Vijayapura News : ಅಕ್ರಮ ಅಕ್ಕಿ ಸಾಗಾಟ ಇಬ್ಬರ ಬಂಧನ

Illegal rice transportation image
ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ತಿಳಗುಳ ಗ್ರಾಮದಲ್ಲಿ  ಹಾಗೂ ಇಂಡಿ ಪಟ್ಟಣದಲ್ಲಿ  ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಾಗಿಸುತ್ತಿರುವ ಅಕ್ಕಿಯನ್ನು (Illegal rice transportation) ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲೆಯಲ್ಲಿ ದೇವರಹಿಪ್ಪರಗಿ ತಾಲೂಕಿನ ತಿಳಗುಳ ಗ್ರಾಮದಲ್ಲಿ ಟಾಟಾ ಎಸಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲಿಸ್ ಅಧಿಕಾರಿಗಳು ದಾಳಿ ನಡೆಸಿದ 7 ಪ್ಲಾಸ್ಟಿಕ್ ಚೀಲ್‍ಗಳಲ್ಲಿ ತುಂಬಿರುವ ಅಕ್ಕಿ ಹಾಗೂ ಗೂಡ್ಸ್ ವಾಹನವನ್ನು ವಶಕ್ಕೆ ಪಡೆದು, ವಾಹನ ಚಾಲಕ ಸೈಫನ್ ಆಲಮೇಲ್ ಮೇಲೆ ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: Operation Sindoor : ಆಪರೇಶನ್‌ ಸಿಂಧೂರ: ಭಯೋತ್ಪಾದಕ ದಾಳಿಯ ಪ್ರತಿಕಾರ
ಇನ್ನೊಂದು ಪ್ರತ್ಯೇಕ ಘಟನೆಯಲ್ಲಿ ಇಂಡಿ ಪಟ್ಟಣದ ಕುಂಬಾರ ಓಣಿಯ ರಸ್ತೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, 75110 ರೂ. ಮೌಲ್ಯದ  2590 ಕೆ.ಜಿ. ಅಕ್ಕಿ, ಹಾಗೂ ಗೂಡ್ಸ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಾಹನ ಚಾಲಕ ಪರಾರಿಯಾಗಿದ್ದು, ಈ ಕುರಿತು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Illegal rice transportation ತಿಳಗೂಳ ಗ್ರಾಮದಲ್ಲಿ ನಡೆದ ದಾಳಿಯಲ್ಲಿ ದೇವರಹಿಪ್ಪರಗಿ ಆಹಾರ ನಿರೀಕ್ಷಕ ಅಮೋಘ ದಳವಾಯಿ ಹಾಗೂ ಇಂಡಿ ಪಟ್ಟಣದಲ್ಲಿ ನಡೆದ ದಾಳಿಯಲ್ಲಿ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಅವರು ನೇತೃತ್ವ ವಹಿಸಿದ್ದರು ಎಂದು  ಆಹಾರ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »