ಜಿಲ್ಲಾ ಪಂಚಾಯಿತಿ ವತಿಯಿಂದ ಸ್ವಚ್ಛೋತ್ಸವ-ನಿತ್ಸೋತ್ಸವ ಕಾರ್ಯಕ್ರಮ

ಹಾಸನ ಸೆ. 30:- ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಘನ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಗ್ರಾಮೀಣ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಅಕ್ಟೋಬರ್ 2 ರಿಂದ 31 ರವರೆಗೆ ಸ್ವಚ್ಛೋತ್ಸವ-ನಿತ್ಸೋತ್ಸವ ಮಾಸಾಚರಣೆ ಕಾರ್ಯಕ್ರಮವನ್ನು ಆಯೋಜಿಸಲು ಹಾಸನ ಜಿಲ್ಲಾ ಪಂಚಾಯತ್ ಮುಂದಾಗಿದೆ. ರಾಜ್ಯದ ಪ್ರತಿಯೊಂದು ಗ್ರಾಮವು ಸ್ವಚ್ಛ, ಸುಂದರ ಆರೋಗ್ಯಕರ ಮತ್ತು ತ್ಯಾಜ್ಯ ಮುಕ್ತವಾಗಿಸುವ ಉದ್ದೇಶದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ರಾಜ್ಯಾದ್ಯಂತ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕಗಳನ್ನು […]

ಕಾಂಗ್ರೆಸ್ ಪಕ್ಷದಿಂದ “ಆರೋಗ್ಯಹಸ್ತ” ಕಾರ್ಯಕ್ರಮ; ಅಬ್ದುಲ್ ಹಮೀದ ಮುಶ್ರೀಫ್

ವಿಜಯಪುರ ಸೆ 30: ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ್ ಹಾಗೂ ಫಯಾಜ ಕಲಾದಗಿ ಮುಖಂಡತ್ವದಲ್ಲಿ ಮನೆ-ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ಮಾಡಿ ಕರೋನಾ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾಂಗ್ರೆಸ್ ಪಕ್ಷದ “ಆರೋಗ್ಯಹಸ್ತ” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಶ್ರೀಫ್ ರವರು ಈಗಾಗಲೇ ವಿಜಯಪುರ ನಗರದಾದ್ಯಂತ ಹತ್ತಕ್ಕಿಂತ ಹೆಚ್ಚು ವಾರ್ಡಗಳಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ನಗರದ ಮಹಾಜನತೆ ನಮ್ಮ ಕಾರ್ಯಕರ್ತರು ಮನೆ-ಮನೆಗೆ ಆರೋಗ್ಯ ತಪಾಸಣೆಗಾಗಿ ಹೋದಾಗ ಸಂಪೂರ್ಣ ಸಹಕಾರ […]

ಕರ್ನಾಟಕ ರಕ್ಷಣಾ ವೇದಿಕೆಯಿಂದ ಕರ್ನಾಟಕ ಬಂದ್‍ಗೆ ಬೆಂಬಲ

ವಿಜಯಪುರ ಸೆ 28: ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ (1961) ಗೆ ತಿದ್ದುಪಡಿ ತರುವುದನ್ನು ವಿರೋಧಿಸಿ ಶುಕ್ರವಾರ ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಗಾಂಧಿ, ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಎಂ. ಸಿ. ಮುಲ್ಲಾ ಮಾತನಾಡಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡೂ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತರುವ […]

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ‘ಮಹಿಳಾ ಶಿಕ್ಷಣ ನಿಧಿ’ಯ ಮೂಲಕ ಮಹಿಳೆಯರ ಶಿಕ್ಷಣಕ್ಕೆ ಹೊಸ ಆಯಾಮ – ಪ್ರೊ.ಎಂ,ಕೆ.ಶ್ರೀಧರ

ವಿಜಯಪುರ ಸೆ.19: ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಶಿಕ್ಷಣಾವಕಾಶಗಳನ್ನು ಹೆಚ್ಚಿಸಲು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ‘ಮಹಿಳಾ ಶಿಕ್ಷಣ ನಿಧಿ’ಯ ಮೂಲಕ ಮಹಿಳೆಯರ ಶಿಕ್ಷಣವನ್ನು ಬೆಂಬಲಿಸುವ ಯೋಜನೆಯನ್ನು ತರಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಹಿಳೆಯರು ಶಿಕ್ಷಣದ ಪರಿಧಿಯಲ್ಲಿ ಬರುವರೆಂಬ ಭರವಸೆ ನನಗಿದೆ. ಮಹಿಳಾ ಶಿಕ್ಷಣದಿಂದ ಮಾತ್ರ ನಮ್ಮಲ್ಲಿ ಆರೋಗ್ಯವಂತ ಕುಟುಂಬಗಳನ್ನು ಮತ್ತು ಆರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಯುಜಿಸಿ ಸದಸ್ಯ ಹಾಗೂ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಸದಸ್ಯರೂ ಆಗಿರುವ ಪ್ರೊ.ಎಂ,ಕೆ.ಶ್ರೀಧರ ಹೇಳಿದರು. ಇಲ್ಲಿಯ […]

ವಿಜಯಪುರ: ಹೆಣ್ಣು ಶಿಶು ಪತ್ತೆ

ವಿಜಯಪುರ ಸೆ.19: ನಗರದ ಪದ್ಮಾವತಿ ನಗರದಲ್ಲಿ ಸಿದ್ದಿವಿನಾಯಕ ದೇವಸ್ಥಾನದಲ್ಲಿ ದಿನಾಂಕ: 18-09-2020 ರಂದು ಅಂದಾಜು 05 ದಿನಗಳ ಅನಾಮದೆಯ ಹೆಣ್ಣು ಶಿಶುವನ್ನು ಬಿಟ್ಟು ಹೋಗಿದ್ದು, ಹೆಣ್ಣು ಶಿಶುವಿನ ಜೈವಿಕ ಪಾಲಕರು ಇದ್ದರೆ, ದಿನ ಪತ್ರಿಕೆಯಲ್ಲಿ ಪ್ರಕಟಣೆಯಾದ 60 ದಿನಗಳೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ4/3 ವಿವೇಕ ನಗರ ಪಶ್ಚಿಮ, ವಿಜಯಪುರ ದೂರವಾಣಿ ಸಂಖ್ಯೆ: 08352-276354, ಮೊ.ನಂ: 9538940669 ಇವರನ್ನು ಸಂಪರ್ಕಿಸಬೇಕು. ಶಿಶು ಅಂದಾಜು 1.6 ಕೆ.ಜಿ. ಕೆಂಪು ಬಣ್ಣ, ಸಾಧಾರಣ ಮೈಕಟ್ಟು ಇರುತ್ತದೆ ಎಂದು ಪ್ರಕಟಣೆಯಲ್ಲಿ […]

ವಿಜಯಪುರ: ಲಘು ಭೂಕಂಪನ ಬೆಚ್ಚಿಬಿದ್ದ ಜನ

ವಿಜಯಪುರ ಸೆ.17: ಬಸವನಬಾಗೇವಾಡಿ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ. ಮನಗೂಳಿ ಮತ್ತು ಇತರ ಹತ್ತಿರದ ಹಳ್ಳಿಗಳಲ್ಲಿ ವಾಸಿಸುವ ಜನರು ಬುಧವಾರ ರಾತ್ರಿಯ ಭೂಮಿ ಕಂಪಿಸಿದ ಅನುಭವಕ್ಕೆ ಬಂದಿದ್ದು, ಭೂಮಿ ಕಂಪಿಸುತ್ತಿದ್ದಂತೆ ನಿವಾಸಿಗಳು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಮನೆಯಲ್ಲಿದ್ದ ವಸ್ತುಗಳು ಕೆಳಕ್ಕೆ ಬಿದ್ದಿದ್ದವೆಂದು ಹೇಳಿರುವ ಗ್ರಾಮಸ್ಥರು ಕೆಲ ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ್ದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಭೂಕಂಪದಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ಮನೆಗಳಿಗೆ ಹಾನಿಯಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ವಿಜಯಪುರ: ಅಕ್ಕಮಹಾದೇವಿ ವಿವಿಯಲ್ಲಿ ಸೆಪ್ಟೆಂಬರ್ 19 ರಂದು 11ನೇ ಘಟಿಕೋತ್ಸವ -ಪ್ರಭಾರ ಕುಲಪತಿ ಪ್ರೊ.ಓಂಕಾರ ಕಾಕಡೆ

ವಿಜಯಪುರ ಸೆ.16: ‘ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 11ನೇ ಘಟಿಕೋತ್ಸವವು ಇದೇ ಸೆಪ್ಟೆಂಬರ್ 19ರಂದು ಬೆಳಿಗ್ಗೆ 11 ಗಂಟೆಗೆ ಜ್ಞಾನಶಕ್ತಿ ಆವರಣದ ಆಡಳಿತ ಭವನದ ಎದುರುಗಡೆ ನಿರ್ಮಿಸಿರುವ ಸಭಾಂಗಣದಲ್ಲಿ ನಡೆಯಲಿದೆ’ ಎಂದು ವಿವಿಯ ಪ್ರಭಾರ ಕುಲಪತಿ ಪ್ರೊ.ಓಂಕಾರ ಕಾಕಡೆ ಅವರು ತಿಳಿಸಿದ್ದಾರೆ. ನಗರದ ಅಕ್ಕಮಹಾದೇವಿ ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ನವದೆಹಲಿಯ ವಿಶ್ವವಿದ್ಯಾಲಯ ಅನುದಾನ ಆಯೋಗ ಸದಸ್ಯ ಪ್ರೊ.ಎಂ.ಕೆ.ಶ್ರೀಧರ್ ಅವರು ಆನ್‍ಲೈನ್‍ನಲ್ಲಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ’ […]

ವಿಜಯಪುರ: ನಿವೇಶನ ಹಕ್ಕುಪತ್ರ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಸೂಚನೆ

ವಿಜಯಪುರ ಸೆ.16: ಆಲಮಟ್ಟಿ ಹಿನ್ನೀರಿನಿಂದ ಮುಳುಗಡೆಯಾದ ಕೋಲಾರ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಪುನರ್ ವಸತಿ ಅಂಗವಾಗಿ ನಿವೇಶನ, ಹಕ್ಕುಪತ್ರ ನೀಡಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋಲಾರ ಪಟ್ಟಣ ಪಂಚಾಯತಿಯ ಅಧಿಕಾರಿ ಮತ್ತು ಸಿಬ್ಬಂದಿಗಳು, ತಹಶೀಲ್ದಾರ, ಉಪವಿಭಾಗಾಧಿಕಾರಿಗಳೊಂದಿಗೆ ಕೋಲಾರ ಪಟ್ಟಣ ಪಂಚಾಯತಿ ಕಛೇರಿಯಲ್ಲಿ ಸಭೆ ನಡೆಸಿದ ಅವರು ಆಲಮಟ್ಟಿ ಹಿನ್ನೀರಿನಿಂದ ಬಾಧಿತವಾದ ಜನರ ಅನುಕೂಲಕ್ಕಾಗಿ ಕೃಷ್ಣಾ ಭಾಗ್ಯ ಜಲನಿಗಮ ಪುನರ್ ವಸತಿ ಯೋಜನೆಯಡಿ ಅರ್ಹ ಸಂತ್ರಸ್ತತರಿಗೆ ನಿವೇಶನ, […]

ವಿಜಯಪುರ: ಪ್ರತ್ಯೇಕ ದಾಳಿ ಹೋರ್ತಿ, ಸಿಂದಗಿಯಲ್ಲಿ ಗಾಂಜಾ ವಶ.

ವಿಜಯಪುರ ಸೆ.16: ಹೋರ್ತಿ ಪೊಲೀಸ್ ಠಾಣಾ ವ್ಯಾಪ್ತಿಯ ದೇಗಿನಾಳ ಗ್ರಾಮದಲ್ಲಿ ಖಚಿತ ಮಾಹಿತಿ ಮೇರೆಗೆ ಹೋರ್ತಿ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ದಾಳಿ ಮಾಡಿ ಆರೋಪಿ ರೇವಣಸಿದ್ದ ರಾಠೋಡ,  ದಸ್ತಗೀರ ಮಾಡಿ, ಆರೋಪಿತನಿಂದ 750 ಗ್ರಾಂ ಗಾಂಜಾವನ್ನು ಜಪ್ತ ಮಾಡಲಾಗಿದೆ. ಈ ಕುರಿತು ಹೋರ್ತಿ ಪೊಲೀಸ್ ಠಾಣೆ ಗುನ್ನಾ ನಂ. 96/2020 ರಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯಪುರ ಕಲಬುರಗಿ ಎನ್‍ಎಚ್-50 ರ ರಸ್ತೆಯ ಮೇಲೆ ಆಹೇರಿ ಕ್ರಾಸ್ ಹತ್ತಿರ ಸಾರ್ವಜನಿಕ […]

ವಿಜಯಪುರ: ಪೋಷಣ್ ಅಭಿಯಾನ ಪ್ರಯೋಜನ ಪಡೆದುಕೊಳ್ಳಿ.

ವಿಜಯಪುರ ಸೆ.14: ಕೇಂದ್ರ ಸರ್ಕಾರ ಬಾಣಂತಿ ಮಹಿಳೆಯರ ಉತ್ತಮ ಆರೋಗ್ಯ ಹಾಗೂ ಮಕ್ಕಳ ಬೆಳವಣೆಗೆಯ ಜೊತೆಗೆ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಒಂದು ಉತ್ತಮ ಯೋಜನೆಯನ್ನು ರೂಪಿಸಿ ಸಾರ್ವಜನಿಕರ ಹಿತದೃಷ್ಠಿಯನ್ನು ಕಾಪಾಡಲು ಮುಂದಾಗಿದ್ದು ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವಿ.ಬಿ ಹೊಸಮನಿ ಅವರು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ನಗರದ ರುಟ್‍ಸೆಟ್‍ನಲ್ಲಿ ನಡೆದ ಪೋಷಣ್ […]