ಒತ್ತಾಯ ಪೂರ್ವಕ ಬಾಡಿಗೆ ವಸೂಲಿ ಮಾಡುವಂತಿಲ್ಲ : -ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

ವಿಜಯಪುರ ಮಾ 31: ಕೋವಿಡ್-19 ಪರಿಸ್ಥಿತಿಯ ದುರುಪಯೋಗ ಪಡೆಸಿಕೊಂಡು ಯಾರಾದರು ಒತ್ತಾಯಪೂರ್ವಕವಾಗಿ ಮನೆ ಬಾಡಿಗೆ ವಸೂಲಿ ಹಾಗೂ ಮನೆ ಖಾಲಿಗೆ ಸೂಚಿಸಿದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಅಂತಹವರ ಬಗ್ಗೆ ದೂರುಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬಹುದಾಗಿದೆ ಎಂದು ಹೇಳಿದರು. ಇಂದು ಪೂರ್ವಾಹ್ನವರೆಗೆ ಜಿಲ್ಲೆಯಲ್ಲಿ 332 ಜನರು ವಿದೇಶದಿಂದ ಆಗಮಿಸಿರುವ ಬಗ್ಗೆ ವರದಿಯಾಗಿದೆ. 57 ಜನ 28 ದಿನಗಳ ಅವಧಿ ಪೂರ್ಣಗೊಳಿಸಿದ್ದಾರೆ. 241 ಜನ 15 ರಿಂದ 28 ದಿನಗಳ ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. 34 ಜನ ಹೋಮ್‍ಕ್ವಾರಂಟೈನ್‍ದಲ್ಲಿದ್ದಾರೆ. […]

ವ್ಯಾಪಾರಿಗಳು ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕಾನೂನು ಕ್ರಮ -ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

ವಿಜಯಪುರ ಮಾ 31: ಕೋವಿಡ್-19 ಸಾಂಕ್ರಾಮಿಕ ವೈರಾಣು ಹರಡದಿರುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಲಾಕ್‍ಡೌನ್ ಎಪ್ರೀಲ್ 14 ರವರೆಗೆ ವಿಸ್ತರಣೆ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ದೈನಂದಿನ ಜೀವನಕ್ಕಾಗಿ ಬೇಕಾಗಿರುವ ಅಗತ್ಯ ವಸ್ತುಗಳನ್ನು ಪಡೆಯಲು ಚಿಲ್ಲರೆ ಕಿರಾಣಿ ಅಂಗಡಿಗಳನ್ನು ಹಾಗೂ ಕಿರಾಣಿ ಸಗಟು ಅಂಗಡಿಗಳನ್ನು ( ಎಲ್.ಬಿ.ಎಸ್ ಮಾರುಕಟ್ಟೆಯನ್ನು ಹೊರತುಪಡಿಸಿ) ಯತಾಸ್ಥಿಯಲ್ಲಿ ಕಾರ್ಯನಿರ್ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡಿರುವುದನ್ನು ದುರುಪಯೋಗ ಪಡೆಸಿಕೊಂಡಿರುವ ಕೆಲವೊಂದು ಕಿರಾಣಿ ಚಿಲ್ಲರೆ ಹಾಗೂ ಸಗಟು ವರ್ಕಕರು ಹೆಚ್ಚಿನ ಬೆಲೆಯಲ್ಲಿ ಅಗತ್ಯ […]

ಮಾನವೀಯತೆ ಮೆರೆದ ವಿಜಯಪುರ ಜಿಲ್ಲಾಧಿಕಾರಿಗಳು : ಕಾರ್ಕಳದ 13 ಯುವಕರಿಗೆ ವಸತಿ ಸೌಲಭ್ಯ

ವಿಜಯಪುರ ಮಾ 30: ಮಹಾರಾಷ್ಟ್ರದ ಭಾರಾಮತಿಯಿಂದ ಉಡುಪಿ ಜಿಲ್ಲೆಗೆ ತೆರಳುತ್ತಿದ್ದ 13 ಯುವಕರು ವಸತಿ ಮತ್ತು ಊಟದ ಸೌಕರ್ಯವಿಲ್ಲದೆ ಲಾಕ್‍ಡೌನ್ ಜಾರಿಯಿಂದ ನಗರದಲ್ಲಿ ಸಿಲುಕಿಕೊಂಡಿದ್ದ ಕಾರ್ಕಳದ 13 ಯುವಕರಿಗೆ ವಸತಿ ಸೌಲಭ್ಯ ಕಲ್ಪಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಮಾನವಿಯತೆ ಮೆರೆದಿದ್ದಾರೆ. ಇಂದು ನಗರದ ಇಟಗಿ ಪೆಟ್ರೋಲ್‍ಪಂಪ್, ಆಕಾಶವಾಣಿ ಕೇಂದ್ರ, ಸಾಯಿಪಾರ್ಕ, ಹಮಾಲಕಾಲನಿ ಸೇರಿದಂತೆ ವಿವಿಧ ಕಡೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್, ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರು […]

