು ಸಾವಿರ ರೂಪಾಯಿ ಗೌರವಧನ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಲಾಗುವುದು ಎಂದು ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ. ಗುಲಬರ್ಗಾ ವಿಶ್ವವಿದ್ಯಾಲಯವು ಪ್ರತಿ ವರ್ಷ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಸುಮಾರು ನಲವತ್ತು ವರ್ಷಗಳಿಂದ ಆಚರಿಸುತ್ತ ಬರುತ್ತಿದೆ. ಅದರಂಗವಾಗಿ ಕಲ್ಯಾಣ ಕರ್ನಾಟಕದ ವಿವಿಧ […]

ನಿಶ್ಚಿತ ಪಿಂಚಣಿ ವ್ಯವಸ್ಥೆ ಜಾರಿ, ಖಾಲಿ ಹುದ್ದೆ ಭರ್ತಿಗೆ ಒತ್ತಾಯ

ವಿಜಯಪುರ ಜುಲೈ 15: ತಡೆ ಹಿಡಿದರುವ 18 ತಿಂಗಳ ತುಟ್ಟಿಭತ್ಯೆ ಬಿಡುಗಡೆ, ಎಲ್ಲರಿಗೂ ಉಚಿತ ವ್ಯಾಕ್ಸಿನ್ , ಎನ್.ಪಿ.ಎಸ್. ರದ್ದುಗೊಳಿಸಿ ನಿಶ್ಚಿತ ಪಿಂಚಣಿ ವ್ಯವಸ್ಥೆ ಜಾರಿ, ಖಾಲಿ ಹುದ್ದೆಗಳ ಭರ್ತಿ ಮತ್ತಿತರೆ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಜಿಲ್ಲಾ ಸಮಿತಿ ವಿಜಯಪುರ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯ ಉಪಾಧ್ಯಕ್ಷರಾದ ಸುರೇಶ ಜೀಬಿ ಮಾತನಾಡಿ, ರಾಷ್ಟ್ರಮಟ್ಟದ ಪ್ರತಿಭಟನಾ ದಿನ ಆಚರಿಸಲು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಕರೆ […]