ಜನರು ಆತಂಕಪಡುವ ಅಗತ್ಯವಿಲ್ಲ

ವಿಜಯಪುರ ಎ.07: ವಿದೇಶ ಸೇರಿದಂತೆ ಇತರ ಜಿಲ್ಲೆ, ರಾಜ್ಯಗಳಿಂದ ಜಿಲ್ಲೆಗೆ 418 ಜನರು ಆಗಮಿಸಿರುವ ಬಗ್ಗೆ ವರದಿಯಾಗಿದ್ದು, ಈವರೆಗೆ 59 ಜನರ ಗಂಟಲು ದ್ರವ ಮಾದರಿಗಳನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು, ಈ ಪೈಕಿ 57 ಜನರ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಅವರು 216 ಜನರು 28 ದಿನಗಳ ಅವದಿ ಪೂರ್ಣಗೊಳಿಸಿದ್ದು, 172 ಜನರು 15 ರಿಂದ 28 […]
ಸಾಮಾಜಿಕ ಅಂತರದೊಂದಿಗೆ ಕೃಷಿ ಚಟುವಟಿಕೆಗೆ ನಿರ್ಬಂಧ ಇಲ್ಲ -ಕೃಷಿ ಸಚಿವ ಬಿ.ಸಿ ಪಾಟೀಲ

ವಿಜಯಪುರ ಎ.07: ಕೃಷಿ ಚಟುವಟಿಕೆಗಳಿಗೆ ವಿಶೇಷವಾಗಿ ಬೇಸಾಯ, ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುವುದಿಲ್ಲವೆಂದು ತಿಳಿಸಿರುವ ಕೃಷಿ ಸಚಿವ ಬಿ.ಸಿ ಪಾಟೀಲ ಅವರು ಸಾಮಾಜಿಕ ಅಂತರ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ರೈತರಲ್ಲಿ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ರೈತರ ಕೃಷಿ ಬೆಳೆ, ತೋಟಗಾರಿಕಾ ಬೆಳೆ ಹಾಗೂ ಮುಕ್ತ ಮಾರುಕಟ್ಟೆ ಸೌಲಭ್ಯ ಒದಗಿಸುವದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಸದ್ಯಕ್ಕೆ ಕೊರೋನಾ ನಿಯಂತ್ರಣ ಮತ್ತು ನಿವಾರಣೆಗೆ ಹೆಚ್ಚಿನ ಗಮನ ನೀಡುತ್ತಿದ್ದು, ಹಠಾತ್ತಾಗಿ ಬಂದಿರುವಂತಹ ಈ ಪರಿಸ್ಥಿತಿ ವಿಶ್ವದಾದ್ಯಂತ ತಲ್ಲಣಗೊಳಿಸಿದೆ. […]
ಎಪ್ರೀಲ್ 9ರಂದು ಮುಸ್ಲಿಂ ಪ್ರಾರ್ಥನಾ ಸ್ಥಳಗಳಿಗೆ ನಿರ್ಬಂಧ

ವಿಜಯಪುರ ಎ.06: ಸರ್ಕಾರದ ನಿರ್ದೇಶನದನ್ವಯ ಕೋವಿಡ್-19 ಮುನ್ನೆಚ್ಚರಿಕೆಯಾಗಿ ಇದೇ ಎಪ್ರೀಲ್ 9ರಂದು ಮುಸ್ಲಿಂರಿಗೆ ಅತ್ಯಂತ ಮಹತ್ವದ ದಿನವಾಗಿರುವ ಶಬ್-ಎ-ಬರಾತ್‍ದಂದು ಯಾರೂ ಒಟ್ಟುಗೂಡಿ ಧಾರ್ಮಿಕ ಪ್ರಾರ್ಥನೆ ಅಂಗವಾಗಿ ಮಸೀದಿ, ಮುಸ್ಲಿಂ ಖಬ್ರಸ್ಥಾನ ಹಾಗೂ ದರ್ಗಾಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಆಕ್ವಾಫ್ (AUQAF) ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಇಸ್ಲಾಹುದ್ದೀನ್ ಗದ್ಯಾಳ ಅವರು ಆದೇಶ ಹೊರಡಿಸಿದ್ದಾರೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ. ಕೋವಿಡ್-19 ಅಪಾಯದ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಮುಸ್ಲಿಂ ಖಬ್ರಸ್ಥಾನಗಳಲ್ಲಿ ಮತ್ತು ಖಬ್ರಸ್ಥಾನದ […]
ಬಿಎಲ್‍ಡಿಇ ಸಂಸ್ಥೆಯ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ

ವಿಜಯಪುರ ಎ.04: ಬಿ.ಎಲ್.ಡಿ.ಇ ಸಂಸ್ಥೆಯ ವತಿಯಿಂದ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25ಲಕ್ಷ ಹಾಗೂ ಪ್ರಧಾನಮಂತ್ರಿ ಪರಿಹಾರ ನಿಧಿಗೆ 25 ಲಕ್ಷರೂ ಗಳನ್ನು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರ ಮೂಲಕ ಮಾಜಿ ಸಚಿವ ಹಾಗೂ ಬಬಲೇಶ್ವರ ಶಾಸಕರಾದ ಶ್ರೀ ಎಂ.ಬಿ ಪಾಟೀಲ್ ಅವರು ಚಕ್ ನೀಡಿದರು. ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಸುನಿಲಗೌಡ ಪಾಟೀಲ, ಶಾಸಕ ಸೋಮನಗೌಡ ಪಾಟೀಲ, ಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಜಿ.ರವಿಶಂಕರ ಉಪಸ್ಥಿತರಿದ್ದರು.
ರೋಗಿಗಳಿಗೆ ನೆರವಾಗಲು ರಕ್ತದಾನ ಮಾಡಿ – ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

ವಿಜಯಪುರ ಎ.04: ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ನೆರವಾಗಲು ರಕ್ತದಾನ ಮಾಡಬಯಸುವ ರಕ್ತದಾನಿಗಳು ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.30 ವರೆಗೆ ವಿಜಯಪುರ ನಗರದ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಲಾದ ಬ್ಲಡ್‍ಬ್ಯಾಂಕ್‍ದಲ್ಲಿ ರಕ್ತದಾನ ಮಾಡಬಹುದಾಗಿದ್ದು, ಈ ಕುರಿತಂತೆ ನಿಯೋಜಿಸಲಾದ ಡಾ. ರಾಹೀಲ ಅವರ ಮೋಬೈಲ್ ಸಂಖ್ಯೆ 8762249720 ಹಾಗೂ ದೂ.ಸಂ: 08352-270108 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.
ವೈದ್ಯರು-ಶುಶ್ರೂಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯಪುರ ಎ.04: ಕೊರೋನಾ ವೈರಸ್ ಪ್ರಕರಣಗಳ ಹಿನ್ನಲೆಯಲ್ಲಿ ಜಿಲ್ಲಾ ಆಸ್ಪತ್ರೆಯನ್ನು ಬಲಪಡಿಸಿ ಸಮರ್ಪಕ ವೈದ್ಯಕೀಯ ಸೇವೆಯನ್ನು ಒದಗಿಸಲು ಅಗತ್ಯವಿರುವ ಕೆಳಕಾಣಿಸಿದ ಹುದ್ದೆಗಳನ್ನು ತಾತ್ಕಾಲಿಕವಾಗಿ ಗರಿಷ್ಠ 06 ತಿಂಗಳ ಕಾಲ ಗುತ್ತಿಗೆ ಆಧಾರದ ಮೇಲೆ ರೋಸ್ಟರ್-ಕಂ-ಮೇರಿಟ್ ಅನ್ನು ಅನುಸರಿಸಿ ಷರತ್ತುಗಳನ್ವಯ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೈದ್ಯರು/ತಜ್ಞರು ಹತ್ತು ಹುದ್ದೆಗಳಿಗೆ ಎಂಬಿಬಿಎಸ್, ಎಂಡಿಜಿಮ್, ಎಂಡಿ ಪೆಡಿ, ಡಿಸಿಎಚ್ ಹಾಗೂ ಇತರ ತಜ್ಞತೆಯ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು ಪ್ರತಿ ಮಾಹೆ 60 ಸಾವಿರ ವೇತನ ನೀಡಲಾಗುವುದು. […]
ಪರವಾನಿಗೆ ಪಡೆಯದೆ ಆಹಾರ ಹಂಚಿದಲ್ಲಿ ಕ್ರಿಮಿನಲ್ ಮೊಕದ್ದಮೆ

