ವಿಜಯಪುರ: ಬಂಕಿಮ್ ಚಂದ್ರ ಚಟರ್ಜಿ ಅವರು ರಚಿಸಿದ ‘ವಂದೇ ಮಾತರಂ’ ಗೀತೆಗೆ 150 ವರ್ಷ (Vande Mataram 150 Years) ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ (ನೋಂ), ವಿಜಯಪುರ ಜಿಲ್ಲಾ ಸಮಿತಿಯ ವತಿಯಿಂದ ನವೆಂಬರ್ 21ರಂದು ವಂದೇ ಮಾತರಂ ಗೀತಗಾಯನ ಹಾಗೂ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಗರದ ಚೇತನಾ ಮಹಾವಿದ್ಯಾಲಯದಲ್ಲಿ ಶನಿವಾರ ಸಂಜೆ 5.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಖ್ಯಾತ ವಾಗ್ಮಿ ಅಶೋಕ ಹಂಚಲಿ ಅವರು ವಂದೇ ಮಾತರಂ ಗೀತೆಯ ಕುರಿತು ಉಪನ್ಯಾಸ ನೀಡಲಿದ್ದಾರೆ. ವೈದ್ಯರು ಹಾಗೂ ಸಮಾಜ ಸೇವಕರಾದ ಡಾ. ಅಜೇಯ ಕುಲಕರ್ಣಿ ಅವರು ವಂದೇ ಮಾತರಂ ಗೀತೆಯನ್ನು ಹಾಡಲಿದ್ದಾರೆ.
ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವಿಜಯಪುರ ಜಿಲ್ಲಾ ಸಮಿತಿ ಅಧ್ಯಕ್ಷ ವಿವೇಕ ಕುಲಕರ್ಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ವಿವೇಕ ಕುಲಕರ್ಣಿ (9880050818), ಸುಕಾಂತ (8105473275) ಹಾಗೂ ಅನಿಲ ಬಳುಂಡಗಿ (9535792295) ಅವರನ್ನು ಸಂಪರ್ಕಿಸಲು ಕೋರಲಾಗಿದೆ.






