7ನೇ ವೇತನ ಆಯೋಗ ಶೀಘ್ರ ಜಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಬಜೆಟ್ ನಲ್ಲಿಯೇ 6 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹೆಚ್ಚುವರಿ ಹಣ ಅವಶ್ಯವಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಒದಗಿಸಲಾಗುವುದು ಎಂದು ವರದಿ ಶೀಘ್ರ ಬರಲಿದ್ದು, ಅದರನುಸಾರ ಕ್ರಮವಹಿಸಲಾಗುವುದು ಎಂದ ಮುಖ್ಯಮಂತ್ರಿಗಳು, 2023-24ನೇ ಸಾಲಿನಲ್ಲಿಯೇ […]