ವಿಜಯಪುರ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಎಚ್ ಐ ವಿ/ ಏಡ್ಸ್ ಕುರಿತು ಜಾಗೃತಿಗೊಳಿಸಲು ತೀವ್ರ ಐಇಸಿ ಪ್ರಚಾರಾಂದೋಲನ-2024ರ ಅಂಗವಾಗಿ ಪದವಿ,ಸ್ನಾತಕೋತ್ತರ ಹಾಗೂ ವೃತ್ತಿಪರ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ (ಪುರುಷರು 18ರಿಂದ 25 ವರ್ಷದೊಳಗಿನ) ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾವಳಿಯನ್ನು District Level Kabbadi Tournament ನವೆಂಬರ್ 20ರಂದು ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
District Level Kabbadi Tournament ಭಾಗವಹಿಸುವ ಕಾಲೇಜಿನವರು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ್ಕೆ ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗಾಗಿ ಮೊ.ನಂ: 9845465618, 8310231655ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.






