ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಶುಭ ಸುದ್ದಿ: ಶೀಘ್ರದಲ್ಲೇ ಶ್ರೀನಿವಾಸಾಚಾರಿ ವರದಿ ಅನುಷ್ಠಾನ

ಆರೋಗ್ಯ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಯ ಬೇಡಿಕೆ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ವರದಿ ಮಾಡಲು ರಾಜ್ಯ ಸರ್ಕಾರ ಮಾಜಿ ಐಎಎಸ್ ಅಧಿಕಾರಿ ಶ್ರೀನಿವಾಸಾಚಾರಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ವರದಿಯ ಕೆಲವು ಸಲಹೆಗಳನ್ನು ಶೀಘ್ರದಲ್ಲಿಯೇ ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಿನ್ನೆ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀನಿವಾಸಾಚಾರಿ ವರದಿ ಜಾರಿ ಕುರಿತು ಆರೋಗ್ಯ ಇಲಾಖೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷರಾದ ಪರಿಷತ್ ಸದಸ್ಯ ಆಯನೂರು ಮಂಜುನಾಥ್ […]