ವಿಜಯಪುರ ಜಿಲ್ಲೆಯಲ್ಲಿ ಯಾವುದೇ ಕರೋನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ -ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

ವಿಜಯಪುರ ಮಾ 11: ಜಿಲ್ಲೆಯಾದ್ಯಂತ ಯಾವುದೇ ಕರೋನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲವೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಹೇಳಿದರು.ಜಿಲ್ಲಾ ಪಂಚಾಯತ ಸಭಾಂಗಣದಲ್ಲಿಂದು ವಿವಿಧ ಇಲಾಖೆಗಳ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಹೊಟೇಲ್ ಮಾಲಿಕರ ಸಂಘದ ಪ್ರತಿನಿಧಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳಿಗಾಗಿ ಕರೋನಾ ವೈರಸ್ ಮಾಹಿತಿ ವಿನಿಮಯ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈವರೆಗೆ ಜಿಲ್ಲೆಯಾದ್ಯಂತ ಯಾವುದೇ ಕರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ. ಸಾರ್ವಜನಿಕರು ಭಯಪಡುವ ಅವಶ್ಯಕತೆಯಿಲ್ಲ ಎಂದು ತಿಳಿಸಿದ ಅವರು […]

ಕೋಳಿ ಮಾಂಸ-ಮೊಟ್ಟೆ ಸೇವನೆಗೆ ಯಾವುದೇ ಆತಂಕ ಬೇಡ

ವಿಜಯಪುರ ಮಾ 11: ಇತ್ತಿಚಿಗೆ ಕಾಣಿಸಿಕೊಂಡಿರುವ ಕೊರೊನಾ ವೈರಸ್ ಸೋಂಕು (ಕೋವಿಡ್-19) ಕೋಳಿಗಳಿಂದ ಹರಡುತ್ತದೆ ಎಂಬ ವದಂತಿ ತಪ್ಪು ಸಂದೇಶದಿಂದ ಕೂಡಿದ್ದು, ಕೋಳಿ ಮಾಂಸ ಹಾಗೂ ಮೊಟ್ಟೆ ಸುರಕ್ಷಿತ ಆಹಾರವಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪ ನಿದೇಶಕರಾದ ಡಾ||ಪ್ರಾಣೇಶ.ಆರ್.ಜಹಾಗಿರದಾರ ಅವರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕೊರೋನಾ ವೈರಸ್ ಕೋಳಿಗಳಿಂದ ಹರಡುತ್ತದೆ ಎಂದು ತಪ್ಪು ಸಂದೇಶಗಳು ಹಬ್ಬಿದ್ದು, ಅಂತಹ ವದಂತಿಗಳಿಗೆ ಯಾವುದೇ ವೈದ್ಯಕೀಯ ಆಧಾರವಿಲ್ಲ. ಭಾರತದಲ್ಲಿ ಕೋಳಿಗಳಿಗೆ ಕೊರೊನಾ ವೈರಸ್ ಸೊಂಕು ಕಾಣಿಸಿಕೊಂಡ ಬಗ್ಗೆ […]

ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ವಿಜಯಪುರ ಮಾ 11: ಕನ್ನಡ ಪುಸ್ತಕ ಪ್ರಾಧಿಕಾರದಿಂದ 2019ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಉದ್ದೇಶದಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು 18 ರಿಂದ 35 ವರ್ಷ ವಯಸ್ಸಿನವರಾಗಿರಬೇಕು. ಸ್ವವಿವರವುಳ್ಳ ಮನವಿ ಪತ್ರದೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಹಾಗೂ ಪ್ರಸ್ತುತ ಸಲ್ಲಿಸುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಅದು ಎಲ್ಲಿಯೂ ಪ್ರಕಟವಾಗಿಲ್ಲ ಎಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು. ಆಯ್ಕೆಗಾಗಿ […]

ಕೃಷಿ ಮಹಾವಿದ್ಯಾಲಯದ ಗ್ರಂಥಾಲಯ ಸಹಾಯಕ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ವಿಜಯಪುರ ಮಾ 11: ವಿಜಯಪುರ ಕೃಷಿ ಮಹಾವಿದ್ಯಾಲಯದ ಗ್ರಂಥಾಲಯ ವಿಭಾಗದಲ್ಲಿ ಗ್ರಂಥಾಲಯ ಸಹಾಯಕ ತಾತ್ಕಾಲಿಕ ಹುದ್ದೆಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಲೈಬ್ರರಿ ಅಸಿಸ್ಟಂಟ್ 2 ಹುದ್ದೆಗೆ ಲೈಬ್ರರಿ ಮತ್ತು ಮಾಹಿತಿ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ದಿನಾಂಕ : 16-03-2020ರಂದು ಮುಂಜಾನೆ 10.00 ಗಂಟೆಗೆ ಸಂದರ್ಶನ ಕೊಠಡಿ, ಡೀನ್ (ಕೃಷಿ) ಕೃಷಿ ಮಹಾವಿದ್ಯಾಲಯ, ವಿಜಯಪುರದಲ್ಲಿ, ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳು ಹಾಗೂ ಮೂಲ ದಾಖಲೆಗಳ ಎರಡು ಝರಾಕ್ಸ್ ಪ್ರತಿ […]

ಮಹಿಳಾ ದಿನಾಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು

ವಿಜಯಪುರ ಮಾ 09: ಮಹಿಳಾ ದಿನಾಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ಸಮಾಜದಲ್ಲಿ ನಮ್ಮ ಮನೆ ಹೆಣ್ಣು ಮಕ್ಕಳಿಗೆ ಕರಾಟೆ ಕಲಿಸಿದರೆ ಸಾಲದು. ಗಂಡು ಮಕ್ಕಳಿಗೆ ಹೆಣ್ಣು ಮಕ್ಕಳನ್ನು ಗೌರವದಿಂದ ಕಾಣುವ ಹಾಗೂ ಪಾಲಕರು ಗಂಡು ಮಕ್ಕಳಿಗೆ ನೀಡುವಷ್ಟೇ ಅವಕಾಶವನ್ನು ಹೆಣ್ಣು ಮಕ್ಕಳಿಗೂ ನೀಡಬೇಕು. ಆಗ ಮಾತ್ರ ಈ ದಿನಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಶ್ರೀಮತಿ ಚೈತನ್ಯ ಶೆಟ್ಟಿ ಅವರು ಹೇಳಿದರು. ನಗರದ ರೂಡ್‍ಸೆಟ್ ಸಂಸ್ಥೆಯಲ್ಲಿ ಮಹಾನಗರ ಪಾಲಿಕೆಯ ದೀನ್‍ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ […]

ವಿಜಯಪುರದಲ್ಲಿ “ಲಾಲ್‍ಬಾಗ್ ಮಾದರಿಯಲ್ಲಿ ಸಸ್ಯ ಸಂಗಮ ಟ್ರೀ ಪಾರ್ಕ”

ವಿಜಯಪುರ  ಫೆ 09: ಭೂತನಾಳ ಕೆರೆ ಕರಾಡ ದೊಡ್ಡಿ ಆವರಣದಲ್ಲಿ ಸುಸಜ್ಜಿತ “ಸಸ್ಯ ಸಂಗಮ” ಟ್ರೀ ಪಾರ್ಕ್ ಅಭಿವೃದ್ಧಿ ಪಡಿಸುವ ಕುರಿತಂತೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸಸ್ಯ ಸಂಗಮ ಟ್ರೀ ಪಾರ್ಕ್ ಅಭಿವೃದ್ಧಿಗೆ ಸಂಬಂಧಪಟ್ಟಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಬೆಂಗಳೂರಿನ ಕಬ್ಬನ್ ಪಾರ್ಕ್, ಲಾಲ್‍ಬಾಗ್ ಮಾದರಿಯಲ್ಲಿ ಈ ಟ್ರಿ ಪಾರ್ಕ್ ರೂಪಿಸಲು ಉದ್ದೇಶಿಸಲಾಗಿದ್ದು, ಸಸ್ಯಶಾಸ್ತ್ರ ವಿದ್ಯಾರ್ಥಿಗಳ ಅಧ್ಯಯನದ ಅನುಕೂಲಕ್ಕಾಗಿ ವಿವಿಧ ತಳಿಯ […]

ಎಕ್ಸಲಂಟ ಶಾಲೆಯ ವಾರ್ಷಿಕ ಪ್ರಶಸ್ತಿ ವಿತರಣಾ ಸಮಾರಂಭ ಅದ್ಧೂರಿಯಾಗಿ ಜರುಗಿತು

ವಿಜಯಪುರ ಮಾ 07: ಎಕ್ಸಲಂಟ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆದರ್ಶನಗರ ವಿಜಯಪುರ ಇಲ್ಲಿ 2019-20 ನೇ ಸಾಲಿನ ವಾರ್ಷಿಕ ಪ್ರಶಸ್ತಿ ವಿತರಣಾ ಸಮಾರಂಭ ಅದ್ಧೂರಿಯಾಗಿ ಜರುಗಿತು. ಈ ಸಂಧರ್ಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎ.ಪಿ.ಎಂ.ಸಿ ಪೋಲಿಸ್ ಠಾಣಾ ಪಿ.ಎಸ್.ಆಯ್. ಶ್ರೀ ಸೋಮೇಶ ಗೆಜ್ಜಿ ರವರು ವಿದ್ಯಾರ್ಥಿಗಳ ಜೀವನದಲ್ಲಿ ಸಾಧನೆ ಮಾಡಬೇಕಾದರೆ ಗುರಿ ಒಂದೇ ಇದ್ದರೆ ಸಾಲದು ಜೊತೆಗೆ ಆತ್ಮಸೈರ್ಯ ಮತ್ತು ಸಾಧಿಸುವ ಛಲ ಇರುಬೇಕು. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳಬೇಕೆಂದು ವಿದ್ಯಾರ್ಥಿಗಳನ್ನುದೇಶಿಸಿ ಮಾತನಾಡಿದರು. […]