ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನಕ್ಕೆ ಚಾಲನೆ | ಪ್ರತಿಜ್ಞಾವಿಧಿ ಬೋಧನೆ ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿ : ಸಂಸದ ಪಿ.ಸಿ.ಗದ್ದಿಗೌಡರ

Swachhta Hee Seva Special Movement launched image
ಬಾಗಲಕೋಟೆ : ಪರಿಸರ ಸ್ವಚ್ಛವಾಗಿದ್ದರೆ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತಿದ್ದು, Swachhta Hee Seva Special Movement launched ಸ್ವಚ್ಛತೆ ಕಾರ್ಯಕ್ಕೆ ಎಲ್ಲರೂ ಕೈಜೋಡಿಸುವ ಅಗತ್ಯವಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.

Swachhta Hee Seva Special Movement launched image
ಐಹೊಳೆ ಸ್ಮಾರಕಗಳ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡ ಸೆಪ್ಟೆಂಬರ 17 ರಿಂದ ಅಕ್ಟೋಬರ 2 ವರೆಗೆ ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಈ ಪಾಕ್ಷಿಕ ಆಂದೋಲನವನ್ನು ಹಮ್ಮಿಕೊಂಡಿದೆ. ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ನಮ್ಮ ದೇಶ ಸ್ವಚ್ಚ ಹಾಗೂ ಸುಂದರವಾಗಿಡಲು ಸಾಧ್ಯವೆಂದರು.
ಇದನ್ನೂ ಓದಿ: ಬಿಜೆಪಿಯಿಂದ ವಿಶ್ವಕರ್ಮ ಜಯಂತಿ ಆಚರಣೆ ಸೃಷ್ಟಿ ನಿರ್ಮಾದ ಕತೃ, ಸಕಲಕರ್ಮಗಳ ಒಡೆಯನೇ ವಿಶ್ವಕರ್ಮ: ಡಾ.ವೀರಣ್ಣ ಚರಂತಿಮಠ
ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಕಳೆದ 2014 ರಿಂದ 10 ವರ್ಷಗಳ ಕಾಲ ಸ್ವಚ್ಛತಾ ಅಭಿಯಾನ ಕಾರ್ಯನಡೆಸಿದ್ದಾರೆ. ಈ ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಸ್ವಚ್ಛತಾ ಹೀ ಸೇವಾ ಅಭಿಯಾನವನ್ನು ಸ್ವಭಾವ್ ಸ್ವಚ್ಛತಾ ಸಂಸ್ಕಾರ ಎಂಬ ಧ್ಯೆಯದೊಂದಿಗೆ ಆಚರಿಸಲಾಗುತ್ತಿದೆ. ಈ ಆಂದೋಲನದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದರು.
ಪ್ರಕೃತಿ ರಕ್ಷಣೆ ಮಾಡಿದರೆ, ಅದು ನಮ್ಮನ್ನು ರಕ್ಷಣೆ ಮಾಡುತ್ತದೆ ಎಂಬ ಕಲ್ಪಣೆ ನಮ್ಮಲ್ಲಿ ಬರಬೇಕು. ತ್ಯಾಜ್ಯ ಆಗದಂತೆ ಮುಂಜಾಗ್ರತಾ ವಹಿಸಬೇಕಿದೆ. ಪೇಪರ ಮತ್ತು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿದಲ್ಲಿ ತ್ಯಾಜ್ಯ ಕಡಿಮೆ ಆಗುತ್ತದೆ ಎಂಬ ಕಲ್ಪನೆಯ ಮೂಲಕ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಪರಿಸರ ಸ್ವಚ್ಛಗೊಳಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಈ ಅಭಿಯಾನ ನಡೆಸಲಾಗುತ್ತಿದೆ. ಆದ್ದರಿಂದ ಗಾಂಧೀಜಿಯವರ ಕನಸು, ಪ್ರಧಾನಮಂತ್ರಿ ಮೋದಿಯವರ ಕಲ್ಪನೆಯನ್ನು ಎಲ್ಲರೂ ಸಾಕಾರಗೊಳಿಸೋಣ ಎಂದರು.
