ವಿಜಯಪುರ: ಅಕ್ಕಮಹಾದೇವಿ ವಿವಿಯಲ್ಲಿ ಸೆಪ್ಟೆಂಬರ್ 19 ರಂದು 11ನೇ ಘಟಿಕೋತ್ಸವ -ಪ್ರಭಾರ ಕುಲಪತಿ ಪ್ರೊ.ಓಂಕಾರ ಕಾಕಡೆ

ವಿಜಯಪುರ ಸೆ.16: ‘ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 11ನೇ ಘಟಿಕೋತ್ಸವವು ಇದೇ ಸೆಪ್ಟೆಂಬರ್ 19ರಂದು ಬೆಳಿಗ್ಗೆ 11 ಗಂಟೆಗೆ ಜ್ಞಾನಶಕ್ತಿ ಆವರಣದ ಆಡಳಿತ ಭವನದ ಎದುರುಗಡೆ ನಿರ್ಮಿಸಿರುವ ಸಭಾಂಗಣದಲ್ಲಿ ನಡೆಯಲಿದೆ’ ಎಂದು ವಿವಿಯ ಪ್ರಭಾರ ಕುಲಪತಿ ಪ್ರೊ.ಓಂಕಾರ ಕಾಕಡೆ ಅವರು ತಿಳಿಸಿದ್ದಾರೆ. ನಗರದ ಅಕ್ಕಮಹಾದೇವಿ ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ನವದೆಹಲಿಯ ವಿಶ್ವವಿದ್ಯಾಲಯ ಅನುದಾನ ಆಯೋಗ ಸದಸ್ಯ ಪ್ರೊ.ಎಂ.ಕೆ.ಶ್ರೀಧರ್ ಅವರು ಆನ್ಲೈನ್ನಲ್ಲಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ’ […]