ವಿಜಯಪುರ: ಕಳೆದ ಮೂರು ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ ಎಲ್ಲ ವರ್ಗದ ಜನರ ಉಜ್ವಲ ಭವಿತವ್ಯದ ಆಶಾದೀಪ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ ಬದುಕಿಗೆ ನೆರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ತಜ್ಞರಾಗಿದ್ದಾರೆ. ಎಲ್ಲ ವರ್ಗದವರ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಿದೆ. ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಎಲ್ಲ ಆಯಾಮಗಳಲ್ಲೂ ನಮ್ಮ ಸರ್ಕಾರ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಬೃಹತ್ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ devarahipparagi-development-mb-patil-inauguration ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಾಭಿವೃದ್ಧಿಕೋಶ, ಇಂಜನೀಯರಿAಗ್ ಘಟಕ ಬೆಂಗಳೂರು ಹಾಗೂ ಪೌರಾಡಳಿತ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೂವತ್ತು ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆರಿಸಿದ ನೂತನ ಕಟ್ಟಡ ಹಾಗೂ ದೇವರಹಿಪ್ಪರಗಿಯ ಪಟ್ಟಣ ಪಂಚಾಯತಿಯ ಕಾರ್ಯಾಲಯದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈ ಹಿಂದೆ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇತ್ತು. ಆದರೆ ನಾವು ಕೈಗೊಂಡ ನೀರಾವರಿ ಯೋಜನೆಗಳಿಂದಾಗಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಇದರಿಂದಾಗಿ ಬಿಸಿಲಿನ ಬೇಗೆ ನೀಗಿದೆ. ಜೊತೆಗೆ ಕೋಟಿ ವೃಕ್ಷ ಅಭಿಯಾನದ ಫಲವಾಗಿ ಹಸಿರು ನಳನಳಿಸುವಂತಾಗಿದ್ದನ್ನು ಕಾಣಬಹುದಾಗಿದೆ ಎಂದರು.ಈ ಬಾರಿ ಬೇಸಿಗೆ ಸಂದರ್ಭದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಯಾವುದೇ ಸಮಸ್ಯೆಯಾಗಬಾರದೆಂಬ ದೂರದೃಷ್ಟಿ ಹೊಂದಿ, ಜಲಾಶಯಗಳಲ್ಲಿ ನೀರು ಕಾಯ್ದಿಟ್ಟುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಬಾರಿ ಆಗಸ್ಟ್ ೧ ರವರೆಗೂ ಕಿಡಿಯು ನೀರಿಗಾಗಿ ನೀರು ಕಾಯ್ದಿಡಲು ಸೂಚಿಸಲಾಗಿದೆ ಎಂದರು. ಶಿಕ್ಷಣ, ಆರೋಗ್ಯ,, ಕುಡಿಯುವ ನೀರು, ನೀರಾವರಿಗೆ ನಮ್ಮ ಸರ್ಕಾರ ಆದ್ಯತೆ ನೀಡಿ ಜನರ ಆಶೋತ್ತರಗಳನ್ನು ಈಡೇರಿಸುವುದರಲ್ಲಿ ಕಾರ್ಯೋನ್ಮುಖವಾಗಿದೆ. ಇದು ನಮ್ಮ ಕರ್ತವ್ಯವಾಗಿದ್ದು, ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದ ಸಚಿವರು, ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ಸಹಾಯ ಸಹಕಾರ ನೀಡಿದ ರೈತರು, ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಇದೇ ವೇಳೆ ಅಭಿನಂದನೆಗಳನ್ನು ಸಲ್ಲಿಸಿದರು.
ಜಿಲ್ಲೆಯ ೧೭೮ ಹಳ್ಳ ತುಂಬುವ ಮಹತ್ವಾಕಾಂಕ್ಷಿ ಯೋಜನೆಯನ್ನು ಈಗಾಗಲೇ ಕಾರ್ಯಗತಗೊಳಿಸಲಾಗಿದೆ. ಕ್ಯಾನಲ್ ಜಾಲ ಮೂಲಕ ಹಳ್ಳತುಂಬಿ ಬಾಂದಾರ ನಿರ್ಮಾಣ ಮಾಡಲಾಗುವುದು. ಇದರಿಂದಾಗಿ ಜಿಲ್ಲೆಯಲ್ಲಿ ಮತ್ತಷ್ಟು ಅಂತರ್ಜಲ ಮಟ್ಟ ಹೆಚ್ಚಾಗಲಿದೆ. ತನ್ಮೂಲಕ ಅಂತರ್ಜಲ ಮಟ್ಟ ಹೆಚ್ಚಳದಲ್ಲಿ ದೇಶದಲ್ಲಿಯೇ ವಿಜಯಪುರ ಜಿಲ್ಲೆ ಮಾದರಿಯಾಗಲಿದೆ ಎಂದರು.
