ಕೊರೋನಾ ವಾರಿಯರ್ಸಗಳಿಗೆ ತೊಂದರೆ ನೀಡಿದಲ್ಲಿ ಕ್ರೀಮಿನಲ್ ಮೊಕದ್ದಮೆ

ವಿಜಯಪುರ ಎ.24: ನಗರ ಹಾಗೂ ಜಿಲ್ಲಾದ್ಯಂತ ಕೋವಿಡ್-19 ನಿಯಂತ್ರಣಕ್ಕಾಗಿ ನಿರಂತರವಾಗಿ ಹೋರಾಟ ನಡೆಸುತ್ತಿರುವ ಕೊರೋನಾ ವರಿಯರ್ಸಗಳಾದ ವೈದ್ಯರು, ವೈದ್ಯ ಸಿಬ್ಬಂಧಿಗಳು ಹಾಗೂ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಡಿಗೆ ಮನೆಗಳಿಂದ ಹೊರ ಹೋಗಲು ಒತ್ತಾಯಪಡಿಸುವುದು ಮತ್ತು ಕಿರುಕುಳದಂತಹ ಯಾವುದೇ ದೂರುಗಳು ಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೊರೋನಾ ವಾರಿಯರ್ಸಗಳು ಕೋವಿಡ್-19 ವಿರುದ್ಧ ಹೋರಾಟದಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದಾರೆ. ತೀವ್ರ ಸಂಕಷ್ಠದ ಪರಿಸ್ಥಿತಿ ಇದಾಗಿದ್ದು ಎಲ್ಲರು […]

ಕಂಟೇನ್ಮೆಂಟ್ ಪ್ರದೇಶದಲ್ಲಿ ಅನಾವಶ್ಯಕ ಓಡಾಡುವವರನ್ನು ಸಹ ಹೋಮ್ ಕ್ವಾರಂಟೈನ್ ಮಾಡಲಾಗುವುದು -ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

ವಿಜಯಪುರ ಎ.18: ನಗರದಲ್ಲಿ ಕೋವಿಡ್-19 ಸೋಂಕಿತರು ದಾಖಲಾದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಘೋಷಿಸಿದ ಕಂಟೇನ್ಮೆಂಟ್ ವಲಯದಲ್ಲಿ ಅನಾವಶ್ಯಕವಾಗಿ ಓಡಾಡುವವರು ಕಂಡುಬಂದಲ್ಲಿ ಅಂತಹವರನ್ನು ಕೂಡ ಹೋಮ್ ಕ್ವಾರಂಟೈನ್ ಮಾಡುವಂತಹ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ ಅವರು ಕೋವಿಡ್-19 ಮುನ್ನೆಚ್ಚರಿಕೆಯಾಗಿ ಲಾಕ್‍ಡೌನ್ ಜಾರಿ ಹಿನ್ನೆಲೆಯಲ್ಲಿ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಮುಂದೆ ಕಂಟೇನ್ಮೆಂಟ್ ಏರಿಯಾದಲ್ಲಿ ಅನಾವಶ್ಯಕವಾಗಿ (ವೈದ್ಯಕೀಯ ಕಾರಣ ಹೊರತು ಪಡಿಸಿ) ಓಡಾಡುವುದು ಕಂಡುಬಂದಲ್ಲಿ ಅಂತಹವರನ್ನು […]

ಬಡಜನರ ಅನುಕೂಲಕ್ಕಾಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆಗೆ ಅವಕಾಶ

ವಿಜಯಪುರ ಎ.18: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗಳನ್ನು ಶಂಕಿತ ಕೋವಿಡ್-19 ಹಾಗೂ ದೃಢಪಟ್ಟ ಪ್ರಕರಣಗಳ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗಳನ್ನು ನಿಗದಿಪಡಿಸಿರುವುದರಿಂದ ಸದ್ಯ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಈಗಾಗಲೇ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ. ಸಾಮಾನ್ಯ, ದ್ವಿತೀಯ ಹಂತದ ಚಿಕಿತ್ಸೆಗಳನ್ನು ಹಾಗೂ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಇಲ್ಲದಿರುವ ಚಿಕಿತ್ಸೆಗಳಿಗಾಗಿ (ಸಿ.ಜಿ.ಹೆಚ್.ಎಸ್ ದರಗಳಿಗನುಗುಣವಾಗಿ) ಜಿಲ್ಲೆಯ ಲುಕ್‍ಮನ್ ಯೂನಾನಿ […]

ನೀರು ಮಿತವಾಗಿ ಬಳಸಲು -ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ

ವಿಜಯಪುರ ಎ.18: ಜಿಲ್ಲೆಯ ಆಲಮಟ್ಟಿಯ ಲಾಲ್ ಬಹದ್ದೂರ್ ಜಲಾಶಯದಿಂದ ಏತನೀರಾವರಿ ಹಂತ 3 ರಡಿ ಬರುವ ಮುಳವಾಡ ಮತ್ತು ಚಿಮ್ಮಲಗಿ ಏತನೀರಾವರಿ ಯೋಜನೆಯ ಜಾಲದಡಿ ಬರುವ ಕೆರೆಗಳನ್ನು ತುಂಬಿಸಲು 2 ಟಿಎಂಸಿ ನೀರನ್ನು ಹರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಮುಳವಾಡ ಏತನೀರಾವರಿ ಜಾಲದಡಿ 70 ಕೆರೆಗಳು ಹಾಗೂ ಚಿಮ್ಮಲಗಿ ಏತನೀರಾವರಿ ಯೋಜನೆಯ ಜಾಲದಡಿ 29 ಕೆರೆಗಳನ್ನು ತುಂಬಿಸಲು ನೀರು ಹರಿಸಲಾಗುವುದು. 3 ನೇ ಹಂತದ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಾದ ಬ.ಬಾಗೇವಾಡಿ, ಮುದ್ದೇಬಿಹಾಳ, […]

ವಿಜಯಪುರ: ಕೊರೋನಾ ಪ್ರಕರಣಗಳ ಕಾಂಟ್ಯಾಕ್ಟ್ ಟ್ರೇಸಿಂಗ್

ವಿಜಯಪುರ ಎ.18: ನಗರದಲ್ಲಿ ಕೊರೋನಾ ಸೋಂಕಿತ ಖಚಿತ ಪ್ರಕರಣಗಳು ಪತ್ತೆಯಾಗಿದ್ದು, ಕಾಂಟ್ಯಾಕ್ಟ್ ಟ್ರೇಸಿಂಗ್ ಮಾಡಲು ಅಧಿಕಾರಿ ಸಿಬ್ಬಂದಿಗಳನ್ನು ಒಳಗೊಂಡ ತಂಡ ರಚಿಸಿ ತಾಲೂಕಾ ಆರೋಗ್ಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಶ್‍ಮೆಂಟ್ಸ್ ಅಸೋಶಿಯೇಶನ್ ವೈದ್ಯರು ಕಂಟೇನ್ಮೆಂಟ್ ಪ್ರದೇಶಗಳು ಸೇರಿದಂತೆ ಇತರ ಭಾಗಗಳಲ್ಲಿ ಸೇವೆಸಲ್ಲಿಸುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ತಾಲೂಕಾ ಆರೋಗ್ಯ ಅಧಿಕಾರಿಗಳು ಈ ವೈದ್ಯರು, ಸಿಬ್ಬಂದಿಗಳನ್ನು ನೇಮಿಸಿ ಆದೇಶ […]

ವಿಜಯಪುರ: ಈವರೆಗೆ ಜಿಲ್ಲೆಯಲ್ಲಿ 10 ಕೊರೋನಾ ಪಾಸಿಟಿವ್, 1 ಸಾವು

ವಿಜಯಪುರ ಎ.15: ವಿಜಯಪುರ ಜಿಲ್ಲೆಗೆ ವಿದೇಶ ಮತ್ತು ಇತರ ಕಡೆಗಳಿಂದ ಇಲ್ಲಿಯವರೆಗೆ 686 ಜನ ಬಂದಿರುವ ಬಗ್ಗೆ ವರದಿಯಾಗಿದ್ದು, ಒಟ್ಟು 10 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಒಬ್ಬರು ಮೃತಪಟ್ಟಿದ್ದಾರೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ 335 ಐಶೋಲೇಶನ್‍ದಲ್ಲಿದ್ದು, 350 ಗಿಂತ ಜನರು 28 ದಿನಗಳ ಅವಧಿ ಪೂರ್ಣಗೊಳಿಸಿದ್ದಾರೆ. ಈವರೆಗೆ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದ 362 ಗಂಟಲು ದ್ರವ ಮಾದರಿಗಳಲ್ಲಿ 256 ನೆಗೆಟಿವ್ ವರದಿ ಬಂದಿದ್ದು, ಇನ್ನೂ 96 ಜನರ ವರದಿ ಬರಬೇಕಾಗಿದೆ […]

ಕೊರೋನಾ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದವರ ತೀವ್ರ ತನಿಖೆಗೆ ಸೂಚನೆ

ವಿಜಯಪುರ ಎ.15: ನಗರದಲ್ಲಿ ಇತ್ತೀಚೆಗೆ ಕಂಡುಬಂದ ಕೊರೋನಾ ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರನ್ನು ಗುರುತಿಸಲು ತೀವ್ರ ತನಿಖಾ ಕ್ರಮ ಕೈಗೊಳ್ಳುವಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಆದಿತ್ಯ ಆಮ್ಲನ್ ಬಿಸ್ವಾಸ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರದಂದು ನಗರದ ನೂತನ ಪ್ರವಾಸ ಮಂದಿರದಲ್ಲಿ ಕೋವಿಡ್-19 ಕುರಿತು ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು ನಗರದಲ್ಲಿ ಕೊರೋನಾ ಸೋಂಕಿತರು ದೃಢಪಟ್ಟ ಹಿನ್ನೆಲೆಯಲ್ಲಿ ಕಂಟೇನ್ಮೆಂಟ್ ಮತ್ತು ಬಫರ್ ಜೋನ್ ವ್ಯಾಪ್ತಿಯಲ್ಲಿ ಜ್ವರ, ಕೆಮ್ಮು, ನೆಗಡಿ ಮತ್ತು […]

