ಸಾರ್ವಜನಿಕರು ಮೋಸ ಹೋಗದೇ ಜಾಗೃತಿ ವಹಿಸುವಂತೆ ಮನವಿ

Public awareness image

ವಿಜಯಪುರ: ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24,000 ರೂ. ಸ್ಕಾಲರ್ಶಿಪ್ ಸೌಲಭ್ಯವಿದ್ದು, ಜನಸಾಮಾನ್ಯರಿಗೆ ಈ ವಿಚಾರ ತಿಳಿದೇ ಇಲ್ಲ. Public awareness ಆದ್ದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಕ್ಕಳಿದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳ ಮುಖಾಂತರ ಹರಿದಾಡುತ್ತಿದೆ.

ಈ ವ್ಯಾಟ್ಸಾಫ್ ಸಂದೇಶ ಜನರನ್ನು ಗೊಂದಲಕ್ಕೀಡು ಮಾಡಿದ್ದು, ಈ ತಪ್ಪು ಸಂದೇಶ ನೋಡಿದ ಜನರು ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಕ್ಕಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಸೇರಿ ಎಲ್ಲಾ ಕಡೆ ಜನ ಅಲೆದಾಡುತ್ತಿದ್ದಾರೆ. ಮಕ್ಕಳ ರಕ್ಷಣಾ ಕಚೇರಿಯಲ್ಲಿ ಪ್ರತಿ ದಿನ ನೂರಾರು ಜನ ಬಂದು ವಿಚಾರಿಸುತ್ತಿರುವುದು ಮತ್ತು ಅನೇಕರು ಪೋನ್ ಕರೆ ಮಾಡಿ ವಿಚಾರಿಸುತ್ತಿದ್ದಾರೆ. ಆದ್ದರಿಂದ, ಸಾರ್ವಜನಿಕರು ಇಂತಹ ಸಂದೇಶಗಳಿಗೆ ಮೋಸ ಹೋಗಬಾರದು.

ಇದನ್ನೂ ಓದಿ: Clear Unauthorized Carriers | ಖಾಸಗಿ ವಾಹನಗಳ ಅನಧಿಕೃತ ಕ್ಯಾರಿಯರ್‍ಗಳನ್ನು ತೆರವುಗೊಳಿಸಲು ಆಗ್ರಹ ಕ್ಯಾರಿಯರ್ ಮೇಲೆ ಸರಕು ಸಾಗಾಣೆ, ಪ್ರಯಾಣಿಕರ ಜೀವಕ್ಕೆ ಬೆಲೆ ಇಲ್ಲವೇ?

ಪ್ರಾಯೋಜಕತ್ವ ಯೋಜನೆ : ಪ್ರಾಯೋಜಕತ್ವ ಯೋಜನೆಯಡಿ ಮಕ್ಕಳನ್ನು ಕುಟುಂಬದ ವಾತಾವರಣದಲ್ಲಿ ಬೆಳೆಯುವಂತೆ ಬೆಂಬಲ ನೀಡುವುದು ಪ್ರಾಯೋಜಕತ್ವ ಯೋಜನೆ ಮುಖ್ಯ ಉದ್ಧೇಶವಾಗಿದೆ. ಈ ಯೋಜನೆಯ ಮಾನದಂಡಗಳಂತೆ ಬಾಲಮಂದಿರ, ವೀಕ್ಷಣಾಲಯಗಳಿಂದ ಕುಟುಂಬಗಳಿಗೆ ಮರಳಿದ ಮಕ್ಕಳು, ಪೋಕ್ಷೋ ಸಂಸತ್ರಸ್ತ ಮಕ್ಕಳು,

ತಾಯಿ ವಿಧವೆ ಅಥವಾ ವಿಚ್ಛೇದಿತ ಅಥವಾ ಪರಿತ್ಯಕ್ತಳಾಗಿದ್ದರೆ, ಮಕ್ಕಳು ಅನಾಥರಾಗಿದ್ದರೆ ಮತ್ತು ವಿಸ್ತೃತ ಕುಟುಂಬದಿಮದ ಜೀವಿಸುತ್ತಿದ್ದರೆ, ಪೋಷಕರು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದಲ್ಲಿ, ತಮ್ಮ ಮಕ್ಕಳನ್ನು ಪೋಷಕರು ನೋಡಿಕೊಳ್ಳಲು ದೈಹಿಕವಾಗಿ ಹಾಗೂ ಆರ್ಥಿಕವಾಗಿ ಅಸಮರ್ಥರಾಗಿದ್ದರೆ,

Public awareness ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ಪೋಷಣೆ) ಕಾಯ್ದೆ 2015ರ ಪ್ರಕಾರ ಪಾಲನೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳು ಅಂದರೆ ಮನೆ ಇಲ್ಲದೇ, ನೈಸರ್ಗಿಕ ವಿಕೋಪಕ್ಕೆ ಒಳಗಾದವರು, ಬಾಲಕಾರ್ಮಿಕರು, ಬಾಲ್ಯವಿವಾಹ ಸಂತ್ರಸ್ತ ಮಕ್ಕಳು, ಕಳ್ಳ ಸಾಗಾಣೆಗೊಳಗಾದ ಮಕ್ಕಳು, ಎಚ್‍ಐವಿ/ಏಡ್ಸ್ ಬಾಧಿತ (ಪೀಡಿತ) ಮಕ್ಕಳು, ದೈಹಿಕ ಅಂಗವಿಕಲತೆಯುಳ್ಳ ಮಕ್ಕಳು,

ಇದನ್ನೂ ಒದಿ: “ಬ್ಯಾಂಕ್ ಜನ ಜಾಗೃತಿ ಕಾರ್ಯಕ್ರಮ: ಹಣಕಾಸು ಶಿಕ್ಷಣ ಮತ್ತು ಸೇವೆಗಳ ಕುರಿತು ಮಾಹಿತಿ”

ಕಾಣೆಯಾದ ಅಥವಾ ಓಡಿಹೋದ ಮಕ್ಕಳು, ಬಾಲ ಭಿಕ್ಷುಕರು ಅಥವಾ ಬೀದಿಬದಿ ಮಕ್ಕಳು, ಚಿತ್ರಹಿಂಸೆ ಅಥವಾ ನಿಂದನೆ ಅಥವಾ ಬೆಂಬಲ ಮತ್ತು ಪುನರ್ವಸತಿ ಅಗತ್ಯವಿರುವ ಶೋಷಿತ ಮಕ್ಕಳು, ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯ ಅನುಮೋದಿತ ಮಕ್ಕಳು ಸಹ ಈ ಪ್ರಾಯೋಜಕತ್ವ ಯೋಜನೆಗೆ ಅರ್ಹರಾಗಿದ್ದಾರೆ.

ಈ ಯೋಜನೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಾರ್ಯಾಲಯ, ವಿವೇಕ ನಗರ ಪಶ್ಚಿಮ, ವಿಜಯಪುರ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 

Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »