ವೀಕೆಂಡ್ ಕರ್ಪ್ಯೂ: ಮದ್ಯ ಮಾರಾಟವಾಗದಿದ್ದರೆ ದಿನಕ್ಕೆ 75 ಕೋಟಿ ನಷ್ಟ!!!

ಬೆಂಗಳೂರು: ವೀಕೆಂಡ್ ಕರ್ಪ್ಯೂ ವೇಳೆ ಮದ್ಯ ಮಾರಾಟಕ್ಕೆ ಅವಕಾಶ ಕೊಡದಿದ್ದರೆ ದಿನಕ್ಕೆ 75 ಕೋಟಿ ನಷ್ಟವಾಗುತ್ತದೆ. ಹೀಗಾಗಿ, ವೀಕೆಂಡ್ ಕರ್ಪೂ ವೇಳೆಯಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ವೀಕೆಂಡ್‌ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡಬಹುದಾಗಿದ್ದು, ಬೆಳಗಿನ ಅವಧಿಯಲ್ಲಿ ಮದ್ಯ ಮಾರಾಟ ಮಾಡಲು ಅವಕಾಶ ನೀಡಬಹುದು. ಹೀಗಾಗಿ ವೀಕೆಂಡ್‌ನಲ್ಲಿ ಕೆಲ ಸಮಯದವರೆಗೆ ಮದ್ಯ ಮಾರಾಟ ಮಾಡಲು ಅವಕಾಶ ನೀಡಬೇಕು ಎಂದು ಸಚಿವ ಗೋಪಾಲಯ್ಯ ಆಗ್ರಹಿಸಿದ್ದಾರೆ.


Share the Post:

ಇತ್ತೀಚಿನ ಸುದ್ದಿಗಳು