ವಿಜಯಪುರ: ಜಿಲ್ಲೆಯಲ್ಲಿ ನೈಸರ್ಗಿಕ ಸಂಪನ್ಮೂಲ ಕಾಮಗಾರಿಗಳಾದ Narega Scheme ಕೆರೆ, ನಾಲಾ, ಕಲ್ಯಾಣಿ ಮತ್ತು ಇನ್ನಿತರ ಕಾಮಗಾರಿಗಳನ್ನು ನಿಯಮಾನುಸಾರ ವೈಜ್ಞಾನಿಕವಾಗಿ ಅನುಷ್ಟಾನಗೊಳಿಸಬೇಕು ಎಂದು ಭಾರತ ಸರ್ಕಾರದ ಬೃಹತ್ ಕೈಗಾರಿಕಾ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿಗಳಾದ ವಿಕಾಸ ಡೋಗ್ರಾ ಅವರು ಸೂಚನೆ ನೀಡಿದರು.
ಇದನ್ನೂ ಓದಿ: ಸಾಕ್ಷರತಾ ದಿನಾಚರಣೆ 2024: ವಿಚಾರಣಾ ಬಂಧಿಗಳು ಕಾರ್ಯಕ್ರಮದಲ್ಲಿ ಭಾಗಿ.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ Narega Scheme
ಶುಕ್ರವಾರ ತಾಂತ್ರಿಕ ಅಧಿಕಾರಿಗಳಾದ ಅನಾಮಿಕಾ ಐಚ್ ಅವರೊಂದಿಗೆ ವಿಜಯಪುರ ಜಿಲ್ಲೆಗೆ ಭೇಟಿ ನೀಡಿ, ವಿಜಯಪುರ ಜಿಲ್ಲೆಯ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಬರಗಾಲ ಘೋಷಣೆಯಾಗಿದ್ದರಿಂದ, ಜಿಲ್ಲೆಗೆ ನೈಸರ್ಗಿಕವಾಗಿ ಬೇಕಾಗುವ ಯೋಜನೆಗಳನ್ನು ಸರಕಾರದಿಂದ ಪಡೆದು, ಬರಗಾಲ ಸಂದರ್ಭದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ Narega Scheme ಹಾಗೂ ಅನುಷ್ಟಾನ ಇಲಾಖೆಗಳ ಅಡಿಯಲ್ಲಿ ಹಮ್ಮಿಕೊಂಡಿರುವ ಕ್ರಮಗಳ ಮತ್ತು ಅನುಷ್ಟಾನ ಮಾಡಿರುವ ವಿವಿಧ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಇದನ್ನೂ ಓದಿ: International Democracy Day : ಮಾನವ ಸರಪಳಿ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಿ – ಜಿಲ್ಲಾಧಿಕಾರಿ ಟಿ.ಭೂಬಾಲನ್
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೈಸರ್ಗಿಕ ಸಂಪನ್ಮೂಲ ಕಾಮಗಾರಿಗಳಾದ ಕೆರೆ ಅಭಿವೃದ್ಧಿ, ಹೂಳೆತ್ತುವುದು, ಅಮೃತ ಸರೋವರ ಕಾಮಗಾರಿಗಳು, ನಾಲಾ, ಹಳ್ಳದ ಹೂಳೆತ್ತುವುದು, ಕೃಷಿ ಹೊಂಡ, ಬದು ನಿರ್ಮಾಣ, ಅರಣ್ಯ ಇಲಾಖೆಯಡಿ ನೆಡುತೋಪು ನಿರ್ಮಾಣ, ತೋಟಗಾರಿಕೆ ಕಾಮಗಾರಿಗಳು, ಕೃಷಿ ಇಲಾಖೆ ಕಾಮಗಾರಿಗಳ ಅನುಷ್ಟಾನ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.
ಜಲಾನಯನ ಕಾಮಗಾರಿಗಳನ್ನು ಕಾಲ-ಕಾಲಕ್ಕೆ ಜಿಯೋ ಟ್ಯಾಗ್ ಮಾಡುವುದು, ಜಲ ಶಕ್ತಿ ಅಭಿಯಾನದ ಅಡಿಯಲ್ಲಿ (ಜೆಎಸ್‍ಎ) ಅನುಷ್ಟಾನಗೊಳಿಸುವ ಕಾಮಗಾರಿಗಳನ್ನು ಹಾಗೂ ಮುಕ್ತಾಯಗೊಂಡ ಕಾಮಗಾರಿಗಳನ್ನು ಕಡ್ಡಾಯವಾಗಿ ಜಲ ಶಕ್ತಿ ಅಭಿಯಾನ (ಜೆಎಸ್‍ಎ)ದ ತಂತ್ರಾಂಶದಲ್ಲಿ ಜಿಯೋಟ್ಯಾಗ್ ಮಾಡಬೇಕು. ಜಲ ಸಂರಕ್ಷಣೆ, ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರ ಜಲಮೂಲಗಳು, ಕುಡಿಯುವ ನೀರಿನ ಮೂಲಗಳು, ಕೆರೆಗಳ ನವೀಕರಣ, ಜಲಾನಯನ ಪ್ರದೇಶ ಅಭಿವೃದ್ಧಿ, ಅರಣ್ಯೀಕರಣ, ತ್ಯಾಜ್ಯ ನೀರಿನ ಮರುಬಳಕೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಇದನ್ನೂ ಓದಿ: A S Patil College : ಅನುವಾದ ಸಂಪದʼ – ವಿಚಾರ ಸಂಕಿರಣ ಮತ್ತು ಕಾರ್ಯಾಗಾರ
ನಿಯಮಿತವಾಗಿ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಕುಡಿಯುವ ನೀರಿನ ಗುಣಮಟ್ಟದ ಪರಿಶೀಲನೆ ನಡೆಸಬೇಕು. ಅಂತರ್ಜಲ ಮಟ್ಟ ಹೆಚ್ಚಿಸುವ ಕಾಮಗಾರಿಗಳಾದ ಮಳೆನೀರು ಕೊಯ್ಲು ಘಟಕ, ಬೋರ್‍ವೆಲ್ ಮರುಪೂರಣ ಘಟಕ ಹಾಗೂ ವಿವಿಧ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಹಾಗೂ ನಿಯಮಾನುಸಾರ ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಜಿಲ್ಲಾ ಪಂಚಾಯತಿಯ ಆವರಣದಲ್ಲಿರುವ ಜಲ ಶಕ್ತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಲ ಶಕ್ತಿ ಕೇಂದ್ರದ ವ್ಯವಸ್ಥೆ ಮತ್ತು ನಿರ್ವಹಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ: TPJP Satyagraha: 10 ವರ್ಷಗಳು ಗತಿಸಿದರು ಯಾವುದೇ ಸರ್ಕಾರ ಗಮನ ಹರಿಸುತ್ತಿಲ್ಲ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ, ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳಾದ ಡಾ. ವಿಜಯ ಕುಮಾರ ಆಜೂರ ಹಾಗೂ ಜಿಲ್ಲೆಯ ಎಲ್ಲ ಅನುಷ್ಟಾನ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.