ಆರೋಗ್ಯ ಕ್ಷೇತ್ರದಲ್ಲಿ ಈ ಭಾಗದ ಸಾರ್ವಜನಿಕರಿಗೆ ಬಹಳಷ್ಟು ಅನುಕೂಲ ಕಲ್ಪಿಸಲಾಗಿದೆ. ದೇವರಹಿಪ್ಪರಗಿ ಆಸ್ಪತ್ರೆಯನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಿದ್ದರಿಂದ ಈ ಭಾಗದ ಜನತೆಗೆ ಬಹಳಷ್ಟು ಅನುಕೂಲವಾಗಲಿದೆ ಎಂದರು.ಸುಸಜ್ಜಿತವಾದ ಕಟ್ಟಡ ಐಸಿಯು ಬೆಡ್ ಮತ್ತು ಮಕ್ಕಳ ಐಸಿಯು ಬೆಡ್ ಇದೆ. ವೈದ್ಯರ ಅವಶ್ಯಕತೆಯನುಸಾರ ಆರೋಗ್ಯ ಸಚಿವರ ಹಾಗೂ ಸಿಎಂ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ಡಯಾಲಿಸಿಸ್ ಸೆಂಟರ್ ಬೇಡಿಕೆ ಅನುಸಾರ ಮಾಡಿಕೊಡಲು ಪ್ರಯತ್ನಿಸಲಾಗುವುದು. ಸುಸಜ್ಜಿತವಾಗಿ ಕಟ್ಟಡ ನಿರ್ಮಿಸಿದ್ದಾರೆ. ವ್ಯವಸ್ಥಿತವಾಗಿ ನಿರ್ಮಿಸಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಮಾದರಿಯಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ. ಇಲ್ಲಿನ ಶಾಸಕರ ಮುತುವರ್ಜಿಯಿಂದ ಇದೆಲ್ಲ ಸಾಧ್ಯವಾಗಿದೆ ಎಂದು ನೆರೆದ ಜನತೆಗೆ ವಿವರಿಸಿದರು.
devarahipparagi-development-mb-patil-inauguration ದೇವರಹಿಪ್ಪರಗಿ ಶಾಸಕರಾದ ರಾಜುಗೌಡ ಪಾಟೀಲ ಅವರು ಅಧ್ಯಕ್ಷತೆ ವಹಿಸಿ, ಅಭಿವೃದ್ದಿ ವಿಷಯದಲ್ಲಿ ಮತಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ಹಳ್ಳ ತುಂಬುವುದರಿAದ ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ. ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಿ ಆರೋಗ್ಯ ಕ್ಷೇತ್ರದಲ್ಲಿ ಜನರಿಗೆ ಅನುಕೂಲವಾಗಲಿದೆ. ದೇವರಹಿಪ್ಪರಗಿಯಲ್ಲಿ ಆರೋಗ್ಯಕ್ಕೆ ಗಮನ ಹರಿಸಲಾಗುವುದು. ಕುಡಿಯುವ ನೀರಿಗೆ ಆದ್ಯತೆ, ಹೆಚ್ಚಿನ ಔಷಧಿ, ವೈದ್ಯರು, ಸಿಬ್ಬಂದಿ ಸಂಖ್ಯೆ ಹೆಚ್ಚಿಸಿ, ಈ ಭಾಗದ ಜನತೆಗೆ ಅನುಕೂಲ ಮಾಡಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದರು. ಅಭಿವೃದ್ಧಿ ವಿಷಯದಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಆಯುಷ್ಮಾನ ಆರೋಗ್ಯ ಹಾಗೂ ಆಶಾ ಕಿರಣ ಯೋಜನೆಯಡಿ ಸಾಂಕೇತಿಕವಾಗಿ ಐದು ಜನರಿಗೆ ಇದೇ ವೇಳೆ ಕನ್ನಡಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ದೇವರಹಿಪ್ಪರಗಿ ಪಟ್ಟಣ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಬಸಪ್ಪ ದೇವಣಗಾಂವ, ತಾಲೂಕಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಸಾಹೇಬಗೌಡ ನಿಂಗಪ್ಪ ಬಿರಾದಾರ, ದೇವರಹಿಪ್ಪರಗಿಯ ಪಟ್ಟಣ ಪಂಚಾಯತಿಯ ಉಪಾಧ್ಯಕ್ಷರಾದ ರಮೇಶ ಮಸಬಿನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಕುಮಾರ ಗುಣಾರಿ, ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದಿನ್ ಸೌದಾಗರ್, ತಹಶೀಲ್ದಾರ ನಿಂಗಣ್ಣ ಬಿರಾದಾರ, ಪಟ್ಟಣ ಪಂಚಾಯತಿಯ ತಾಲೂಕ ಕಾರ್ಯನಿರ್ವಹಣಾಧಿಕಾರಿಗಳಾದ ಭಾರತಿ ಚೆಲುವಯ್ಯ ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.






