ವಿಜಯಪುರ : Multi Village Water ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ವಿಜಯಪುರ ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ ವಿವಿಧ ಜಲಮೂಲಗಳು ಹಾಗೂ ನೀರು ಸಂಸ್ಕರಣಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಹುಹಳ್ಳಿ ಕುಡಿಯುವ ನೀರು ಯೋಜನೆಗಳ ಪರಿಶೀಲನೆ
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಮತ್ತು ಇತರೆ 31 ಗ್ರಾಮಗಳು ಹಾಗೂ ಚಡಚಣ ತಾಲೂಕಿನ ಇಂಚಗೇರಿ ಮತ್ತು ಇತರೆ 41 ಗ್ರಾಮಗಳಿಗೆ ನೀರು ಪೂರೈಸುವ ಯೋಜನೆಗಳ ಜಲಮೂಲಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅವರು ಇಂಡಿ ತಾಲೂಕಿನ ಅರ್ಜನಾಳ ಹಾಗೂ ಹಂಜಗಿ ಕೆರೆಗಳಿಗೆ ಭೇಟಿ ನೀಡಿ ನೀರಿನ ಸಂಗ್ರಹ ಪ್ರಮಾಣ, ಜಲಾಶಯಗಳ ಸ್ಥಿತಿ ಮತ್ತು ಒತ್ತುವರಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮುಂದಿನ ದಿನಗಳಲ್ಲಿ ನೀರಿನ ಕೊರತೆ ಉಂಟಾಗದಂತೆ ಭೀಮಾ ನದಿ ಮತ್ತು ಇಂಡಿ ಶಾಖಾ ಕಾಲುವೆ ಮೂಲಕ ಅಗತ್ಯ ಪ್ರಮಾಣದ ನೀರು ಸಂಗ್ರಹಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ನೀರು ಸಂಸ್ಕರಣಾ ಘಟಕ ಪರಿಶೀಲನೆ
ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ನೀರು ಸಂಸ್ಕರಣಾ ಘಟಕ, ಪಂಪ್ ಹೌಸ್ ಹಾಗೂ ಕ್ಲಾರಿನೇಶನ್ ಘಟಕಗಳ ಕಾರ್ಯವೈಖರಿಯನ್ನು ಸಿಇಒ ಪರಿಶೀಲಿಸಿದರು. ಎಲ್ಲಾ ತಾಂತ್ರಿಕ ಘಟಕಗಳು ಸುಸೂತ್ರವಾಗಿ ಕಾರ್ಯನಿರ್ವಹಿಸುವಂತೆ ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು. ಯಾವುದೇ ತಾಂತ್ರಿಕ ದೋಷ ಕಂಡುಬಂದರೆ ತಕ್ಷಣ ಸರಿಪಡಿಸಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಡೆಗೆ ಸೂಚನೆ
ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಬೇಡಿಕೆ ಹೆಚ್ಚಾಗುವ ಹಿನ್ನೆಲೆ ಯಾವುದೇ ಗ್ರಾಮದಲ್ಲಿ ಸಮಸ್ಯೆ ಉಂಟಾಗದಂತೆ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ರಿಷಿ ಆನಂದ ಹೇಳಿದರು. ನೀರಿನ ಕೊರತೆ ಉಂಟಾಗುವ ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಿ ಪರ್ಯಾಯ ವ್ಯವಸ್ಥೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಪೈಪ್ಲೈನ್ ದುರಸ್ತಿ, ಮೋಟಾರ್ ಸಮಸ್ಯೆ ಹಾಗೂ ವಿದ್ಯುತ್ ವ್ಯತ್ಯಯಗಳನ್ನು ತಕ್ಷಣ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕ ದೂರುಗಳಿಗೆ ತ್ವರಿತ ಸ್ಪಂದನೆ
Multi Village Water ಗ್ರಾಮಸ್ಥರಿಂದ ಕುಡಿಯುವ ನೀರಿನ ಸಮಸ್ಯೆ ಕುರಿತು ದೂರುಗಳು ಬಂದಲ್ಲಿ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ತ್ವರಿತ ಪರಿಹಾರ ಕ್ರಮ ಕೈಗೊಳ್ಳಬೇಕು. ಈ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಸಿಇಒ ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಸಂಜಯ ಕೋಟೆನ್ನವರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಮಚಂದ್ರ ಬಂಡಿ, ಶಾಖಾಧಿಕಾರಿಗಳಾದ ಚಂದ್ರಶೇಖರ ಚವ್ಹಾಣ, ಗುಲ್ನಾಜ ಜಮಾದಾರ, ಶಶಿಧರ ಮೇಡೇದಾರ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
Read more: ಬಹುಹಳ್ಳಿ Drinking Water Project ಪರಿಶೀಲನೆಗೆ ಜಿಪಂ ಸಿಇಒ ರಿಷಿ ಆನಂದ ಕಟ್ಟುನಿಟ್ಟಿನ ಸೂಚನೆ-
Vijayapura Water Supply Disruption ಮೇ 30-31 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ವಿಜಯಪುರ: Water Supply Disruption ಹಿನ್ನೆಲೆಯಲ್ಲಿ ವಿಜಯಪುರ ನಗರದಲ್ಲಿ ಮೇ.30 ಹಾಗೂ 31ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. Water Supply Disruption ಹಿನ್ನೆಲೆ ಏನು? ವಿಜಯಪುರ
-
Vijayapura Pratibha Puraskar Event Vidyarthi Samaroha Grand Program

ವಿಜಯಪುರ: ನಗರದಲ್ಲಿ ನಡೆಯಲಿರುವ Pratibha Puraskar Event ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವ ಮಹತ್ವದ ಸಮಾರಂಭವಾಗಿದೆ. ಇದೇ ದಿ.31 ರಂದು ಬೆಳಿಗ್ಗೆ 10 ಗಂಟೆಗೆ ಕಿತ್ತೂರ ರಾಣಿ ಚೆನ್ನಮ್ಮ ಕಲ್ಯಾಣ ಮಂಟಪದಲ್ಲಿ ಈ ಕಾರ್ಯಕ್ರಮ ಭವ್ಯವಾಗಿ