Swachhta Hee Seva Special Movement launched ಸ್ವಚ್ಛತೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ಸ್ವಚ್ಛತೆ ಎಂದರೆ ಆರೋಗ್ಯ. ಆರೋಗ್ಯವಂತ ಬದುಕಿಗೆ ಸ್ವಚ್ಛತೆಯ ಪರಿಕಲ್ಪನೆ ತುಂಬ ಅವಶ್ಯಕತೆ ಇದೆ. ಸ್ವಾತಂತ್ರ ಪೂರ್ವದಿಂದ ನಮ್ಮ ದೇಶದ ರಾಷ್ಟ್ರಪಿತ ಗಾಂಧೀಜಿ ಅವರು ತಮ್ಮ ಜೀವನ ವಿಧಾನದಲ್ಲೇ ಸ್ವಚ್ಛತೆ ಪರಿಪಾಲನೆ, ತಾವೇ ಸ್ವಚ್ಛತಾ ಸೈನಿಕರಾಗಿ ಕೆಲಸ ಮಾಡಿದ್ದಾರೆ. ಅವರ ಈ ಆದರ್ಶ ಮಕ್ಕಳಲ್ಲಿ ಬರಬೇಕಿದೆ. ಸ್ವಚ್ಛತೆ ಮಾಡುವುದು ಕಡಿಮೆ ಮಟ್ಟದ ಕೆಲಸ ಅಲ್ಲ. ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ನಮ್ಮ ಕಸ ನಿರ್ವಹಣೆಗೆ ನಾವೇ ಹೊಣೆಗಾರರು ಎಂಬ ಪ್ರಜ್ಞೆ ನಮ್ಮಲ್ಲಿ ಬರಬೇಕು. ವರ್ಷದ ಪ್ರತಿ ದಿನವೂ ನಡೆಯುವ ಕೆಲಸವಾಗಿದ್ದು, ಈ ಒಂದು ಪಾಕ್ಷಿಕ ಆಂದೋಲನದಲ್ಲಿ ಸ್ವಚ್ಛತೆ ಅರಿವು ಮೂಡಿಸಬೇಕಿದೆ. ಸ್ವಚ್ಛತೆ ಇದ್ದಲ್ಲಿ ಸೌಂದಂiÀರ್i, ಆರೋಗ್ಯ ಇರುತ್ತಿದ್ದು, ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ತಪಾಸಣೆಗೆ ಚಾಲನೆ ನೀಡಲಾಯಿತು. ಗಿಡಗಳನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಮುಖ್ಯ ಯೋಜನಾಧಿಕಾರಿ ಪುನಿತ್, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ತಹಶೀಲ್ದಾರ ನಿಂಗಪ್ಪ ಬಿರಾದಾರ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಿ.ಎಸ್.ಹಿತ್ತಲಮನಿ, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ಐಹೊಳೆ ಗ್ರಾ.ಪಂ ಅಧ್ಯಕ್ಷ ಹನಮಂತ ಆಡಿನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ: Lok Adalat | ಒಂದಾದ 10 ಜೋಡಿ | ಜಮೀನು ವಿವಾಧ ಇತ್ಯರ್ಥ ರಾಜೀ ಸಂಧಾನ : 27376 ಪ್ರಕರಣಗಳು ಇತ್ಯರ್ಥ

ತಾರಬಸವ ಗುಡಿ ಆವರಣದಲ್ಲಿ ಸ್ವಚ್ಛತಾ ಕಾರ್ಯ Swachhta Hee Seva Special Movement launched

ಐಹೊಳೆ ಐತಿಹಾಸಿಕ ತಾಣಗಳಲ್ಲಿ ಒಂದಾದ ತಾರಬಸವ ಗುಡಿಯ ಆವರಣವನ್ನು ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿ.ಪಂ ಸಿಇಓ ಶಶಿಧರ ಕುರೇರ, ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ತಹಶೀಲ್ದಾರ ನಿಂಗಪ್ಪ ಬಿರಾದಾರ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸೇರಿ ಸ್ವಚ್ಛತಾ ಕಾರ್ಯ ಕೈಗೊಂಡರು. ಅಲ್ಲದೇ ಗುಡಿಯ ಮುಂದೆ ಇರುವ ಕಲ್ಯಾಣ ಸ್ವಚ್ಛತೆ ಕ್ರಮವಹಿಸಲು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »