ಬಾಗಲಕೋಟೆ: Children’s rights ಮಕ್ಕಳ ಹಕ್ಕುಗಳ ರಕ್ಷಣೆ ಯಲ್ಲಿ ಮುಖ್ಯೋಪಾದ್ಯಾಯರ ಪಾತ್ರ ಬಹು ಮುಖ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು.
ಮಿಷನ್ ವಾತ್ಸಲ್ಯ, ಮಕ್ಕಳ ರಕ್ಷಣಾ ನಿರ್ದೇಶನಾಲಯ, Children’s rights ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಯುನಿಸೆಫ್ ಸಹಯೋಗದಲ್ಲಿ ಪ್ರೌಢಶಾಲಾ ಮುಖ್ಯೋಪಾದ್ಯಾಯರಿಗೆ ಮಕ್ಕಳ ರಕ್ಷಣಾ ನೀತಿ, ಪೋಸ್ಕೋ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಂದು ಪ್ರೌಢಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ ರಚನೆಮಾಡಿ ಕಾಯ್ದೆಗಳು ಸಮರ್ಪಕ ಅನುಷ್ಠಾನಗೊಳ್ಳುವಂತೆ ಆಗಬೇಕು. ಪೋಸ್ಕೋ ಕಾಯ್ದೆಯಡಿ ಪ್ರಕರಣಗಳು ದಾಖಲೆ ಆಗುತ್ತಿವೆ. ಆದರೆ ಯಾವ ಪ್ರಕರಣ ರಿಜಲ್ಟ ಕೊಡುತ್ತಿಲ್ಲ. ಕಾಯ್ದೆಗಳು ಜಾರಿಗೆ ತರಲಾಗುತ್ತಿದೆ. ಆದರೆ ಸರಿಯಾಗಿ ಅನುಷ್ಟಾನಗೊಳ್ಳುತ್ತಿಲ್ಲ. ಕಾಯ್ದೆಗಳ ಬಗ್ಗೆ ಜಾಗೃತಿ ಹೆಚ್ಚಾಗಬೇಕಿದೆ. ಮಕ್ಕಳಲ್ಲಿ ಕಾನೂನು ಅರಿವು ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಖ್ಯೋಪಾದ್ಯಾಯರ ಪಾತ್ರ ಬಹು ಮುಖ್ಯವಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ ತಲೆ ಮಾರಿನಿಂದ ಸಮಾಜದಲ್ಲಿ ಕೆಲವೊಂದು ಅನಿಷ್ಟ ಪದ್ದತಿಗಳು ಇನ್ನು ಜೀವಂತವಾಗಿವೆ. ಅವುಗಳಲ್ಲಿ ಬಾಲ್ಯವಿವಾಹ ಒಂದಾಗಿದ್ದು, ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾದ್ಯವಾಗುತ್ತಿಲ್ಲ. ಅನುಷ್ಠಾನದ ಪ್ರಮಾಣ ಕಡಿಮೆಯಾಗುತ್ತಿದೆ. ಹೆಚ್ಚಿಗೆ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಗ್ರಾಮೀಣ ಮಟ್ಟದಲ್ಲೂ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಮಕ್ಕಳ ಹಕ್ಕುಗಳ ಕಾಯ್ದೆಗಳು ಸಮರ್ಪವಾಗಿ ಅನುಷ್ಠಾನಗೊಳ್ಳುವಂತೆ ಮಾಡಲು ತಿಳಿಸಿದರು.
ಇದನ್ನೂ ಓದಿ: Vijayapura News | ಶಿಸ್ತು, ಸಹಕಾರ, ಸೇವಾ ಮನೋಭಾವನೆ ಮೂಡಿಸುವಲ್ಲಿ ಎನ್.ಎಸ್.ಎಸ್. ಶಿಬಿರ ಉಪಯುಕ್ತವಾಗಿದೆ- ಪ್ರೊ. ದೇಶಪಾಂಡೆ
ಮಕ್ಕಳಲ್ಲಿ ಪಾಠದ ಜೊತೆಗೆ ಒಳ್ಳೇಯ ನಡತೆ, ಕೌಶಲ್ಯ ಹಾಗೂ ಸ್ವಯಂ ರಕ್ಷಣೆ ಮಾಡುಕೊಳ್ಳಲು ಕರಾಟೆ ತರಬೇತಿ ನೀಡಿ ಶಕ್ತಿ ಬರುವಂತೆ ಮಾಡಬೇಕು. ಅಂದಾಗ ಮಾತ್ರ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶಾಲೆಯ ಮುಖ್ಯೋಪಾದ್ಯಾಯರು ಹೆಚ್ಚಿನ ಜವಾಬ್ದಾರಿಯನ್ನು ವಹಿಸಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸುವಲ್ಲಿ ಶ್ರಮವಹಿಸಲು ತಿಳಿಸಿದ ಅವರು ಶಾಲಾ ವಾತಾವರಣ ಸ್ವಚ್ಛವಾಗಿಟ್ಟುಕೊಳ್ಳಲು ತಿಳಿಸಿದರು.
ಈ ಸಂದರ್ಭದಲ್ಲಿ ದತ್ತು ಮಾಸಾಚರಣೆ ನವೆಂಬರ-24ರ ಅಂಗವಾಗಿ ದತ್ತು ಮಾಹಿತಿ ಕುರಿತು ಬಿತ್ತಿ ಪತ್ರಿಕೆಗಳನ್ನು ಬಿಡುಗಡೆಗೊಳಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ಕೊಪ್ಪಳದ ಯುನಿಸೆಫ್‍ನ ಹರೀಶ ಜೋಶಿ ಮಕ್ಕಳ ರಕ್ಷಣಾ ನೀತಿ-2016, ಪೋಸ್ಕೋ ಕಾಯ್ದೆ-2012, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ವಿವರವಾಗಿ ತಿಳಿಸಿಕೊಟ್ಟರು.
ಇದನ್ನೂ ಒದಿ: Vijayapura News | ಮಹಿಳಾ ವಿವಿ: ಗ್ರಾಫಿಕ್ ಡಿಸೈನಿಂಗ್ ಸರ್ಟಿಫಿಕೇಟ್ ಕೋರ್ಸ್‍ಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಕೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ.ವೀಣಾ ಸೇರಿದಂತೆ ಇತರರು ವೇದಿಕೆ ಮೇಲೆ ಇದ್ದರು. ತರಬೇತಿ ಕಾರ್ಯಾಗಾರದಲ್ಲಿ ಬಾಗಲಕೋಟೆ, ಹುನಗುಂದ ಹಾಗೂ ಬಾದಾಮಿ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯರು ಪಾಲ್ಗೊಂಡಿದ್ದರು.






