Vijayapura: 3 ದಿನದಲ್ಲಿ ಸಮೀಕ್ಷೆ ವರದಿ: ಡಿಸಿ ಸೂಚನೆ

Vijayapura image
ವಿಜಯಪುರ: ಇತ್ತೀಚಿಗೆ ಬೀಸಿದ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು ಮೂರು ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು. (Vijayapura)
ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಬೆಳೆ ವಿಮಾ ಕಂಪನಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ರಚಿಸಿ ಹಾನಿಗೊಳಗಾದ ಕ್ಷೇತ್ರಗಳಿಗೆ ಭೇಟಿ ನೀಡಿ ನಿಖರವಾದ ಸಮೀಕ್ಷೆ ಕೈಗೊಂಡು 3 ದಿನಗೊಳಗಾಗಿ ಜಂಟಿ ಸಮೀಕ್ಷೆ ನಡೆಸಿ ವರದಿಯನ್ನು ನೀಡಬೇಕು ಎಂದು ಸೂಚಿಸಿದರು.
ಇತ್ತೀಚಿನ ದಿನಗಳಲ್ಲಿ ಬಿದ್ದ ಮಳೆ, ಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ ಬೆಳೆ ಹಾನಿಗೊಳಗಾದ ರೈತರು ಬೆಳೆ ವಿಮೆ ಮಾಡಿಸಿದ್ದರೆ ಅಂತಹ ರೈತರು ಮುಂದಿನ 3 ದಿನಗೊಳಗಾಗಿ (ಮುಂದಿನ 72 ಗಂಟೆಗೂಳಗಾಗಿ) ಓರಿಯಂಟಲ್ ಜನರಲ್ ಇನ್ಸೂರನ್ಸ್ ಕಂಪನಿ Toll Free Number 1800 425 6678 ಗೆ ಕರೆ ಮಾಡಿ ವೈಯಕ್ತಿಕ ಸ್ಥಳ ನಿರ್ದಿಷ್ಟ ವಿಕೋಪಗಳ (Iಐಐಂ) ಕುರಿತು ದೂರು ದಾಖಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
2025-26 ನೇ ಸಾಲಿನ RWBCIS ಯೋಜನೆಯಡಿ ದ್ರಾಕ್ಷಿ, ದಾಳಿಂಬೆ ಹಾಗೂ ಲಿಂಬೆ ಬೆಳೆಗಳಿಗೆ ಆಲಿಕಲ್ಲು ಮಳೆಯಿಂದಾಗಿ ಬೆಳೆಹಾನಿ ಸಂಭವಿಸಿದ್ದಲ್ಲಿ, ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾಗೂ ಮಾಹಿತಿಯನ್ನು 72 ಗಂಟೆಗಳೊಳಗಾಗಿ ಅಗ್ರಿಕಲ್ಟರ್ ಇನ್ಸುರನ್ಸ್ ಕಂಪನಿ ಆಪ್ ಇಂಡಿಯಾ ಲಿ. ರವರಿಗೆ Toll Free Number 1800 425 0505 ಗೆ ಕರೆ ಮಾಡಿ ರೈತರು ಮಾಹಿತಿ ನೀಡಬಹುದಾಗಿದೆ ಎಂದರು.
ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ಎಲ್ಲಾ ಇಲಾಖಾ ಅಧಿಕಾರಿಗಳು 3 ದಿನಗಳೊಳಗಾಗಿ ಜಂಟಿ ಸಮೀಕ್ಷೆ ಕೈಗೊಂಡು ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
Share the Post:

ಇತ್ತೀಚಿನ ಸುದ್ದಿಗಳು