Vijayapura News | ಗ್ರಂಥಾಲಯ ಸ್ಥಳ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್

Library location image

ವಿಜಯಪುರ: Library location ಬಸವನ ಬಾಗೇವಾಡಿಯಲ್ಲಿ ಹೊಸದಾಗಿ ಗ್ರಂಥಾಲಯ ನಿರ್ಮಾಣವಾಗುವ ಕುರಿತು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಗ್ರಂಥಾಲಯ ಕಟ್ಟಡದಲ್ಲಿ ಸಾಕಷ್ಟು ಗಾಳಿ ಬೆಳಕು ಬರುವಂತೆ, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ಅಗತ್ಯ ಮೂಲಭೂತ ಸೌಕರ್ಯಕ್ಕೆ ಆಧ್ಯತೆ ನೀಡಿ ನಿರ್ಮಾಣ ಯೋಜನೆ ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು. ನಗರದಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸಲು ಸೂಚನೆ ನೀಡಿದ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒತ್ತುವರಿ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: Vijayapura News : ಜಾನಪದ ಗ್ರಾಮೀಣರ ಉಸಿರು : ಹಾಸಿಂಪೀರ ವಾಲಿಕಾರ

Library location ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ, ಬಾಕಿ ಕಡತಗಳ ಪರಿಶೀಲನೆ, ಆಧಾರ ನೋಂದಣಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆ ಪ್ರಗತಿ ಮಾಹಿತಿ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕಾಧಿಕಾರಿ ರಿಷಿ ಆನಂದ, ಬಸವನ ಬಾಗೇವಾಡಿ ತಹಶೀಲ್ದಾರ್ ವಾಯ್.ಎಸ್. ಸೋಮನಕಟ್ಟಿ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್. ಚಿತ್ತರಗಿ ಸೇರಿದಂತೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »