Vijayapura News | ಮಹಿಳಾ ವಿವಿಯಲ್ಲಿ ರಾಷ್ಟ್ರೀಯ ಶಿಕ್ಷಣ ದಿನ

National Education Day image

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮೌಲಾನಾ ಅಜಾದ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಮೌಲಾನಾ ಅಜಾದ ಅವರ ಜನ್ಮ ದಿನದ ಪ್ರಯುಕ್ತ ‘ರಾಷ್ಟ್ರೀಯ ಶಿಕ್ಷಣ ದಿನ’ National Education Day ಕಾರ್ಯಕ್ರಮ ಇದೇ ದಿ.11 ರಂದು ಮಧ್ಯಾಹ್ನ 3.00 ಗಂಟೆಗೆ ವಿವಿಯ ಡಾ.ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಜರುಗಲಿದೆ.

ಇದನ್ನೂ ಓದಿ: Vijayapura News | ರಾಜ್ಯಮಟ್ಟದ ವಾಲ್ಮೀಕಿ ಸೇವಾ ರತ್ನ ಪ್ರಶಸ್ತಿಗೆ  ಸಂಜೀವಕುಮಾರ ನಾಯ್ಕೋಡಿ

National Education Day ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಸುರೇಶ ಸಮ್ಮಸಗಿ ಭಾಗವಹಿಸಲಿದ್ದು, ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚAದ್ರಶೇಖರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲ ವಹಿಸಲಿದ್ದಾರೆ ಎಂದು ಮೌಲಾನಾ ಅಜಾದ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಗುಲಾಬ ರಾಠೋಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »