ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

Strike in Vijayapura image
ವಿಜಯಪುರ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಪ್ಪು ಬಟ್ಟೆ ಪ್ರದರ್ಶಿಸಿ  ಅನಿರ್ದಿಷ್ಟಾವಧಿ ಮುಷ್ಕರ Strike in Vijayapura ಜಿಲ್ಲಾಧಿಕಾರಿಗಳ ಆವರಣದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಅಧ್ಯಕ್ಷರಾದ ಗಂಗಾಧರ ಜೂಲಗುಡ್ಡ ಮಾತನಾಡಿ ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯುವವ ಕೆ.ಸಿ.ಎಸ್.ಆರ್ ನಿಯಮಾವಳಿಗಳಂತೆ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕದಿರಲು, ಹಾಗೂ ಮೆಮೋ ಹಾಕುವ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ ಸೂಕ್ತ ಆದೇಶ ನೀಡುವದು ಕರ್ನಾಟಕ ಉಚ್ಚನ್ಯಾಯಾಲಯದ ರಿಟ್ ಪಿಟಿಷನ್ ಸಂಖ್ಯೆ: 329/23 ರ ಅಂತಿಮ ತೀರ್ಪಿಗೆ ಒಳಪಡಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರ.ದ.ಸ/ರಾ.ನಿ ಹುದ್ದೆಗಳಿಗೆ ತಕ್ಷಣವೇ ಪದೊನ್ನತಿ ನೀಡುವುದು.
ಇದನ್ನೂ ಓದಿ: ಎಸ್.ಎಸ್.ಮಾಧ್ಯಮಿಕ ʼಬʼ ವಿದ್ಯಾರ್ಥಿನಿಯರ ಥ್ರೋಬಾಲ್‌ ಜಿಲ್ಲಾ ಮಟ್ಟಕ್ಕೆ ಆಯ್ಕೆ
Strike in Vijayapura ಅಂತರ್ ಜಿಲ್ಲಾ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆಯ ಚಾಲನೆ ನೀಡಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ನೀಡುವದು ಅಂತರ್ ಜಿಲ್ಲಾ ವರ್ಗಾವಣೆಯ ಕೆ.ಸಿ.ಎಸ್.ಆರ್ ನಿಯಮ ಉಪಖಂಡ(2)ನ್ನು ಮರುಸ್ಥಾಪಿಸುವದು.  ಕೆಲವು ವಿಶೇಷ ಚೇತನ, ತೀವ್ರ ಅನಿವಾರ್ಯ ಹಾಗೂ ಆರೋಗ್ಯದ ಸಮಸ್ಯೆ ಇರುವ ಪ್ರಕರಣಗಳ ನಿಯೋಜನೆಗಳನ್ನು ಕೌನ್ಸಿಲಿಂಗ್ ಮೂಲಕ ನಿಯೋಜನೆ ಆದೇಶಗಳನ್ನು ಮಾಡುವದು.
ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಪದೋನ್ನತಿಯಲ್ಲಿ ವಂಚಿತರಾಗಿ ಸು30 ವರ್ಷಗಳ ನಿವೃತ್ತಿ ಮೇಲ್ಪಟ್ಟು ಪದೋನ್ನತಿಯನ್ನು ಅಂಚಿನಲ್ಲಿ ಪಡೆಯುತ್ತಿರುವುದರಿಂದ, ರಾಜ್ಯಾದಲ್ಲಿನ 1196 ಗ್ರೇಡ್-1 ಗ್ರಾಮ ಪಂಚಾಯತ್ ಹಾಗೂ 304 ಕಸಬಾ ಹೋಬಳಿ ವೃತ್ತಗಳನ್ನು “ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ” ಹುದ್ದೆಯನ್ನಾಗಿ ಮೇಲ್ದರ್ಜೆಗೇರಿಸಿ ರಾಜಸ್ವ ನಿರೀಕ್ಷಕರು/ಪ್ರಥಮ ದರ್ಜೆ ಸಹಾಯಕರು/ ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಪರೀಷ್ಕರಿಸಿ ಮೇಲ್ದರ್ಜೆಗೇರಿಸಿ ಪದೋನ್ನತಿಯನ್ನು ನೀಡಬೇಕು ಎಂದರು.
ಇದನ್ನೂ ಓದಿ:ವಿಜಯಪುರ ಜಿಲ್ಲೆಯ ನಿರುದ್ಯೋಗ ಯುವಕ/ಯುವತಿಯರಿಗೆ ಅಕ್ಟೋಬರ್‌ 4ರಂದು ಉದ್ಯೋಗಮೇಳ
  ಜಿಲ್ಲಾ ನೌಕರರ ಕಂದಾಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಜಿ.ಎಸ್. ರಾಜಾಪೂರ ಮಾತನಾಡಿ ಕೆಲಸದ ಅವಧಿಯ ಮುನ್ನ ಹಾಗೂ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ಬಗೆಯ ವರ್ಚುವಲ್ ಸಭೆಗಳನ್ನು ಕಡ್ಡಾಯವಾಗಿ ನಿಷೇಧಿಸುವದು. ಆಹಾರ ಇಲಾಖೆಯ ಕೆಲಸಗಳನ್ನು ಕಂದಾಯ ಇಲಾಖೆಗೆ ನಿರ್ವಹಿಸಲು ಆದೇಶಿಸುತ್ತಿರುವುದರಿಂದ ಈ ಹಿಂದಿನಂತೆ ಆಹಾರ ಇಲಾಖೆಯ ಆಹಾರ ನಿರೀಕ್ಷಕರು ಹುದ್ದೆಗೆ ಪದೋನ್ನತಿಯನ್ನು ನೀಡುವದು ಕಂದಾಯ ಇಲಾಖೆಯ 3ವರ್ಷಗಳ ಸೇವೆಯನ್ನು ಪರಿಗಣಿಸಿ ಅಂತರ್ ಜಿಲ್ಲಾ ವರ್ಗಾವಣೆಗಾಗಿ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿಯನ್ನು ರಚಿಸುವದು.
ಇದನ್ನೂ ಓದಿ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಗೋಳಗುಮ್ಮಟ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ
ಮಾತೃ ಇಲಾಖೆಯ ಎಲ್ಲಾ ಕೆಲಸಗಳೊಂದಿಗೆ ಸರ್ಕಾರದ ಆದೇಶದಂತೆ ಇತರೆ ಇಲಾಖೆಗಳ ಹಲವಾರು ಕೆಲಸಗಳನ್ನು ನಿರ್ವಹಿಸುವ ಹಾಗೂ ಚುನಾವಣೆ. ಅತಿವೃಷ್ಟಿ, ಅನಾವೃಷ್ಟಿ, ಇನ್ನಿತರ ಗುರುತರವಾದ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸುತ್ತಿರುವ ನಮಗೆ ದಿನನಿತ್ಯ ಸಾರ್ವಜನಿಕ ವಲಯದಲ್ಲಿ ನೂರಾರು ಸೇವೆಗಳನ್ನು ನೀಡುವಾಗ ಮಾರಣಾಂತಿಕ ದೈಹಿಕ ಹಲ್ಲೆ, ಕೊಲೆ ಪ್ರಕರಣಗಳು ಈಗಾಗಲೇ ನಿರಂತರವಾಗಿ ನಡೆಯುತ್ತಿದ್ದು, ಅರಣ್ಯ ಇಲಾಖೆ ಹಾಗೂ ಪೋಲಿಸ್ ಇಲಾಖೆಯಲ್ಲಿರುವಂತೆ 3000/- ರೂಗಳನ್ನು ಆಪತ್ತಿನ ಭತ್ಯೆ (ರಿಸ್ಕ್ ಅಲೊಯನ್ಸ್) ನೀಡುವದು.
ಆಯುಕ್ತಾಲಯದ ಅಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಟತೆಯನ್ನು ರಾಜ್ಯ ಮಟ್ಟದ ಜೇಷ್ಟತೆಯನ್ನಾಗಿ ಪರಿಗಣಿಸುವ ಬಗ್ಗೆ, • ಪ್ರಯಾಣ ಭತ್ಯೆ ದರವನ್ನು 500/- ರೂಗಳಿಂದ 3000/- ರೂಗಳಿಗೆ ಹೆಚ್ಚುವರಿ ಮಾಡುವದು  ಮನೆ ಹಾನಿ ಪ್ರಕರಣಗಳ ಜವಾಬ್ದಾರಿಯಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈಬಿಡುವದು..• ಪ್ರೋಟೋಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೈಬಿಡುವಂತೆ ಸೂಕ್ತ ಆದೇಶ ನೀಡುವದುದಪ್ತರ್ ಹಾಗೂ ಜಮಾಬಂದಿಯನ್ನು ರದ್ದುಪಡಿಸುವದು. ಅನ್ಯ ಇಲಾಖೆಯ ಕೆಲಸ ನಿರ್ವಹಿಸದಂತೆ ಸೂಕ್ತ ಆದೇಶ ನೀಡುಬೇಕು ಎಂದರು.
ಇದನ್ನೂ ಓದಿ: ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ಡಿಸೆಂಬರ್ 14 ರಿಂದ 18ರ ವರೆಗೆ ಪ್ರಥಮ ಕಿತ್ತೂರು ಕರ್ನಾಟಕ ಜಾಂಬುರೇಟ್
ಈ ಸಂದರ್ಭದಲ್ಲಿ ಸುರೇಶ ಶೇಡಶ್ಯಾಳ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು, ಜುಬೇರ ಕೆರೂರ ಖಜಾಂಚಿಗಳು, ನಜೀರ ಇನಾಮದಾರ ಗ್ರಾಮ ಸಹಾಯ ಸಂಘದ ಜಿಲ್ಲಾಧ್ಯಕ್ಷರು, ಜಿ.ಪಿ. ಡೊಂಬಳೆ ಪ್ರಧಾನ ಕಾರ್ಯದರ್ಶಿ, ಸಚ್ಚಿದಾನಂದ ತೇರದಾಳ ಗೌರವ ಅಧ್ಯಕ್ಷರು, ರಿಯಾಜ ನಾಯ್ಕೋಡಿ ಪ್ರಧಾನ ಕಾರ್ಯದರ್ಶಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು ಕಂದಾಯ ನೌಕರರ ಸಂಘದ ಎಲ್ಲ ಅಧ್ಯಕ್ಷರುಗಳು ಗ್ರಮ ಸಹಾಯಕ ಸಂಘದ ಎಲ್ಲ ಅದ್ಯಕ್ಷರು ಜಿಲ್ಲೆಯ ಸಮಸ್ತ ಗ್ರಾಮ ಆಡಳಿತ ಅಧಿಕಾರಿಗಳು ಸಮಸ್ತ ಗ್ರಾಮ ನೌಕರರು ಜಿಲ್ಲಾ ಸಮಸ್ತ ಗ್ರಾಮ ಸಹಾಯಕರು ಉಪಸ್ಥಿತರಿದ್ದರು.


Share the Post:

ಇತ್ತೀಚಿನ ಸುದ್ದಿಗಳು