ವಿಜಯಪುರ: 2026-27ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್ ಲೈನ್ online scholarship application ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಇಲಾಖೆಯ ವೆಬ್ಸೈಟ್ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. (ವೆಬ್ ಸೈಟ್ https://swd.karnataka.gov.in ), ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಹಾರ್ಡ್ ಕಾಪಿ ಕಚೇರಿಗೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮೆಟ್ರಿಕ್ ನಂತರದ ಪ್ರೋತ್ಸಾಹಧನದ ಅರ್ಜಿಯ ಒಂದು ಪ್ರತಿಯನ್ನು ನೇರವಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ವಿಜಯಪುರ. ಇವರ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.








