Vijayapura News : ಮಾನಸಿಕ ಆರೋಗ್ಯ ದಿನ: ಅರವಿಂದ ಎಸ್. ಹಾಗರಗಿ

Mental depression im,age

ವಿಜಯಪುರ: Mental depression ಮಾನಸಿಕ ಒತ್ತಡಗಳಿಂದ ಪಾರಾಗಲು ಓದು, ಸಂಗೀತ, ಧ್ಯಾನ, ಆಟೋಟಗಳಂತಹ ಉತ್ತಮ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಆರೋಗ್ಯ ಸದೃಢತೆ ಹೊಂದಲು ಸಹಾಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಎಸ್. ಹಾಗರಗಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ಇವರ ಸಹಯೋಗದಲ್ಲಿ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಪ್ರಯುಕ್ತ ‘ಕಾರ್ಯಕ್ಷೇತ್ರದಲ್ಲಿ ಮಾನಸಿಕ ಆರೋಗ್ಯಕ್ಕೆ ಆಧ್ಯತೆ ನೀಡುವ ಸಮಯ ಈಗ ಬಂದಿದೆ’ ಎಂಬ ಘೋಷವಾಕ್ಯದಡಿಯಲ್ಲಿ ನಡೆದ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಇದನ್ನೂ ಓದಿ: Vijayapura News | ಗ್ರಂಥಾಲಯ ಸ್ಥಳ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್

Mental depression ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವವರು ಮನಸ್ ಉಚಿತ ಸಹಾಯವಾಣಿ 14416 ಕರೆ ಮಾಡಿ ಆಪ್ತ ಸಮಾಲೋಚನೆ ಪಡೆದಕೊಳ್ಳಬಹುದು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮನೋವೈದ್ಯರು, ಆಪ್ತ ಸಮಾಲೋಚಕರು ಒತ್ತಡ ಮುಕ್ತ ಜೀವನ ನಡೆಸಲು ಉಚಿತ ಸಲಹೆಗಳನ್ನು ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಸಂಪತ್ತ ಗುಣಾರಿ ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬಂತೆ ಸಂಪೂರ್ಣ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅವಶ್ಯಕವಾಗಿದೆ ಎಂದರು. ಜಾಥಾವು ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮಾರುಕಟ್ಟೆ ರಸ್ತೆಯ ಮೂಲಕ ಜಿಲ್ಲಾ ಆರೋಗ್ಯ ಕುಟುಂಬ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅವರಣದವರೆಗೆ ನಡೆಯಿತು.

ಇದನ್ನೂ ಓದಿ: Vijayapura News : ಜಾನಪದ ಗ್ರಾಮೀಣರ ಉಸಿರು : ಹಾಸಿಂಪೀರ ವಾಲಿಕಾರ

ಈ ವೇಳೆ ತಾಲೂಕಾ ಆರೋಗ್ಯಾಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ.ಎಂ.ಕೊಲುರ, ಸುರೇಶ ಹೊಸಮನಿ ಸೇರಿದಂತೆ ಜಿಲ್ಲಾ ಮಾನಸಿಕ ಆರೋಗ್ಯ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಸಿಬ್ಬಂದಿಗಳು ಸೇರಿದಂತೆ ತುಳಜಾಭವಾನಿ ನರ್ಸಿಂಗ್ ಕಾಲೇಜ, ಅಶ್ವಿನಿ ನರ್ಸಿಂಗ ಕಾಲೇಜ, ಬಾಂಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »