Vijayapura News | ಶಿಕ್ಷಣ ಕ್ಷೇತ್ರಕ್ಕೆ ಮೌಲಾನಾ ಅಜಾದ ಅವರ ಕೊಡುಗೆ ಅಪಾರ – ಪ್ರೊ.ಸುರೇಶ ಸಮ್ಮಸಗಿ

Maulana Azad image

ವಿಜಯಪುರ: ಶಿಕ್ಷಣ ಕ್ಷೇತ್ರಕ್ಕೆ ಮೌಲಾನಾ ಅಜಾದ Maulana Azad ಅವರ ಕೊಡುಗೆ ಅಪಾರವಾಗಿದೆ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಸುರೇಶ ಸಮ್ಮಸಗಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮೌಲಾನಾ ಅಜಾದ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮೌಲಾನಾ ಅಜಾದ ಅವರ ಜನ್ಮ ದಿನದ ಪ್ರಯುಕ್ತ ‘ರಾಷ್ಟ್ರೀಯ ಶಿಕ್ಷಣ ದಿನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Vijayapura News | ಭಾರತೀಯ ವೈದ್ಯಕೀಯ ಸಂಘದಿಂದ ಸಾರ್ವಜನಿಕ ಆರೋಗ್ಯ ವಿಭಾಗಕ್ಕೆ ಆಯ್ಕೆ

Maulana Azad ಶಿಕ್ಷಣವು ವ್ಯಕ್ತಿಯ ಹಾಗೂ ಸಮಾಜದ ಸಮಗ್ರ ಪ್ರಗತಿಗೆ ದಾರಿಯಾಗಿದೆ. ಇದು ಮಾನವೀಯ ಮೌಲ್ಯಗಳನ್ನು ಬೆಳೆಸಿ, ಆರ್ಥಿಕ ಸಮೃದ್ಧಿ, ಸಾಮಾಜಿಕ ಸಮಾನತೆ, ಮತ್ತು ಸಾಂಸ್ಕøತಿಕ ಪ್ರಜ್ಞೆಯನ್ನು ಹೆಚ್ಚಿಸುತ್ತದೆ. ಗುಣಮಟ್ಟದ ಶಿಕ್ಷಣವು ಕೌಶಲ್ಯಾಭಿವೃದ್ಧಿ, ಉದ್ಯೋಗಾವಕಾಶಗಳು ಮತ್ತು ಜಾಗತಿಕ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸದಷ್ಟೂ, ಅಜ್ಞಾನ, ಬಡತನ, ಮತ್ತು ಅಸಮಾನತೆಯನ್ನು ನಿಲ್ಲಿಸಲು ಸಹಾಯಕವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಖಡ್ಗಕ್ಕಿಂತ ಲೇಖನಿ ಹರಿತವಾದದ್ದು ಎಂದು ಪ್ರತಿಪಾದಿಸಿದ ಮಹಾನ್ ಶಿಕ್ಷಣ ತಜ್ಞ. ಮೌಲಾನಾ ಆಜಾದ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯನ್ನು ತಂದವರು ಎಂದರು.

ಇದನ್ನೂ ಓದಿ: Bagalkote News | ಗ್ರಾ.ಪಂ ಸಿಬ್ಬಂದಿಗಳ ನೇಮಕಾತಿ ಪ್ರಸ್ತಾವನೆಗೆ ಅನುಮೋದನೆ | 72 ಸಿಬ್ಬಂದಿಗಳಿಗೆ ಅನುಮೋದನೆ ಪತ್ರ ವಿತರಿಸಿದ ಸಿಇಓ ಕುರೇರ

ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಮೌಲಾನಾ ಅಜಾದ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಗುಲಾಬ ರಾಠೋಡ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಹಿಂದಿ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಯಾದ ಪದ್ಮಶ್ರೀ ಚೌಗುಲೆ ನಿರೂಪಿಸಿದರು. ಮಂಜುಳಾ ಬಿಸನಾಳ ವಂದಿಸಿದರು.


Share the Post:

ಇತ್ತೀಚಿನ ಸುದ್ದಿಗಳು