ವಿಜಯಪುರ ಎ.04: ನೋವೆಲ್ ಕೊರೋನಾ ವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ಎಪ್ರೀಲ್ 14 ರ ವರೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಿಸಿದ ಹಿನ್ನಲೆಯಲ್ಲಿ ಬೇರೆ ರಾಜ್ಯಗಳ ವಲಸೆ ನಿರಾಶ್ರಿತರಿಗೆ, ನಿರ್ಗತಿಕರಿಗೆ, ಬಿಕ್ಷುಕರಿಗೆ ಆಹಾರ ಒದಗಿಸುವ ಕಾರ್ಯವನ್ನು ಜಿಲ್ಲಾಡಳಿತವು ಮಹಾನಗರ ಪಾಲಿಕೆ ವಿಜಯಪುರ ಇವರಿಗೆ ವಹಿಸಿದೆ. ಸಾರ್ವಜನಿಕರು ಯಾವುದೇ ಪರವಾನಿಗೆ ಪಡೆಯದೆ ಆಹಾರ ಹಂಚಿ ಜನದಟ್ಟಣೆ ಮಾಡುತ್ತಿರುವುದು ಕಂಡು ಬಂದಿದ್ದು, ಈ ರೀತಿ ಹಂಚಿಕೆಯಿಂದ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ತೊಂದರೆಯಾಗಲಿದೆ. ಆದ್ದರಿಂದ ಸಾರ್ವಜನಿಕರು ಜಿಲ್ಲಾಡಳಿತದ […]
ಕಾರ್ಮಿಕರಿಗೆ ವಿತರಿಸಲು ಸಾಮಗ್ರಿಗಳ ಸ್ವೀಕಾರ : ಕೋವಿಡ್-19 ಜಾಗೃತಿಗೆ ಕ್ರಮ

ವಿಜಯಪುರ ಎ.02: ನೋವೆಲ್ ಕೊರೋನಾ ವೈರಸ್ ಮುನ್ನೆಚ್ಚರಿಕೆಯಾಗಿ ಕಾರ್ಮಿಕರಿಗೆ ಹಂಚಲು ಉದ್ದೇಶಿಸಲಾಗಿರುವ ಮಾಸ್ಕ್ ಮತ್ತು ಸ್ಯಾನಿಟೈಸರ್ ಸೇರಿದಂತೆ ಇನ್ನಿತರ ಪರಿಕರಗಳನ್ನು ಕಾರ್ಮಿಕ ಇಲಾಖೆ ಅನುದಾನದ ಅಡಿಯಲ್ಲಿ ಜಿಲ್ಲಾ ರೆಡ್‍ಕ್ರಾಸ್ ಸಂಸ್ಥೆಯ ವತಿಯಿಂದ ನಿನ್ನೆ ಸ್ವೀಕರಿಸಲಾಗಿದೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಸೂರ್ಯಪ್ಪ ನೇತೃತ್ವದಲ್ಲಿ ಈ ಸಾಮಗ್ರಿಗಳನ್ನು ರೆಡ್‍ಕ್ರಾಸ್ ಸಂಸ್ಥೆಯಿಂದ ಪಡೆಯಲಾಗಿದ್ದು, ಕೋವಿಡ್-19 ಮುನ್ನೆಚ್ಚರಿಕೆಯಾಗಿ ಕಾರ್ಮಿಕರಿಗೆ ಈ ಸಾಮಗ್ರಿ ಅಗತ್ಯತೆಯ ಅನುಗುಣವಾಗಿ ವಿತರಿಸಲಾಗುತ್ತದೆ. ಕಾರ್ಮಿಕ ಇಲಾಖೆಯ ಮೂಲಕ ಜಿಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮದ ಅಂಗವಾಗಿ ಕಾರ್ಮಿಕರಿಗೆ ಸಾಮಗ್ರಿ ವಿತರಿಸಲು ಉದ್ದೇಶಿಸಲಾಗಿದ್ದು, 10 […]
ಬಾಬು ಜಗಜೀವನರಾಮ್-ಅಂಬೇಡ್ಕರ್ ಜಯಂತಿ ಸರಳ ರೀತಿಯಲ್ಲಿ ಆಚರಿಸಲು ಮನವಿ

ವಿಜಯಪುರ ಎ.02: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಬಾಬು ಜಗಜೀವನರಾಮ್ ಹಾಗೂ ಅಂಬೇಡ್ಕರ ರವರ ಜಯಂತಿಯನ್ನು ಕಚೇರಿಯಲ್ಲಿ ಭಾವಚಿತ್ರಕ್ಕೆ ಪೂಜೆ ಮಾಡುವುದರ ಮೂಲಕ ಸರಳ ರೀತಿಯಲ್ಲಿ ಆಚರಿಸಲು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಮನವಿ ಮಾಡಿದ್ದಾರೆ. ಕೋವಿಡ್-19 ನಿಯಂತ್ರಣಕ್ಕಾಗಿ ದೇಶಾದ್ಯಂತ ಲಾಕ್‍ಡೌನ್ ಮಾಡಿರುವ ಹಿನ್ನಲೆಯಲ್ಲಿ ಯಾವುದೇ ಸಭೆ, ಸಮಾರಂಭವನ್ನು ಏರ್ಪಡಿಸದಿರಲು ನಿಷೇಧ ಮಾಡಿರುವುದರಿಂದ ಪ್ರಸಕ್ತ ಸಾಲಿನ ದಿನಾಂಕ 05-04-2020 ರಂದು ಬಾಬು ಜಗಜೀವನರಾಮ್ ಜನ್ಮದಿನಾಚರಣೆ ಹಾಗೂ ದಿನಾಂಕ 14-04-2020 ರಂದು ಭಾರತರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ […]
“ವಿದೇಶಿಗರೊಂದಿಗೆ ಸಂಪರ್ಕದಲ್ಲಿದ್ದ ಮೂವರ ಗಂಟಲುದ್ರವ ಪರೀಕ್ಷಾ ವರದಿ ನೆಗೆಟಿವ್’’ -ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್

ವಿಜಯಪುರ ಎ – 02: ಮಲೇಷಿಯಾ ಮತ್ತು ಇಂಡೋನೆಷಿಯಾ ದಿಂದ ಬಂದು ವಿಜಯಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಇವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಜಿಲ್ಲೆಯ ನಾಲ್ವರ ಸ್ವಾಬ್‍ಗಳ (ಗಂಟಲು ದ್ರವ) ಮಾದರಿಯನ್ನು ಪರೀಕ್ಷಿಸಲಾಗಿ ಮೂವರ ನೆಗೆಟಿವ್ ವರದಿ ಬಂದಿದ್ದು, ಇನ್ನೊಬ್ಬರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳೊಂದಿಗೆ ಕೋವಿಡ್-19 ಮುನ್ನೆಚ್ಚರಿಕೆ ಕುರಿತು ಸಭೆ ನಡೆಸಿದ ಅವರು ದೆಹಲಿ ತಬ್ಲಿಘ ಸಾಮೂಹಿಕ ಪ್ರಾಥನೆಗೆ ಹೋಗಿ ಬಂದ ಇನ್ನೂ 10 ಜನರ […]