ವಿಜಯಪುರ: ರೆಡ್ ಜೋನ್ ಪ್ರದೇಶಗಳಿಗೆ ದಿನನಿತ್ಯದ ಸಾಮಗ್ರಿ ಪೂರೈಕೆ

ವಿಜಯಪುರ ಎ.14: ವಿಜಯಪುರ ನಗರದ ಕೊರೋನಾ ರೆಡ್ ಜೋನ್ ಘೋಷಿಸಿದ ಪ್ರದೇಶಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯ ವಸ್ತುಗಳ ಪೂರೈಕೆಗಾಗಿ ಈ ಕೆಳಕಂಡ ಸಿಬ್ಬಂದಿಗಳನ್ನು ನೇಮಕ ಮಾಡಿ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ಕೋವಿಡ್-19 ರೋಗ ನಿಯಂತ್ರಿಸುವ ನಿಟ್ಟಿನಲ್ಲಿ ಕಾಮತ್ ಹೊಟೇಲ್ ಹಿಂದೆ, ಹಕೀಂ ಚೌಕ್, ಹರಣಶಿಖಾರಿ ಓಣಿ, ಕೊಂಚಿಕೊರವರ ಓಣಿ, ಬಡಿಕಮಾನ್, ಚಪ್ಪರ್ ಬಂದ ಓಣಿ, ಜುಮ್ಮಾ ಮಸೀದಿ ಹಿಂದಿರುವ ಕೆ.ಎಚ್.ಬಿ ಕಾಲನಿ, ಪೈಲ್ವಾನ್ ನಗರ, ಮಹೆಬೂಬ ನಗರ, ಬೆಂಡಿಗೇರಿ ಓಣಿ, ಸುಭಾಸ್ ಕಾಲನಿ, […]

ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 129ನೇ ಜಯಂತಿ ಆಚರಣೆ

ವಿಜಯಪುರ ಎ.14: ಭಾರತ ರತ್ನ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ನೇತೃತ್ವದ ಸಮಿತಿಯು ನಮ್ಮ ದೇಶಕ್ಕೆ ವಿಶ್ವದ ಶ್ರೇಷ್ಠವಾದ ಸಂವಿಧಾನ ನೀಡಿದ್ದು, ಈ ಸಂವಿಧಾನದ ಮೂಲಕ ರೂಪಿಸಲಾದ ಕಾನೂನುಗಳು ನಮಗೆಲ್ಲರಿಗೂ ನೆರವಾಗಿವೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ 129 ನೇ ಜಯಂತಿ ಅಂಗವಾಗಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದ ಅವರು ಭಾರತದ ಸಂವಿಧಾನವು ಶ್ರೇಷ್ಠವಾಗಿದೆ. ಈ ಸಂವಿಧಾನದ ಮೂಲಕ […]

ವಿಜಯಪುರ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣದ ರೋಗಿಗಳ ಚಿಕಿತ್ಸೆಗೆ ವೈದ್ಯರ ತಂಡ ರಚನೆ

ವಿಜಯಪುರ ಎ.12: ವಿಜಯಪುರ ನಗರದ ಜಿಲ್ಲಾ ಆಸ್ಪತ್ರೆ/ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣದ ರೋಗಿಗಳ ವೈದ್ಯಕೀಯ ಚಿಕಿತ್ಸೆ ಮಾಡುವ ಸಲುವಾಗಿ ವೈದ್ಯರುಗಳ ತಂಡವನ್ನು ರಚಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ. ಈ ತಂಡದ ಫೀವರ್ ಕ್ಲಿನಿಕ್, ಕೋವಿಡ್ ಖಚಿತ ಪ್ರಕರಣಗಳ ವಾರ್ಡ್, ಐಸೋಲೇಶನ್ ಪ್ರಕರಣಗಳ ವಾರ್ಡ್, ಐ.ಸಿ.ಯು ಪ್ರಕರಣಗಳ ವಾರ್ಡ್‍ಗಳ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಸದಸ್ಯರು/ವೈದ್ಯರು ಸರ್ಕಾರದ ಕೋವಿಡ್-19 ಪಾಸಿಟಿವ್ ಪ್ರಕರಣಗಳ ನಿರ್ವಹಣೆ ಕುರಿತು ನೀಡಲಾದ ಪ್ರೊಟೊಕಾಲ್‍ನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ರೋಗಿಗೆ ಅತ್ಯುತ್ತಮ ದರ್ಜೆಯ ವೈದ್ಯಕೀಯ […]